ಸರ್ಕಾರಿ ನೌಕರರ ತುಟ್ಟಿಭತ್ಯೆ ಮಂಜೂರು ಮಾಡಲು ಸಿಎಂಗೆ ಮನವಿ

ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಆಗ್ರಹ! ­ಆಯವ್ಯಯ ಮಂಡನೆ ಹಿನ್ನೆಲೆಯಲ್ಲಿ ಭೇಟಿ ಮಾಡಿ ಚರ್ಚೆ

Team Udayavani, Feb 24, 2021, 8:14 PM IST

CM Yadiyurappa news

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರು ಈ ಹಿಂದೆ ಉದ್ಭವಿಸಿದ ಹಣದುಬ್ಬರ ಪರಿಸ್ಥಿತಿ ಹಾಗೂ ನಿತ್ಯ ಬಳಕೆ ಪದಾರ್ಥಗಳ ಬೆಲೆ ಹೆಚ್ಚಳದಿಂದಾಗಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆ ಪರಿಗಣಿಸಿ, ಅಖೀಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ತಡೆಹಿಡಿಯಲಾಗಿರುವ ತುಟ್ಟಿಭತ್ಯೆ ಕಂತುಗಳನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು.

ಜತೆಗೆ ಸಂಪ್ರದಾಯದಂತೆ  ಕೇಂದ್ರ ಸರ್ಕಾರ ತುಟ್ಟಿಭತ್ಯೆ ಬಿಡುಗಡೆಗೊಳಿಸಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.

ಮಂಗಳವಾರ ಆಯವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿ ಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಂಪ್ರದಾಯದಂತೆ ಸಿಎಂ ಯಡಿಯೂರಪ್ಪ ಅವರು ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿ ಕಾರಿಗಳ ನಿಯೋಗವನ್ನು ಚರ್ಚೆಗೆ ಆಹ್ವಾನಿಸಿದ ಸಭೆಯಲ್ಲಿ ವಿಷಯ  ಪ್ರಸ್ತಾಪಿಸಿ ಮಾತನಾಡಿದರು.

ಕೇಂದ್ರವು ತನ್ನ ನೌಕರರಿಗೆ ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಿನಿಂದ ಪೂರ್ವಾನ್ವಯವಾಗಿ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸಿದ ಮಾದರಿಯಲ್ಲೇ ರಾಜ್ಯ ಸರ್ಕಾರಗಳೂ ಸಹ ತನ್ನ ನೌಕರರಿಗೆ ತುಟ್ಟಿಭತ್ಯೆ ಬಿಡುಗಡೆಗೊಳಿಸುವ ಸಂಪ್ರದಾಯವನ್ನು ಹೊಂದಿದೆ. ವಿಶ್ವದಾದ್ಯಂತ ತಲೆದೋರಿದ ಕೋವಿಡ್‌-19 ಮಾರಕ ರೋಗವು ನಮ್ಮ ರಾಷ್ಟ್ರ ಹಾಗೂ ರಾಜ್ಯಕ್ಕೂ ವ್ಯಾಪಿಸಿದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರೀಸಾಮಾನ್ಯರ ಹಿತದೃಷ್ಟಿಯಿಂದ ರಾಷ್ಟ್ರ ಹಾಗೂ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಕಾರಣ ಕೇಂದ್ರ ಸರ್ಕಾರವು ಆರ್ಥಿಕ ಪರಿಸ್ಥಿತಿಯಲ್ಲಿ ಸಮತೋಲನ ಕಾಯ್ದುಕೊಳ್ಳುವ ಸಲುವಾಗಿ ತನ್ನ ನೌಕರರ ಎರಡು ಕಂತುಗಳ ತುಟ್ಟಿಭತ್ಯೆಯನ್ನು ಈಗಾಗಲೇ ತಡೆಹಿಡಿದಿದೆ.

ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ ತನ್ನ ನೌಕರರ ತುಟ್ಟಿಭತ್ಯೆಯನ್ನು ತಡೆಹಿಡಿದು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ನೌಕರರ ಸಹಕಾರವನ್ನು ಕೋರಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ರಾಷ್ಟ್ರ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಶ್ರೀಸಾಮಾನ್ಯರ ಹಿತದೃಷ್ಟಿಯಿಂದ ತುಟ್ಟಿಭತ್ಯೆ ಕಂತುಗಳನ್ನು ಬಿಟ್ಟು ಕೊಡುವ ಮೂಲಕ ಸರ್ಕಾರಗಳೊಂದಿಗೆ ಕೈಜೋಡಿಸಿದ್ದರ ಜೊತೆಗೆ ಕೋವಿಡ್‌ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ಶ್ರಮಿಸಿರುವುದನ್ನು ಮನಗಾಣುವಂತೆ ವಿನಂತಿಸಿದರು.

ಪ್ರಸ್ತುತ ರಾಷ್ಟ್ರ ಹಾಗೂ ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣ ಕಾರ್ಯದಲ್ಲಿ ಭಾರತ ಸರ್ಕಾರ ಕೈಗೊಂಡ ಕ್ರಮಗಳು ವಿಶ್ವದಾದ್ಯಂತ ಪ್ರಶಂಸೆಗೆ ಪಾತ್ರರಾದ ಹಿನ್ನೆಲೆಯಲ್ಲಿ ಈ ಕಾರ್ಯನಿರ್ವಹಣೆಗೆ ಸಂಪೂರ್ಣವಾಗಿ ಸಹಕರಿಸಿದ ರಾಷ್ಟ್ರದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರಗಳು ನಿರ್ವಹಿಸಿದ ಪಾತ್ರವನ್ನು ಪ್ರಧಾನಿ ಮೋದಿ ಶ್ಲಾ‚ಘಿಸಿರುವುದು ಎಲ್ಲರಲ್ಲೂ ಸಂತಸವನ್ನುಂಟು ಮಾಡಿದೆ. ಅಲ್ಲದೆ ಮೈಸೂರು ಆಡಳಿತ ತರಬೇತಿ ಕೇಂದ್ರದ ಮಾದರಿಯಲ್ಲಿ

ರಾಜ್ಯದ ವಿಭಾಗಗಳಲ್ಲಿ ವಸತಿ ಸಹಿತ ಸರ್ಕಾರಿ ನೌಕರರ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ವಸತಿ ಗೃಹ ನಿರ್ಮಾಣ, ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು. ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಹಾಗೂ ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು. ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಹಾಗೂ ಇನ್ನಿತರ ಸಂಘದ ಕಾರ್ಯಕ್ರಮ, ನಿರ್ವಹಣೆ ಉದ್ದೇಶಕ್ಕೆ ಸಹಾಯನುದಾನ ಮಂಜೂರು ಮಾಡುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರರಿಗೆ, ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಹಾಗೂ ನೌಕರರಿಗೆ ಸುಗಮ ಸೇವೆಗಾಗಿ ಕೆಜಿಐಡಿ ಕಚೇರಿಗಳ ಗಣಕೀಕರಣ ಕಾರ್ಯವನ್ನು ಏಪ್ರಿಲ್‌ 2021ರಿಂದ ಜಾರಿಗೆ ತರಬೇಕು. ನೌಕರರ ಎಲ್ಲಾ ಸೇವೆಗಳನ್ನು ಆನ್‌ಲೈನ್‌ ಮೂಲಕ ಜಾರಿಗೊಳಿಸಬೇಕು. ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ ಹಾಲಿ ನೌಕರರ ಮೇಲಿನ ಕಾರ್ಯಭಾರ ಒತ್ತಡ ತಗ್ಗಿಸಬೇಕು. ಶಿಕ್ಷಣ ಇಲಾಖೆಯಲ್ಲಿನ ನೌಕರರ ವೇತನ ತಾರತಮ್ಯವನ್ನು ಸರಿಪಡಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 15, 20, 25 ಮತ್ತು 30 ವರ್ಷಗಳ ವೇತನ ಬಡ್ತಿಯಲ್ಲಿ ಉಂಟಾಗಿರುವ ತಾರತಮ್ಯ ಸರಿಪಡಿಸಬೇಕು.

ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯದ ನೌಕರರಿಗೂ ವೇತನ ಪರಿಷ್ಕರಣೆ ಮಾಡುವಂತೆ ಮನವಿ ಮಾಡಿದರು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಮಾಸಿಕ ವೇತನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ 21,000 ರೂ. ಕನಿಷ್ಟ ವೇತನ ನಿಗದಿಪಡಿಸಬೇಕು. ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅ ಧಿನಿಯಮ-2012ರಲ್ಲಿ ಸೂಚಿಸಲ್ಪಟ್ಟ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದಂತೆ ಪೂರ್ಣಪ್ರಮಾಣದಲ್ಲಿ ಮನೆ ಬಾಡಿಗೆ ಭತ್ಯೆ, ವಾರ್ಷಿಕ ವೇತನ ಬಡ್ತಿ ಹಾಗೂ ನಗದು ರಹಿತ ಆರೋಗ್ಯ ಸೌಲಭ್ಯವನ್ನು ನೀಡುವಂತೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆ ದರ ಶೇ.24ರಷ್ಟನ್ನು ಬೆಂಗಳೂರು ನಗರ ಜಿಲ್ಲೆಗೂ ವಿಸ್ತರಿಸುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್‌, ಸರ್ಕಾರದ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐಎಸ್‌ ಎನ್‌. ಪ್ರಸಾದ್‌, ಹೇಮಲತಾ, ಶಾಲಿನಿ ರಜನೀಶ್‌, ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್‌. ಮೋಹನ್‌ ಕುಮಾರ್‌ ಸೇರಿದಂತೆ ಅಧಿ ಕಾರಿಗಳು, ಸಂಘದ ಪದಾ ಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.