ಪರಿಸರ ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯ

ಗಿರಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಎಚ್‌. ಅಕ್ಷಯ್‌ ಅಭಿಮತ

Team Udayavani, Feb 22, 2021, 6:28 PM IST

Hill Cleainig Abhiyan

ಚಿಕ್ಕಮಗಳೂರು: ಜಿಲ್ಲೆ ಪ್ರಕೃತಿ ಸೌಂದರ್ಯವನ್ನು ಹೊಂದಿದ್ದು, ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ದೇಶ- ವಿದೇಶ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಇಲ್ಲಿಗೆ ಬರುವ ಪ್ರವಾಸಿಗರು ಪ್ರವಾಸಿ ತಾಣಗಳಲ್ಲಿ ಅನುಪಯುಕ್ತ ತ್ಯಾಜ್ಯವನ್ನು ಎಲ್ಲೆಂದರದಲ್ಲಿ ಎಸೆದು ಪರಿಸರವನ್ನು ಹಾಳುಗೆಡುವುತ್ತಿದ್ದು, ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾ ಧಿಕಾರಿ ಎಂ.ಎಚ್‌. ಅಕ್ಷಯ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾನುವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಗಿರಿ ಸ್ವತ್ಛತಾ ಅಭಿಯಾನಕ್ಕೆ ನಗರದ ಟೌನ್‌ ಕ್ಯಾಂಟೀನ್‌ ಮುಂಭಾಗದಲ್ಲಿ ಹಸಿರುವ ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ಪಶ್ಚಿಮ ಘಟ್ಟ ಪ್ರದೇಶ, ಗಿರಿಶಿಖರ, ವನ್ಯಜೀವಿ ಸಂಕುಲ ಸೇರಿದಂತೆ ನೈಸರ್ಗಿಕವಾಗಿ ಅತ್ಯಂತ ಸುಂದರ ಜಿಲ್ಲೆಯಾಗಿದ್ದು, ವರ್ಷವಿಡೀ ಸಾವಿರಾರು ಪ್ರವಾಸಿಗರು ಇಲ್ಲಿಗೆ ನಿತ್ಯ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಾರೆ. ಪ್ರವಾಸಿಗರು ಹಾಗೂ ಸ್ಥಳೀಯರು ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ತಮ್ಮ ಜೊತೆ ತಂದ ತಿಂಡಿ ತಿನಿಸು, ಪ್ಲಾಸ್ಟಿಕ್‌ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡುತ್ತಿದ್ದು ಇದರಿಂದ ಪರಿಸರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಗಿರಿ ಪ್ರದೇಶದಲ್ಲಿ ಸ್ವತ್ಛತಾ ಅಭಿಯಾನ ಆಯೋಜಿಸಲಾಗಿದೆ. ಸುಂದರವಾದ ಪ್ರಕೃತಿಯನ್ನು ಸ್ವತ್ಛವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಈ ಅಭಿಯಾನದ ಮೂಲಕ ಸ್ವತ್ಛತೆ ಬಗ್ಗೆ ಪ್ರವಾಸಿಗರು ಹಾಗೂ ಸ್ಥಳೀಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಭಿಯಾನದಂತಹ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಲಿದ್ದು, ಪ್ರಕೃತಿ ಸೌಂದರ್ಯ ಸವಿಯಲು ಬರುವ ಪ್ರವಾಸಿಗರು ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ನಡೆದುಕೊಂಡು ಪ್ರವಾಸಿ ತಾಣಗಲ್ಲಿ ಸ್ವತ್ಛತೆಯನ್ನು ಕಾಪಾಡಿಕೊಳ್ಳುವ ಮೂಲಕ ಮುಂದಿನ ನಮ್ಮ ತಲೆಮಾರಿಗೆ ಈ ಪ್ರಕೃತಿ ಸೌಂದರ್ಯವನ್ನು ಕೊಡುಗೆಯಾಗಿ ನೀಡಬೇಕು ಎಂದರು.

ನಗರಸಭೆ ಪೌರಾಯುಕ್ತ ಎಂ.ಸಿ. ಬಸವರಾಜ್‌ ಮಾತನಾಡಿ, ಜಿಲ್ಲೆಯು ಅದ್ಭುತ ಪ್ರವಾಸಿ ತಾಣಗಳನ್ನು ಹೊಂದಿದ್ದು ತನ್ನದೇ ಆದ ನೈಸರ್ಗಿಕ ಪ್ರಕೃತಿ ಸೌಂದರ್ಯವನ್ನು ಒಳಗೊಂಡಿದೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮೊಟ್ಟಿಗೆ ತಂದಿರುವ ತ್ಯಾಜ್ಯವಸ್ತುಗಳನ್ನು ಎಲ್ಲೆಂದರಲ್ಲಿ ಹಾಕುತ್ತಿರುವುದರಿಂದ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗುತ್ತಿದೆ. ಇಲ್ಲಿಯ ಪ್ರಕೃತಿ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ಪ್ರವಾಸಿಗರು ಮತ್ತು ನಮ್ಮ ನಿಮ್ಮೆಲ್ಲರ ಹೊಣೆಯಾಗಿದೆ ಎಂದರು.

ಜಿಲ್ಲಾಡಳಿತದಿಂದ ಆಯೋಜಿಸಿರುವ ಗಿರಿ ಪ್ರದೇಶ ಸ್ವತ್ಛತಾ ಅಭಿಯಾನವು ಜಿಲ್ಲೆಯಲ್ಲಿ ಇತಿಹಾಸ  ಸೃಷ್ಟಿಸಿದ್ದು ಜನತೆಗೆ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಈ ಸ್ವತ್ಛತಾ ಅಭಿಯಾನ ಬೃಹತ್‌ ಮಟ್ಟದಲ್ಲಿ ಆಯೋಜಿಸುವ ಮೂಲಕ ಇನಷ್ಟು ಜಾಗೃತಿ ಮೂಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ಮುಖ್ಯ ಅರಣ್ಯ ಸಂರಕ್ಷಣಾ ಅಧಿ ಕಾರಿ ಸುನೀಲ್‌ ಪನ್ವಾರ್‌, ಅರಣ್ಯ ಇಲಾಖೆ ಉಪ ಅರಣ್ಯ ಅಧಿಕಾರಿ ಜಗನ್ನಾಥ್‌, ಪ್ರಾದೇಶಿಕ ಸಾರಿಗೆ ಅ ಧಿಕಾರಿ ಮುರುಗೇಂದ್ರ ಶಿರೋಳ್ಕರ್‌ ಸೇರಿದಂತೆ ವಿವಿಧ ಇಲಾಖೆಯ ಅ ಧಿಕಾರಿಗಳು ಹಾಗೂ ಸಂಘ ಸಂಸ್ಥೆಯ ಸ್ವಯಂ ಸೇವಕರು ಇದ್ದರು.

ಕಾರ್ಯಕ್ರಮದ ಬಳಿಕ ಮುಳ್ಳಯ್ಯನಗಿರಿ ಪ್ರದೇಶಕ್ಕೆ ತೆರಳಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡ  ಗಿರಿ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಎಲ್ಲೆಂದರಲ್ಲಿ ಬಿಸಾಡಿರುವ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ಸ್ವತ್ಛಗೊಳಿಸಿತು.

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.