ಬೆಲೆ ಏರಿಕೆ ಖಂಡಿಸಿ ಸರಕಾರದ ವಿರುದ್ಧ ಪ್ರತಿಭಟನೆ
ಕಾರು, ಆಟೋ, ಬೈಕ್, ಸೈಕಲ್ ತಳ್ಳಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದ ಪ್ರತಿಭಟನಾಕಾರರು
Team Udayavani, Feb 24, 2021, 8:17 PM IST
ಶಿವಮೊಗ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಿನ ಬಳಕೆ ವಸ್ತುಗಳಾದ ಪೆಟ್ರೋಲ್, ಡೀಸೆಲ್ ಹಾಗೂ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಇಳಿಸಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಶಾಖೆ ಸದಸ್ಯರು ಮಂಗಳವಾರ ಮಹಾವೀರ ವೃತ್ತದಿಂದ ಕಾರು, ಆಟೋ, ಬೈಕ್, ಸೈಕಲ್ ತಳ್ಳಿಕೊಂಡು ಜಿಲ್ಲಾ ಧಿಕಾರಿಗಳ ಕಚೇರಿವರೆಗೆ ವಿನೂತನ ಪ್ರತಿಭಟನೆ ನಡೆಸಿದರು.
ಕಳೆದ 15 ವರ್ಷಗಳಿಂದ ದೇಶದಲ್ಲಿ ಆಗಾಗ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗುತ್ತಲೆ ಇದೆ. ಇದರ ಹಿಂದೆ ಕಾರ್ಪೋರೆಟ್ ತೈಲ ಕಂಪನಿಗಳ ದೊಡ್ಡಮಟ್ಟದ ಹುನ್ನಾರವಿದೆ. ರಾಷ್ಟ್ರವನ್ನು ಬಂಡವಾಳಶಾಹಿಗಳ ನಿಯಂತ್ರಣದಲ್ಲಿ ಕೊಂಡೊಯ್ಯುವ ಪ್ರಯತ್ನ ಇದಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ದೇಶದ ಬಹುಪಾಲು ತೈಲ ಉತ್ಪನ್ನ ಮುಸ್ಲೀಂ ರಾಷ್ಟ್ರಗಳಿಂದ ಅಮದಾಗುತ್ತಿದೆ. ಇತ್ತಿಚಿನ ವರ್ಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಗಣನೀಯವಾಗಿ ಇಳಕೆಯಾಗಿರುವುದು ಸಮಾಧಾನಕರ. ಆದರೆ ಕೇಂದ್ರ ಸರ್ಕಾರ ಇದರ ನೇರ ಲಾಭ ತೈಲ ಬಳಕೆದಾರರಿಗೆ ವರ್ಗಾಯಿಸುವ ಬದಲು ಶ್ರೀಮಂತರ ಬೊಕ್ಕಸ ತುಂಬಿಸುವ ಕೆಲಸಮಾಡುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಗಣನೀಯ ಪ್ರಮಾಣದಲ್ಲಿ ತೈಲ ಉತ್ಪನ್ನಗಳಿಗೆ ಶೇ.60 ರಷ್ಟು ತೆರಿಗೆ ವಿಧಿಸಿ ಜನ ಸಾಮಾನ್ಯರನ್ನು ಲೂಟಿ ಮಾಡುತ್ತಿವೆ. ತೈಲ ಬೆಲೆ ಏರಿಕೆಯಿಂದ ದಿನನಿತ್ಯದ ವಸ್ತುಗಳ ಬೆಲೆಯೂ ಗಗನಕ್ಕೇರುತ್ತಿದೆ. ರಾಜ್ಯ ಸರ್ಕಾರ ತೈಲೋತ್ಪನ್ನಗಳ ಮೇಲಿನ ತೆರಿಗೆ ಕಡಿಮೆ ಮಾಡಿದರೆ ಬೆಲೆ ಏರಿಕೆಯ ಭಾರ ಕಡಿಮೆಯಾಗುತ್ತದೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆ ಕಡಿಮೆ ಮಾಡಿ ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಸಲೀಂಖಾನ್, ಅಲ್ಲಾಭಕ್ಷಿ, ಕಲೀಂವುಲ್ಲಾ, ಮುಜೀಬ್, ಇಮ್ರಾನ್, ಅಸೀಫ್, ಸಾದೀಕ್, ಫೈರೋಜ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.