ಬೆಳಗಿತು ಬಾರಕೂರಿನ ಕತ್ತಲೆ ಬಸದಿ

Team Udayavani, Sep 27, 2017, 11:19 AM IST

27-Maniapl–2.jpg

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು ಅವುಗಳ ಅಭಿವೃದ್ಧಿಗೆ ಸರಕಾರದೊಂದಿಗೆ ಖಾಸಗಿ ಸಹಭಾಗಿತ್ವವೂ ಅಗತ್ಯ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅನುರಾಧಾ ಅವರು ಹೇಳಿದರು.

ಅವರು ಮಂಗಳವಾರ ಪ್ರವಾಸೋದ್ಯಮ ದಿನಾಚರಣೆಯ ಪೂರ್ವಭಾವಿಯಾಗಿ ಬಾರಕೂರಿನ ಕತ್ತಲೆ ಬಸದಿಯಲ್ಲಿ ಜರಗಿದ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪರಂಪರೆಯ ಬಗ್ಗೆ ಗೌರವ ಇರಬೇಕು. ಇತಿಹಾಸದ ಕುರಿತು ಅಭಿಮಾನವಿರಬೇಕು. ಇವೆರಡೂ ಬೇಕಾದಲ್ಲಿ ಅಧ್ಯಯನ ಸಮರ್ಪಕವಾಗಿರಬೇಕು ಎಂದರು.

‘ಗೊತ್ತಿಲ್ಲ’ ನಿಧನ !
ಭವ್ಯ ಭಾರತ ಪರಂಪರೆಯಲ್ಲಿ ಅನೇಕ ಪಾರಂಪರಿಕ ಕಟ್ಟಡಗಳಿವೆ. ಪ್ರತಿ ಊರು ಅಪೂರ್ವ ಇತಿಹಾಸ ಹೊಂದಿದೆ. ಅನೇಕ ಕೋಟೆ, ದೇವಸ್ಥಾನಗಳನ್ನು ಹೊಂದಿದ್ದರೂ ಊರಿನವರಿಗೆ ಮಾತ್ರ ಅದರ ಇತಿಹಾಸ ಗೊತ್ತೇ ಇರುವುದಿಲ್ಲ. ಏನು ಕೇಳಿದರೂ ಗೊತ್ತಿಲ್ಲವೆಂದು ಉತ್ತರ ನೀಡಿದರೆ ಮುಂದೆ ಒಂದು ‘ಗೊತ್ತಿಲ್ಲ’ ನಿಧನರಾದರು ಎಂದು ಹೇಳಬೇಕಾಗುತ್ತದೆ ಎಂದು ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕರಾದ ಮೂತೇಶ್ವರಿ ಅವರು ಹೇಳಿದರು.

ನೈಜ ದರ್ಶನ
ಬಾರಕೂರಿನ ಕತ್ತಲೆ ಬಸದಿಯ ನೈಜ ದರ್ಶನವಾಗಿದೆ. ಅತಿ ಶೀಘ್ರದಲ್ಲಿಯೇ ಇದಕ್ಕೆ ಕಾಯಕಲ್ಪ ಒದಗಿಸಲು ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಬಾರಕೂರು ಮಾತ್ರವಲ್ಲ ಉಡುಪಿ ಜಿಲ್ಲೆಯ ಇತರ ಪಾರಂಪರಿಕ ತಾಣಗಳನ್ನು ಪ್ರವಾಸಿ ಕೇಂದ್ರ ಗಳನ್ನಾಗಿ ಮಾರ್ಪಡಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

ಸೆ. 27: ಆ್ಯಪ್‌ ಆರಂಭ
ಉಡುಪಿ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಅನಿತಾ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಆ್ಯಪ್‌ ಒಂದನ್ನು ರಚಿಸಲಾಗಿದ್ದು ಅದು ಸೆ. 27ರಂದು ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದರು.

ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಡಿಸೆಂಬರ್‌ನಲ್ಲಿ ಮೂರು ದಿನಗಳ ವಿಶೇಷ ಕಾರ್ಯಕ್ರಮ ಯೋಜಿಸಲಾಗಿದೆ ಎಂದರು.

ಜೆಟ್‌ಏರ್‌ವೇಸ್‌ನ ಮಾರಾಟ ವಿಭಾಗದ ಏರಿಯಾ ಸೇಲ್ಸ್‌ ಮ್ಯಾನೇಜರ್‌ ಕೆ. ಗಂಗಾಧರ ಹೆಗ್ಡೆ ಮಾತನಾಡಿ, ಪ್ರವಾಸಿತಾಣಗಳ ವೀಕ್ಷಣೆಗೆ ಜೆಟ್‌ ಏರ್‌ವೇಸ್‌ ಪ್ರಯಾಣ ಮಾಡುವವರಿಗೆ ಶೇ. 10ರಷ್ಟು ರಿಯಾಯಿತಿ ಇದೆ. ಈ ಬಗ್ಗೆ ಜೆಟ್‌ಏರ್‌ವೇಸ್‌ ವೆಬ್‌ಸೈಟ್‌ನಿಂದ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಬಾರಕೂರು ಪಂಚಾಯತ್‌ ಉಪಾಧ್ಯಕ್ಷ ಶಾಂತಾರಾಮ್‌ ಶೆಟ್ಟಿ, ಮಣಿಪಾಲದ ಮಣಿಪಾಲ ಗ್ರಾಜುಯೇಟ್‌ ಸ್ಕೂಲ್‌ ಆಫ್ ಹೊಟೇಲ್‌ ಮ್ಯಾನೇಜ್‌ಮೆಂಟಿನ ಪ್ರಾಂಶುಪಾಲರಾದ ಡಾ| ಪರ್ವತವರ್ಧಿನಿ ಮತ್ತಿತರರು ಉಪಸ್ಥಿತರಿದ್ದರು.ಅಪ್ನಾ ಹಾಲಿಡೇಸ್‌ನ ಸಿಇಒ ನಾಗರಾಜ್‌ ಹೆಬ್ಟಾರ್‌ ಸ್ವಾಗತಿಸಿ ವಂದಿಸಿದರು.

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.