ಹೊರಬಂತು ‘ಹೀರೋ’ ಮೊದಲ ಹಾಡು


Team Udayavani, Feb 24, 2021, 8:38 AM IST

ಹೊರಬಂತು ‘ಹೀರೋ’ ಮೊದಲ ಹಾಡು

ರಿಷಭ್‌ ಶೆಟ್ಟಿ ಅಭಿನಯದ “ಹೀರೋ’ ಚಿತ್ರ ಇದೇ ಮಾರ್ಚ್‌ 5ರಂದು ತೆರೆಗೆ ಬರುತ್ತಿದೆ. ಇದರ ನಡುವೆಯೇ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಸದ್ಯ “ಹೀರೋ’ನನ್ನು ಪ್ರೇಕ್ಷಕರಿಗೆ ತಲುಪಿಸುವ ಕೊನೆ ಹಂತದ ಕಸರತ್ತಿನಲ್ಲಿ ನಿರತವಾಗಿದೆ. ಇದೀಗ ಪ್ರಚಾರದ ಭಾಗವಾಗಿ “ಹೀರೋ’ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. “ನೆನಪಿನ ಹುಡುಗಿಯೇ…’ ಎಂಬ ಈ ಲಿರಿಕಲ್‌ ವಿಡಿಯೋ ಹಾಡಿಗೆ ಯೋಗರಾಜ್‌ ಭಟ್‌ ಸಾಹಿತ್ಯವಿದ್ದು, ವಿಜಯ ಪ್ರಕಾಶ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಅಜನೀಶ್‌ ಲೋಕನಾಥ್‌ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಇನ್ನು ಬಿಡುಗಡೆಯಾಗಿರುವ ಈ ಹಾಡಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾತನಾಡುವ ಚಿತ್ರದ ನಾಯಕ ನಟ ಕಂ ನಿರ್ಮಾಪಕ ರಿಷಭ್‌ ಶೆಟ್ಟಿ, “ಚಿತ್ರದ ಪ್ರಮೋಶನ್‌ ಭಾಗವಾಗಿ ಸದ್ಯ ಮೊದಲ ಹಾಡನ್ನು ರಿಲೀಸ್‌ ಮಾಡಿದ್ದೇವೆ. ಈ ಹಾಡಿಗೆ ನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಾಗಿ ಒಳ್ಳೆಯ ರೆಸ್ಪಾನ್ಸ್‌ ಸಿಗುತ್ತಿದೆ. ಮೊದಲ ಸಲ ಹಾಡು ಕೇಳಿದಾಗ ಓ.ಕೆ ಅನಿಸುತ್ತಿದೆ. ಅದೇ ಹಾಡನ್ನ ಎರಡು -ಮೂರು ಸಲ ಕೇಳಿದಾಗ ಅಡಿಕ್ಷನ್‌ ಆಗುತ್ತದೆ ಎಂದು ಹಾಡನ್ನು ಕೇಳಿದವರು ಹೇಳುತ್ತಿದ್ದಾರೆ. ಒಂದೊಳ್ಳೆ ಹಾಡನ್ನು ಕೊಟ್ಟಿರುವುದಕ್ಕೆ ಖುಷಿಯಾಗುತ್ತಿದೆ’ ಎನ್ನುತ್ತಾರೆ.

ಇದನ್ನೂ ಓದಿ:‘ಗ್ಯಾಂಗ್ ರೇಪ್’ ಬೆದರಿಕೆ ಎದುರಿಸಿದ್ದರಂತೆ ನಟಿ ಪ್ರಿಯಾಂಕಾ…!

“ಸಿನಿಮಾದ ಹಾಡಿನಲ್ಲಿ ಕಥೆ ಎಳೆ ಇರುವುದರಿಂದ ಹಾಡುಗಳನ್ನು ಮೊದಲೇ ಬಿಡುಗಡೆ ಮಾಡಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದೆವು. ಕೊನೆಗೆ ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಒಂದರ ಹಿಂದೊಂದು ಹಾಡುಗಳನ್ನು ಬಿಡುಗಡೆ ಮಾಡುವ ನಿಧಾರಕ್ಕೆ ಬಂದೆವು. ಒಟ್ಟು “ಹೀರೋ’ ಸಿನಿಮಾದಲ್ಲಿ ನಾಲ್ಕು ಹಾಡುಗಳಿದ್ದು, ಈಗ ಒಂದು ಲಿರಿಕಲ್‌ ವಿಡಿಯೋ ಹಾಡು ರಿಲೀಸ್‌ ಮಾಡಿದ್ದೇವೆ. ಬಾಕಿ ಉಳಿದ ಹಾಡುಗಳನ್ನು ಒಂದರ ಹಿಂದೊಂದರಂತೆ ಬಿಡುಗಡೆ ಮಾಡುವ ಯೋಚನೆ ಇದೆ’ ಎಂದಿದ್ದಾರೆ ರಿಷಭ್‌ ಶೆಟ್ಟಿ.

“ರಿಷಭ್‌ ಶೆಟ್ಟಿ ಫಿಲಂಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ “ಹೀರೋ’ ಚಿತ್ರದಲ್ಲಿ ರಿಷಭ್‌ ಶೆಟ್ಟಿ ಅವರಿಗೆ ಗಾನವಿ ಲಕ್ಷ್ಮಣ್‌ ನಾಯಕಿಯಾಗಿ ಜೋಡಿಯಾಗಿದ್ದಾರೆ. ಭರತ್‌ ರಾಜ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಸದ್ಯ ಹಾಡುಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆಯುತ್ತಿರುವ “ಹೀರೋ’ ಹೇಗಿರಲಿದ್ದಾನೆ ಅನ್ನೋದು ಮಾರ್ಚ್‌ ಮೊದಲ ವಾರ ಗೊತ್ತಾಗಲಿದೆ

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.