ಮಾದಕ ವಸ್ತು ಮಾರಾಟ : ಪೊಲೀಸರಿಂದ ಇಬ್ಬರು ನೈಜಿರಿಯಾ ಪ್ರಜೆಗಳ ಬಂಧನ
Team Udayavani, Feb 23, 2021, 7:34 PM IST
ಬೆಂಗಳೂರು : ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ ಇಬ್ಬರು ನೈಜಿರಿಯಾ ಪ್ರಜೆಗಳನ್ನು ಕೇಂದ್ರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ನೈಜಿರಿಯಾ ಮೂಲದ ಚುಕ್ವೂ ಇಮೆಕ್(24) ಮತ್ತು ಆ್ಯಮ್ ಸಿಲಮ್ ಚಿರೋಜ್ (35) ಬಂಧಿತರು. ಅವರಿಂದ 56 ಎಕ್ಸೆಸಿ ಮಾತ್ರೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇಂದಿರಾನಗರದ ಮೆಟ್ರೋ ಸಮೀಪದಲ್ಲಿ ಆರೋಪಿಗಳು ಗ್ರಾಹಕರಿಗೆ ಮಾದಕ ವಸ್ತು ಕೊಡಲು ಬಂದಿದ್ದು ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿ ವೀಸಾದಡಿ ಬೆಂಗಳೂರಿಗೆ ಬಂದಿರುವ ಆರೋಪಿಗಳು, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದಾರೆ. ಅಲ್ಲದೆ ಅಕ್ರಮವಾಗಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರೆ. ಈ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವು ನೈಜಿರಿಯಾ ಪ್ರಜೆಗಳ ಜತೆ ಶಾಮೀಲಾಗಿರುವ ಮಾಹಿತಿ ಸಿಕ್ಕಿದೆ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಅಧಿಕಾರಿಗಳ ಕಿರುಕುಳ : ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.