ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರ ಬದ್ಧ

ಶಾಲೆ ಅಭಿವೃದ್ಧಿಗೆ ದಾನಿಗಳಿಂದ ನೆರವು ಸ್ವೀಕಾರ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ

Team Udayavani, Feb 23, 2021, 6:52 PM IST

Eswarappa

ಶಿವಮೊಗ್ಗ: ನಗರದ ಸರ್ಕಾರಿ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಿ, ವಿದ್ಯಾರ್ಥಿಗಳ ನಿರೀಕ್ಷೆಯಂತೆ ಮೂಲಭೂತ ಅಗತ್ಯತೆಗಳನ್ನು ಒದಗಿಸಿ, ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಅವರು ಸೋಮವಾರ ಶಿವಮೊಗ್ಗ ನಗರದ ಸೀಗೆಹಟ್ಟಿ, ಕೆ.ಆರ್‌.ಪುರಂ ಮತ್ತು ಬಿ.ಬಿ.ಸ್ಟ್ರೀಟ್‌ನ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿಕಾಸಕ್ಕೆ ದಾನಿಗಳಿಂದ ಆರ್ಥಿಕ ನೆರವು ಸೀÌಕರಿಸಿ ಮಾತನಾಡಿದರು. ಈಗಾಗಲೆ ಶಿವಮೊಗ್ಗ ನಗರದ ಒಟ್ಟು 87 ಸರ್ಕಾರಿ ಶಾಲೆಗಳಲ್ಲಿ 70 ಶಾಲೆಗಳನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಿ, ಸ್ಮಾರ್ಟ್‌ಕ್ಲಾಸ್‌ಗಳನ್ನು ನಿರ್ಮಿಸಲಾಗಿದೆ. ಉಳಿದಂತೆ 17 ಶಾಲೆಗಳ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ಈಗಾಗಲೆ ಸರ್ಕಾರ ಕೈಗೊಂಡ ನಿರ್ಣಯದಂತೆ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ತಮ್ಮ ಕಾರ್ಯಕ್ಷೇತ್ರದ 3 ಶಾಲೆಗಳನ್ನು, ಸಚಿವರು 5 ಶಾಲೆಗಳನ್ನು ಹಾಗೂ ಮುಖ್ಯಮಂತ್ರಿಗಳು 10 ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಶಾಲಾ ಕೊಠಡಿ, ಸಭಾಂಗಣ, ಕಾಂಪೌಂಡ್‌, ಗ್ರಂಥಾಲಯ, ಶೌಚಾಲಯ, ಕ್ರೀಡಾಂಗಣ, ಕೊಠಡಿ ಸೇರಿದಂತೆ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಸೀಗೆಹಟ್ಟಿಯ ಸರ್ಕಾರಿ ಶಾಲೆಯನ್ನು ಬೆಂಗಳೂರಿನ ಜಿ.ವಿ.ಪಿ.ಆರ್‌. ಇಂಜಿನಿಯರ್ ಲಿ.ಸಂಸ್ಥೆಯವರು ತಮ್ಮ ಕಾರ್ಪೊರೇಟ್‌ ಸೋಷಿಯಲ್‌ ರೆಸ್ಪಾನ್ಸಿಬಿಲಿಟಿ ಯೋಜನೆಯಡಿ ಅಭಿವೃದ್ಧಿಪಡಿಸಲು ಆಸಕ್ತಿ ವಹಿಸಿದ್ದು, ಫೆ. 28ರಂದು ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಗುವುದು. ಈ ಸಂಸ್ಥೆಯು ಈ ಶಾಲಾ ಕಟ್ಟಡದ ಅಭಿವೃದ್ಧಿ ಚಟುವಟಿಕೆಗಳಿಗಾಗಿ 50 ಲಕ್ಷ ರೂ.ಗಳನ್ನು ನೀಡಲು ಉದ್ದೇಶಿಸಿದ್ದು, ಅದರ ಮೊದಲ ಕಂತಿನ 25 ಲಕ್ಷ ರೂ. ಚೆಕ್ಕನ್ನು ಸಂಸ್ಥೆಯ ಮುಖ್ಯಸ್ಥ ಜಯಪ್ರಕಾಶ್‌ ಅವರು ತಮಗೆ ಹಸ್ತಾಂತರಿಸಿದ್ದಾರೆ. ಈ ಹಣ ಬಳಸಿ ಕೈಗೊಳ್ಳುವ ಎಲ್ಲಾ ಕಾಮಗಾರಿಗಳು ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳುವಲ್ಲಿ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಪದಾಧಿ ಕಾರಿಗಳು ಗಮನಹರಿಸುವಂತೆ ಸೂಚಿಸಿದರು.

ಕೆ.ಆರ್‌.ಪುರಂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಸದರಿ ಶಾಲೆಯನ್ನು ಹೈದ್ರಾಬಾದ್‌ನ ಕೆ.ಎಂ.ವಿ. ಸಂಸ್ಥೆಯ ಮುಖ್ಯಸ್ಥ ಶ್ರೀಹರ್ಷ ಅವರು 50ಲಕ್ಷ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಆಸಕ್ತಿ ತೋರಿದ್ದಾರೆ. ಅವರು ನೀಡುವ ಈ ನಿಧಿಯಿಂದ ಶಾಲಾ ಅಗತ್ಯತೆಗಳನ್ನು ಮುಂದಿನ 2ತಿಂಗಳ ಅವಧಿಯೊಳಗಾಗಿ ಒದಗಿಸಲು, ಕಾಮಗಾರಿಗಳನ್ನು ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸಾರ ತೋರದೆ, ಉತ್ತಮ ಶೈಕ್ಷಣಿಕ ಸೌಲಭ್ಯ ಒಳಗೊಂಡ ಸರಕಾರಿ ಶಾಲೆಗಳಿಗೆ ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ದಾಖಲಿಸಬೇಕು. ಪೋಷಕರ, ಶಿಕ್ಷಕರ ನಿರೀಕ್ಷೆಯಂತೆ ಶಾಲೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಂ. ರಮೇಶ್‌, ಗನ್ನಿ ಶಂಕರ್‌, ಜಯರಾಮ್‌, ಸುನಿತಾ ಅಣ್ಣಪ್ಪ ಸೇರಿದಂತೆ ಆಯಾ ಶಾಲೆಯ ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷರು, ಪದಾಧಿ ಕಾರಿಗಳು, ಅಧಿ ಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

Arrest

Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.