ಚಂದ್ರಾ ಮುತಾಲಿಕ ಅವರಿಗೆ ಡಾಕ್ಟರೇಟ್
Team Udayavani, Mar 3, 2017, 4:29 PM IST
ಮುಂಬಯಿ: ಕನ್ನಡ ವಿಭಾಗದ ಸಂಶೋಧನ ವಿದ್ಯಾರ್ಥಿನಿ ಚಂದ್ರಾ ಮುತಾಲಿಕ ಅವರ ಸಂಶೋಧನ ಮಹಾಪ್ರಬಂಧ ಕನ್ನಡ ದಾಸ ಸಾಹಿತ್ಯ ಹಾಗೂ ಮರಾಠಿ ಸಂತ ಸಾಹಿತ್ಯ-ಒಂದು ತೌಲನಿಕ ಅಧ್ಯಯನ ಮಹಾಪ್ರಬಂಧವನ್ನು ಮನ್ನಿಸಿ ಮುಂಬಯಿ ವಿಶ್ವವಿದ್ಯಾಲಯ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಡಾ| ಚಂದ್ರಾ ಮುತಾಲಿಕ ಅವರು ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಪ್ರಸ್ತುತಪಡಿಸಿದ್ದರು.
ಬಹುಭಾಷಿಕ ಸಂವೇದನೆಯನ್ನು ಮೈಗೂಡಿಸಿಕೊಂಡಿರುವ ಡಾ| ಚಂದ್ರಾ ಮುತಾಲಿಕ ದೇಸಾಯಿ ಅವರು ಮೂಲತ: ಬೆಳಗಾವಿಯವರು. ಮುಂಬಯಿ ವಿವಿ ಕನ್ನಡ ವಿಭಾಗದಿಂದ ಪ್ರಥಮ ದರ್ಜೆಯಲ್ಲಿ ಎಂಎ ಪದವಿಯನ್ನು ಪಡೆದ ಅವರು ಕನ್ನಡ ಹರಿದಾಸರ ಹಾಗೂ ಮರಾಠಿ ಸಂತರ ಸಾಮಾಜಿಕ ಚಿಂತನೆಗಳು ಎಂಬ ಎಂಫಿಲ್ ಸಂಪ್ರಂಧವನ್ನು ಡಾ| ಜಿ. ಎನ್. ಉಪಾಧ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದಾರೆ. ಈ ಎಂ. ಫಿಲ್. ಸಂಪ್ರಬಂಧ ಈಗಾಗಲೇ ಪ್ರಕಟಗೊಂಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ತಿರುಮಲ ತಿರುಪತಿಯ ಪುರಸ್ಕಾರಕ್ಕೆ ಪಾತ್ರವಾಗಿದೆ.
ನಾಟಕ ಹಾಗೂ ಸಂಗೀತದಲ್ಲಿ ಆಸಕ್ತಿಯನ್ನು ಹೊಂದಿರುವ ಅವರು ರಂಗನಿರ್ದೇಶಕ ಡಾ| ಭರತ್ ಕುಮಾರ್ ಪೊಲಿಪು ಅವರ ನಾಟಕಗಳಲ್ಲಿ ಪಾತ್ರವಹಿಸಿದ್ದಾರೆ. ಅವರ ಅನೇಕ ಲೇಖನಗಳು ನಾಡಿನ ವಿವಿಧ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ. ಪ್ರಸ್ತುತ ಮಹಾಪ್ರಬಂಧ ಉಭಯ ಭಾಷೆಗಳ ಭಾವ ಸಂಬಂಧ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ಇದು ಅನೇಕ ಒಳನೋಟಗಳಿಂದ ಕೂಡಿದ ಮಹಾಪ್ರಬಂಧ ಎಂದು ಪಿಎಚ್‌ಡಿ ಮೌಲ್ಯಮಾಪಕರು ಕೊಂಡಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.