ಕೋವಿಡ್ ಹೆಸರಲ್ಲಿ ಹಣ ದೋಚುತ್ತಿದೆ ಬಿಜೆಪಿ

Team Udayavani, Aug 3, 2020, 1:24 PM IST

ಕೋವಿಡ್  ಹೆಸರಲ್ಲಿ  ಹಣ ದೋಚುತ್ತಿದೆ ಬಿಜೆಪಿ

ಸಿಂಧನೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಚರಿಸುತ್ತಿರುವುದು ವರ್ಷದ ಸಾಧನೆ ಅಲ್ಲ; ಅವರದ್ದು ಕೋವಿಡ್ ಹೆಸರಿನಲ್ಲಿ ಸತ್ತ ಹೆಣಗಳ ಮೇಲೆ ಹಣ ದೋಚುವ ಸಾಧನೆ ಎಂದು ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಗಂಭೀರವಾಗಿ ಆರೋಪಿಸಿದರು.

ನಗರದ ಯುವ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ರವಿವಾರ ಬಿಜೆಪಿ ಭ್ರಷ್ಟಾಚಾರದ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಹೆಸರಿನಲ್ಲಿ 2,200 ಕೋಟಿ ರೂ.ನಷ್ಟು ಮುಖ್ಯಮಂತ್ರಿಗಳು ಸೇರಿದಂತೆ ಕೆಲ ಸಚಿವರು ಲೂಟಿ ಮಾಡಿದ್ದಾರೆ. ಇಂಥವರ ವಿರುದ್ಧ ನಮ್ಮ ರಾಜ್ಯ ನಾಯಕರು ಪ್ರತಿಭಟಿಸುವ ಕೆಲಸ ಮಾಡುತ್ತಿದ್ದಾರೆ. ಮಾಸ್ಕ್, ಪಿಪಿಇ ಕಿಟ್‌ ಸೇರಿದಂತೆ ಇತರ ಅನೇಕ ವಸ್ತುಗಳಲ್ಲಿ ಹಗರಣವೆಸಗಿ ಜನರಿಗೆ ಮೋಸ ಮಾಡಿದ್ದಾರೆ. ಇವರು ತಮ್ಮ ಪಕ್ಷದ ಸಾಧನೆ ಹೇಳಲು ಹೊರಟಿಲ್ಲ ಬದಲಾಗಿ ಪಕ್ಷಕ್ಕೆ ಪ್ರಚಾರ ಗಿಟ್ಟಿಸಿಕೊಳ್ಳಲು ರಾಜ್ಯದಲ್ಲಿ ಈ ರೀತಿ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌ ಅವಕಾಶ ಕೊಡುವುದಿಲ್ಲ. ಅವರು ತಮ್ಮ ರಾಜಕೀಯಕ್ಕಾಗಿ ಏನೆಲ್ಲ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಈಗಾಗಲೇ ಎಳೆಎಳೆಯಾಗಿ ಬಿಚ್ಚಿಡುವ ಕೆಲಸ ಕೆಪಿಸಿಸಿ ಅಧ್ಯಕ್ಷರು, ಮಾಜಿ ಸಿಎಂ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು. ಆಯಾ ಜಿಲ್ಲಾ-ತಾಲೂಕು ಕೇಂದ್ರಗಳಲ್ಲಿ

ಕೋವಿಡ್ ಗೆ ಸಂಬಂಧಿ ಸಿದಂತೆ ಮಾಹಿತಿ ಸಂಗ್ರಹಿಸಲು ಪಕ್ಷದ ಕಾರ್ಯಕರ್ತರಲ್ಲಿ ಇಬ್ಬರನ್ನು ನೇಮಕ ಮಾಡಲಾಗಿದೆ. ಅವರಿಗೆ 2 ಲಕ್ಷ ರೂ. ಇನ್ಶೂರೆನ್ಸ್‌ ಹಾಗೂ ಸೌಲಭ್ಯ ಒದಗಿಸುವ ಕೆಲಸ ಆಯಾ ಸ್ಥಳೀಯ ನಾಯಕರೇ ಒಪ್ಪಿಕೊಂಡಿದ್ದಾರೆ ಎಂದರು ಕೆಪಿಸಿಸಿ ಕಾರ್ಯದರ್ಶಿ ಕೆ. ಕರಿಯಪ್ಪ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಚುನಾವಣೆಯಿಂದ ಮುಂದೆ ಬಂದಿಲ್ಲ. ಶಾಸಕರನ್ನು ಖರೀದಿಸಿ ಮುಂದೆ ಬಂದಿದೆ. ಬಿಜೆಪಿ ಸುಳ್ಳಿನ ಪಕ್ಷ ಎಂದು ಆರೋಪಿಸಿದರು.

ಈ ವೇಳೆ ಶಿವಕುಮಾರ ಜವಳಿ, ವೆಂಕಟೇಶ ರಾಗಲಪರ್ವಿ, ಖಾಜಾ ಹುಸೇನ್‌ ರೌಡಕುಂದ, ಚನ್ನಬಸವರಾಜ ಉಪ್ಪಳ, ದಾಕ್ಷಾಯಿಣಿ ಬಸನಗೌಡ, ಸುಜಾತಾ ಚನ್ನಬಸವಸ್ವಾಮಿ, ಪ್ರಭು ದೇವರಗುಡಿ, ಮಲ್ಲಯ್ಯ ನಾಯಕ ಗೋನವಾರ ಇದ್ದರು.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.