ಪಿಂಕ್ ಬಾಲ್ ನಲ್ಲಿ ಅಕ್ಷರ್ – ಅಶ್ವಿನ್ ಮ್ಯಾಜಿಕ್ : ಅಲ್ಪ ಮೊತ್ತಕ್ಕೆ ಕುಸಿದ ಆಂಗ್ಲರು
Team Udayavani, Feb 24, 2021, 6:13 PM IST
ಅಹಮದಾಬಾದ್ : ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಜೋ ರೂಟ್ ಪಡೆ , ಭಾರತದ ಸ್ಪಿನ್ನ್ ಮೋಡಿಗೆ ಅಲ್ಪ ಮೊತ್ತಕ್ಕೆ ಕುಸಿದಿದೆ.
ತಂಡಕ್ಕೆ ಬದಲಿ ಆಟಗಾರನಾಗಿ ಅವಕಾಶಗಿಟ್ಟಿಸಿಕೊಂಡ ಜ್ಯಾಕ್ ಕ್ರಾಲಿ ಆರಂಭಿಕ ಆಟಗಾರನಾಗಿ ಆಶದಾಯಕ ಆರಂಭ ನೀಡಿದರು. 53 ರನ್ ಪೇರಿಸಿದ ಜ್ಯಾಕ್ ಕ್ರಾಲಿ ಅಕ್ಷರ್ ಪಟೇಲ್ ಎಸೆತಕ್ಕೆ ವಿಕೆಟ್ ಒಪ್ಪಿಸಿದರು. ಆರಂಭಿಕನಾಗಿ ಕ್ರೀಸ್ ಗಿಳಿದ ಮತ್ತೊರ್ವ ಆಟಗಾರ ಡೊಮಿನಿಕ್ ಸಿಬ್ಲಿ ಇಶಾಂತ್ ಶರ್ಮಾ ಎಸೆತದಲ್ಲಿ ವಿಕೆಟ್ ಒಪ್ಪಿಸಿ, ಶೂನ್ಯ ಸುತ್ತಿ ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಹೊಡಿಬಡಿ ಆಟಗಾರ ಜಾನಿ ಬೆರಿಸ್ಟೋ ಅಕ್ಷರ್ ಸ್ಪಿನ್ನ್ ಮ್ಯಾಜಿಕ್ ಗೆ ಶೂನ್ಯ ಸುತ್ತಿ ವಿಕೆಟ್ ಒಪ್ಪಿಸಿದರು.
ವಿರಾಮದ ಬಳಿಕ ಬ್ಯಾಟಿಂಗ್ ಗಿಳಿದ ಇಂಗ್ಲೆಂಡ್ ಆಟಗಾರರು, ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲದೆ, ಒಂದಾದ ಮೇಲೆ ಒಂದರಂತೆ ವಿಕೆಟ್ ಕಳೆದುಕೊಳ್ಳುತ್ತಾ, ತಂಡ ಅಲ್ಪ ಮೊತ್ತಕ್ಕೆ ಕುಸಿಯಿತು. ನಾಯಕ ಜೋ ರೂಟ್ 17 ರನ್ ಗಳಿಸಿ ಅಶ್ವಿನ್ ಎಸೆತದಲ್ಲಿ ಎಲ್ ಬಿ ಡಬ್ಲ್ಯೂ ಮೂಲಕ ಔಟ್ ಆದರು. ಬೆನ್ ಸ್ಟೋಕ್ಸ್, ಒಲಿ ಪೋಪ್, ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲದೆ, ಭಾರತದ ಸ್ಪಿನ್ನ್ ಮಾಂತ್ರಿಕತೆಗೆ ಪೆವಿಲಿಯನ್ ಹಾದಿ ಹಿಡಿದರು.
ಇಂಗ್ಲೆಂಡ್ 112 ರನ್ ಗೆ ಸರ್ವ ಪತನವಾಯಿತು. ಭಾರತದ ಪರ ಉತ್ತಮ ಸ್ಪೆಲ್ ಮಾಡಿದ ಅಕ್ಷರ್ ಪಟೇಲ್ 6 ವಿಕೆಟ್ ಪಡೆದು ಮಿಂಚಿದರು. ಆರ್.ಅಶ್ವಿನ್ 3 ವಿಕೆಟ್ ಪಡೆದರು. ಇಶಾಂತ್ ಶರ್ಮಾ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.