ಸೊಲ್ಲಾಪುರ ಕನ್ನಡ ಸಾಹಿತ್ಯ ಸಮ್ಮೇಳನ:ಅಧ್ಯಕ್ಷರಾಗಿ ಡಾ|ಬಿ.ಬಿ.ಪೂಜಾರಿ


Team Udayavani, Jun 25, 2017, 4:18 PM IST

1-s.jpg

ಸೊಲ್ಲಾಪುರ: ಸೊಲ್ಲಾಪುರದಲ್ಲಿ ಜು. 8 ಮತ್ತು 9ರಂದು ಬೃಹತ್‌ ಮಟ್ಟದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾದ  ಡಾ| ಬಿ. ಬಿ. ಪೂಜಾರಿ ಇವರನ್ನು ಆದರ್ಶ ಕನ್ನಡ ಬಳಗವು ಜೂ. 24ರಂದು ಗೌರವಿಸಿ ಅಭಿನಂದನೆ ಸಲ್ಲಿಸಿತು.

ಸುಮಾರು 67 ವರ್ಷಗಳ ಹಿಂದೆ 1950ರಲ್ಲಿ ಸೊಲ್ಲಾಪುರದಲ್ಲಿ ಎಂ. ಆರ್‌. ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಡಾ| ಜಯದೇವಿ ತಾಯಿಲಿಗಾಡೆ, ರಾಜಶೇಖರ ಮಡಕಿ ಅವರ ನೇತೃತ್ವದಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿಜೃಂಭಣೆಯಿಂದ ಜರಗಿತ್ತು. 

ಡಾ| ಪೂಜಾರಿ ಅವರು ಸೊಲ್ಲಾಪುರದ ಸಂಗಮೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸುಮಾರು ಮೂರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದು ಹಲವಾರು ಕೃತಿಗಳನ್ನು ರಚಿಸುವುದರ ಮೂಲಕ ಕನ್ನಡ ಸಾಹಿತ್ಯ ಸೇವೆ ಕೈಗೊಂಡಿದ್ದಾರೆ. ಅಪಾರವಾದ ಶಿಷ್ಯವೃಂದ ಹೊಂದಿರುವ ಪೂಜಾರಿಯವರು ಹೊರನಾಡಿನಲ್ಲಿ ಕನ್ನಡದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಕನ್ನಡವನ್ನು ಉಳಿಸಿ ಬೆಳೆಸುವಲ್ಲಿ ಅಪಾರವಾಗಿ ಶ್ರಮಿಸಿದ್ದಾರೆ.

ಜು. 8 ಮತ್ತು 9ರಂದು ಸೊಲ್ಲಾಪುರದ ಹುತಾತ್ಮ ಸ್ಮೃತಿಮಂದಿರದಲ್ಲಿ ಜರಗಲಿರುವ ಈ ಸಮ್ಮೇಳನವನ್ನು ಯಶಸ್ವಿಗೊಳಿಸಲು ಡಾ| ಗುರುಲಿಂಗಪ್ಪ ಧಬಾಲೆ, ಡಾ| ಮಧುಮಾಲ ಲಿಗಾಡೆ, ಡಾ| ಗುರುಸಿದ್ದಯ್ಯ ಸ್ವಾಮಿ ಹಾಗೂ ಹಲವಾರು ಕನ್ನಡ ಪ್ರೇಮಿಗಳು ಶ್ರಮಿಸುತ್ತಿದ್ದಾರೆ. ಸಮ್ಮೇಳನಕ್ಕೆ ಶುಭಾಶಯ ಕೋರುತ್ತ ಆದರ್ಶ ಕನ್ನಡ ಬಳಗದ ಗೌರವಾಧ್ಯಕ್ಷ ಗಿರೀಶ ಜಕಾಪುರೆ ಹಾಗೂ ಅಧ್ಯಕ್ಷ ಮಲಿಕಜಾನ್‌ ಶೇಖ್‌ ಬಳಗದ ಪರ ಡಾ| ಬಿ. ಬಿ. ಪೂಜಾರಿಯವರಿಗೆ ಗೌರವ ಸಲ್ಲಿಸಿದರು.

ಸೊಲ್ಲಾಪುರ ಎಂದಿಗೂ ಕನ್ನಡದ ನೆಲ. ಇದಕ್ಕೆ ಕಾಯಕ ಯೋಗಿ ಸಿದ್ಧರಾಮನ ವಚನಗಳೇ ಸಾಕ್ಷಿ. ಈ ಪುಣ್ಯ ನೆಲದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿ ಯಾಗಿ ಆಯೋಜಿಸುವ ಮೂಲಕ ಹೊರನಾಡಿನಲ್ಲಿ ಕನ್ನಡದ ಕಹಳೆ ಬಾರಿಸಲು ಎಲ್ಲರೂ ಕೂಡಿ ಶ್ರಮಿಸಬೇಕು               
  – ಗಿರೀಶ ಜಕಾಪುರೆ   (ಯುವ ಸಾಹಿತಿ,ಮೈಂದರ್ಗಿ).

ಡಾ| ಪೂಜಾರಿ ಅವರು ಸೊಲ್ಲಾಪುರ ಭಾಗದಲ್ಲಿ ಮಾಡಿದ ಕನ್ನಡಪರ ಚಟುವಟಿಕೆಗಳು ಇಲ್ಲಿನ ಕನ್ನಡ ಹೋರಾಟಗಾರರಿಗೆ ಆದರ್ಶಪ್ರಾಯ. ಸಾಹಿತ್ಯ ಸಮ್ಮೇ ಳನದ ಅಧ್ಯಕ್ಷ ಸ್ಥಾನ ಅವರಿಗೆ ಸಂದಿದ್ದು, ಅವರಪ್ರಾಮಾಣಿಕ ಸೇವೆಗೆ ಸಿಕ್ಕಿರುವ ಫ‌ಲ. ಅವರ ಅಧ್ಯಕ್ಷ ಸ್ಥಾನದಲ್ಲಿ ಹೊರನಾಡಿನ ಕನ್ನಡಿಗರ ಸಮಸ್ಯೆಗಳು ಬಗೆಹರಿಯಲಿ                                           
-ಮಲಿಕಜಾನ್‌ ಶೇಖ್‌         

(ಅಧ್ಯಕ್ಷ: ಆದರ್ಶ ಕನ್ನಡ ಬಳಗ, ಮಹಾರಾಷ್ಟ್ರ).
 

ಟಾಪ್ ನ್ಯೂಸ್

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.