ಪುದುಚೆರಿ ಚುನಾವಣೆಯು ಬಿಜೆಪಿಯ ಅಂತ್ಯಕ್ಕೆ ನಾಂದಿ ಹಾಡುತ್ತದೆ : ಮೊಯ್ಲಿ

ಕಾಂಗ್ರೆಸ್ ಮತ್ತೆ ಪುದುಚೆರಿಯ ಅಧಿಕಾರವನ್ನು ಹಿಡಿಯುತ್ತದೆ : ಮೊಯ್ಲಿ ವಿಶ್ವಾಸ

Team Udayavani, Feb 24, 2021, 5:07 PM IST

People Will Give Befitting Reply To BJP In Upcoming Polls In Puducherry: Congress’s Veerappa Moily

ನವ ದೆಹಲಿ : ಪುದುಚೆರಿಯಲ್ಲಿ ಕಾಂಗ್ರೆಸ್ ತನ್ನ ಅದಿಕಾರವನ್ನು ಕಳೆದುಕೊಳ್ಳುವುದಕ್ಕೆ ಬಿಜೆಪಿಯ ಹಣಬಲವೇ ಕಾರಣ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಮುಂದಿನ ಚುನಾವಣೆಯಲ್ಲಿ ತಕ್ಕ ಉತ್ತರವನ್ನು ಬಿಜೆಪಿಗೆ ಜನರು ನೀಡಲಿದ್ದಾರೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಮೈತ್ರಿಯನ್ನು ಡಿ ಎಮ್ ಕೆ(Dravida Munnetra Kazhagam) ಯೊಂದಿಗೆ ಮುಂದುವರಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಅಧಿಕಾರವನ್ನು ಹಿಡಿಯುತ್ತದೆ ಎಂದು ಕೇಂದ್ರಾಡಳಿ ಪ್ರದೇಶಗಳ ಚುನಾವಣಾ ವೀಕ್ಷಕರಾದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಓದಿ :ಮಹಾನಗರ ಪಾಲಿಕೆ ಅಧಿಕಾರ ಚುಕ್ಕಾಣಿ ಯಾರಿಗೆ? 

ಪುದುಚೆರಿ ಚುನಾವಣೆಯು ಬಿಜೆಪಿಯ ಅಂತ್ಯಕ್ಕೆ ನಾಂದಿ ಹಾಡುತ್ತದೆ.  ಕಾಂಗ್ರೆಸ್ ನ ಹೊಸ ಆರಂಭಕ್ಕೆ ಸಾಕ್ಷಿಯಾಗಲಿದೆ ಎಂದು ಮೊಯ್ಲಿ ಪಿಟಿಐ ನ ಸಂದರ್ಶನದಲ್ಲಿ ಹೇಳಿದ್ದಾರೆ.

ಪುದುಚೆರಿಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಸುಗಮವಾಗಿ ಆಡಳಿತ ನಡೆಸಲು ಆಗಿನ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವಕಾಶ ನೀಡಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಕಾಲಕಾಲಕ್ಕೆ ಕಾರ್ಯ ನಿರ್ವಹಿಸಲು ಬಿಡದಂತೆ ಮಾಡುವುದೇ ಕಿರಣ್ ಬೇಡಿಯವರ ಮುಖ್ಯ ಧ್ಯೆಯವಾಗಿತ್ತು. ನಾವು ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ತಂದಿದ್ದೆವು. ಮುಖ್ಯಮಂತ್ರಿ ನಾರಾಯಣ ಸ್ವಾಮಿ ಮಾಧ್ಯಮಗಳ ಮೂಲಕ ಕೂಡ ಗಮನಕ್ಕೆ ತರುವಂತಹ ಪ್ರಯತ್ನ ಮಾಡಿದ್ದರು. ಆದರೆ, ಅವರು ಈ ಬಗ್ಗೆ ಏನೂ ಗಮನ ಹರಿಸಿಲ್ಲ ಎಂದು ಮೊಯ್ಲಿ ಹೇಳಿದ್ದಾರೆ.

ಇನ್ನು, ಪುದುಚೆರಿಯಲ್ಲಿ ಪ್ರಜಾ ಪ್ರಭುತ್ವವನ್ನು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಸಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಶಾಸಕರು ಹಾಗೂ ಡಿ ಎಮ್ ಕೆ  ಪಕ್ಷದ ಶಾಸಕರೊಬ್ಬರು ರಾಜಿನಾಮೆ ನೀಡಲು ಬಿಜೆಪಿ ಹಣದ ಆಮಿಷವೊಡ್ಡಿದೆ ಎನ್ನುವುದಕ್ಕೆ ಅನುಮಾನ ಬೇಕಿಲ್ಲ. ಶಾಸಕರ ರಾಜೀನಾಮೆ ಮತ್ತು ಪುದುಚೆರಿಯಲ್ಲಿ ಕಾಂಗ್ರೆಸ್ ಸರ್ಕಾರದ ಪತನವನ್ನು ಲೆಫ್ಟಿನೆಂಟ್ ಗವರ್ನರ್ ಮೂಲಕ ಭಾರತ ಸರ್ಕಾರವು “ನೇರವಾಗಿ ಬೆಂಬಲಿಸಿದ ಪ್ರಜಾಪ್ರಭುತ್ವದ ಮುಕ್ತ ಹತ್ಯಾಕಾಂಡ” ಎಂದು ಮೊಯ್ಲಿ ಬಣ್ಣಿಸಿದ್ದಾರೆ.

ಓದಿ : ದೇಶದ ಅತ್ಯಂತ ದೊಡ್ಡ ದಂಗೆಕೋರ ಮೋದಿ : ಮಮತಾ ಬ್ಯಾನರ್ಜಿ

ಸರ್ಕಾರ ಪತನಗೊಂಡಿದ್ದು ರಾಜಿನಾಮೆ ನೀಡಿದ ಶಾಸಕರಿಂದಲ್ಲ, ನಾಮ ನಿರ್ದೇಶಿತ ಶಾಸಕರಿಗೆ ವಿಶ್ವಾಸ ಮತಯಾಚನೆಯಲ್ಲಿ ಮತ ಚಲಾವಣೆ ಮಾಡಲು ಅವಕಾಶ ಮಾಡಲು ಕೊಟ್ಟಿರುವುದೇ ಕಾರಣ ಎಂದು ಅಭಿಪ್ರಾಯ ಪಟ್ಟರು.

ನಾಮನಿರ್ದೇಶಿತ ಮೂರು ಶಾಸಕರಿಗೆ ವಿಶ್ವಾತ ಮತ ಚಲಾವಣೆ ಮಾಡಲು ಅವಕಾಶ ನಿಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು, ಈ ಬಗ್ಗೆ ನ್ಯಾಯಾಮಗ ಕೂಡ ಕ್ರಮ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡಿತು ಎಂದು ಅವರು ಹೇಳಿದ್ದಾರೆ.

ಇನ್ನು, ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರನ್ನು ವಜಾಗೊಳಿಸಿದ ವಿಚಾರಕ್ಕೆ ಸಂಬಂಧ ಪಟ್ಟಂತೆ, ಇದು ಅವರಿಗೆ(ಬಿಜೆಪಿ) ಚುನಾಚನೆಯಲ್ಲಿ ಸಹಾಯ ಆಗಬಹುದೆಂದು ಅಂದುಕೊಂಡಿದ್ದಾರೆ. ಮತದಾರರು ಅವರತ್ತ ತಿರುಗಬಹುದು ಅಂತಂದುಕೊಂಡಿದ್ದಾರೆ. ಆದರೇ ಅದು ಹಾಗಾಗಲಾರದು ಎಂದು ಅವರು ಅಭಿಪ್ರಾಯ ಪಟ್ಟರು.

ಈಗ ಎಲ್ಲವನ್ನೂ ಕಿರಣ್ ಬೇಡಿ ಅವರ ತಲೆ ಮೇಲೆ ಹೇರುತ್ತಾರೆ. ಗೊಂಬೆಯಂತೆ ಕಿರಣ್ ಬೇಡಿಯವರನ್ನು ಬಳಸಿಕೊಂಡರು. ಈಗ ಅವರನ್ನು ದೂರುತ್ತಾರೆ. ಅವರು ಹೇಳಿದಂತೆ ಕಿರಣ್ ಬೇಡಿ ಇದ್ದರು. ಇವೆಲ್ಲವೂ ಕಾಂಗ್ರೆಸ್ ವಿರುದ್ಧ ಬಿಜೆಪಿ ನಡೆಸಿದ ಆಟ ಎಂದು ಅವರು ಆರೋಪಿಸಿದರು.

ಇನ್ನು, ಕಾಂಗ್ರೆಸ್ ಮತ್ತೆ ಪುದುಚೆರಿಯ ಅಧಿಕಾರವನ್ನು ಹಿಡಿಯುತ್ತದೆ ಎಂದು ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತ ಪಡಿಸಿದರು.

ಓದಿ : ಉತ್ತರಾಖಂಡ ದುರಂತದಲ್ಲಿ ತಂದೆ ಕಳೆದುಕೊಂಡ 4 ಮಕ್ಕಳ ದತ್ತು ಪಡೆದ ನಟ ಸೋನು !  

ಟಾಪ್ ನ್ಯೂಸ್

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.