ಬ್ರಾಹ್ಮಣರ ಕ್ಷಮೆ ಕೋರಿದ ಕಿಶೋರ್:ಪೊಗರು ಚಿತ್ರದ 14 ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ
Team Udayavani, Feb 23, 2021, 3:32 PM IST
ಬೆಂಗಳೂರು : ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕ್ಷಮೆ ಕೇಳಿರುವ ನಿರ್ದೇಶಕ ನಂದಕಿಶೋರ್, ಆಕ್ಷೇಪಾರ್ಹ ದೃಶ್ಯಗಳನ್ನು ಚಿತ್ರದಿಂದ ತೆಗೆಯಲು ಒಪ್ಪಿಕೊಂಡಿದ್ದಾರೆ.
ಇಂದು ( ಫೆ.23) ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರ ಜತೆ ಜಂಟಿ ಪತ್ರಿಕಾಗೋಷ್ಟಿ ನಡೆಸಿದ ನಿರ್ದೇಶಕ, ನಮಗೆ ಯಾವುದೇ ಸಮುದಾಯವನ್ನು ಅವಮಾನಗೊಳಿಸುವ ಹಾಗೂ ಯಾರಿಗೂ ವೈಯಕ್ತಿಕವಾಗಿ ನೋವು ಮಾಡುವ ಉದ್ದೇಶ ಇರಲಿಲ್ಲ. ಸನ್ನಿವೇಶಕ್ಕೆ ಅಗತ್ಯವೆಂದು ಆ ದೃಶ್ಯಗಳನ್ನು ಶೂಟ್ ಮಾಡಲಾಗಿತ್ತು. ಒಬ್ಬರನ್ನು ನೋಯಿಸಿ ಹಣ ಗಳಿಕೆ ಮಾಡುವುದು ನಮ್ಮ ಉದ್ದೇಶವಾಗಿರಲಿಲ್ಲ. ಆ ದೃಶ್ಯಗಳಿಂದ ನೋವಾಗಿದ್ದರೆ ನಾನು ಬ್ರಾಹ್ಮಣ ಸಮುದಾಯಕ್ಕೆ ಕ್ಷಮೆ ಕೋರುತ್ತೇನೆ ಎಂದರು.
ವಿವಾದಿತ ದೃಶ್ಯಗಳನ್ನು ಡಿಲೀಟ್ ಮಾಡಲು ಎರಡು ದಿನ ಕಾಲಾವಕಾಶ ಕೇಳಿರುವ ನಂದ ಕಿಶೋರ್, ಇವತ್ತಿನಿಂದಲೇ ಕಾರ್ಯೋನ್ಮುಖರಾಗುವುದಾಗಿ ಭರವಸೆ ನೀಡಿದರು. ಜತೆಗೆ ಇನ್ಮುಂದೆ ಇಂತಹ ಘಟನೆ ಮರುಕಳಿಸದಂತೆ ನೋಡಿಕೊಳ್ಳುತ್ತೇನೆ ಎಂದರು.
ಇದೇ ವೇಳೆ ಮಾತಾಡಿದ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಪೊಗರು ಚಿತ್ರದಲ್ಲಿ ನಮ್ಮ ಸಮುದಾಯಕ್ಕೆ ಅಪಮಾನ ಮಾಡಿರುವಂತಹ ದೃಶ್ಯಗಳನ್ನು ನೋಡಿ ನೋವಾಯಿತು. ನಿರ್ದೇಶಕರು ಚಿತ್ರದಲ್ಲಿಯ ವಿವಾದಿತ 14 ದೃಶ್ಯಗಳನ್ನು ತೆಗೆಯುವಂತೆ ನಾವು ಮಾಡಿರುವ ಮನವಿಗೆ ಒಪ್ಪಿಕೊಂಡಿದ್ದಾರೆ. ಇನ್ಮುಂದೆ ಬ್ರಾಹ್ಮಣರನ್ನು ಕೆಣಕಲು ಹೋಗಬೇಡಿ, ನಮ್ಮ ಸಮಾಜಕ್ಕೆ ಅವಮಾನ ಮಾಡದಿರಿ ಎಂದು ರಾಜಕಾರಣಿಗಳಿಗೆ ಹಾಗೂ ಚಿತ್ರರಂಗಕ್ಕೆ ಪತ್ರಿಕಾಗೋಷ್ಟಿ ಮೂಲಕ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.