ಮಂಗಳೂರು ಐಟಿ ಪಾರ್ಕ್ ಶೀಘ್ರ : ಉಪ ಮುಖ್ಯಮಂತ್ರಿ ಡಾ| ಅಶ್ವತ್ಥನಾರಾಯಣ ಹೇಳಿಕೆ
Team Udayavani, Feb 25, 2021, 6:40 AM IST
ಮಂಗಳೂರು: ಕಿಯೋನಿಕ್ಸ್ ವತಿಯಿಂದ ಶೀಘ್ರವೇ ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಡಿಸಿಎಂ ಡಾ| ಅಶ್ವತ್ಥನಾರಾಯಣ ಹೇಳಿದ್ದಾರೆ.
ರಾಜ್ಯ ಸರಕಾರವು ರಾಜಧಾನಿ ಬೆಂಗ ಳೂರಿನಿಂದ ಹೊರಗೆ ಮಾಹಿತಿ ತಂತ್ರ ಜ್ಞಾನ ಉದ್ಯಮವನ್ನು ವಿಸ್ತರಿ ಸಲು ಪ್ರಯ ತ್ನಿಸು ತ್ತಿದ್ದು, ಮಂಗಳೂರು ನಗರವನ್ನು ಪ್ರಮುಖ ಕ್ಲಸ್ಟರ್ ಆಗಿ ಗುರುತಿಸಲಾಗಿದೆ ಎಂದು ಅವರು ಮಂಗಳೂರಿ ನಲ್ಲಿ ಬುಧವಾರ “ಮಂಗಳೂರು ಇನೊವೇಶನ್ ಕಾಂಕ್ಲೇವ್’ ಉದ್ಘಾ ಟನೆಯ ಸಂದರ್ಭದಲ್ಲಿ ಹೇಳಿದರು.
ದೇರೆಬೈಲ್‌ನಲ್ಲಿ 5 ಎಕರೆ ಜಮೀನು ಗುರುತಿಸಲಾಗಿದೆ. ಈ ಹಿಂದೆ ಹಲವು ಬಾರಿ ಟೆಂಡರ್ ಆಹ್ವಾನಿಸಿ ದ್ದರೂ ಯಾರೂ ಮುಂದೆ ಬಂದಿಲ್ಲ. ಈಗ ಕಿಯೋನಿಕ್ಸ್ ವತಿಯಿಂದ ಅಲ್ಲಿ ಐಟಿ ಪಾರ್ಕ್ ಅಭಿವೃದ್ಧಿ ಪಡಿಸಲಾಗುವುದು. ಅದರ ಪಕ್ಕದಲ್ಲಿಯೇ 4 ಎಕರೆ ಸರಕಾರಿ ಖಾಲಿ ಜಮೀನು ಇದ್ದು, ಅದನ್ನು ಕೂಡ ಐಟಿ ಪಾರ್ಕ್‌ಗೆ ಸೇರಿಸಿಕೊಳ್ಳಲಾಗುವುದು ಎಂದರು. ತನ್ನಲ್ಲಿರುವ ಸಂಪನ್ಮೂಲಗಳಿಂದ ಬೆಂಗಳೂರು ಐಟಿ ನಗರವಾಗಿ ಬೆಳೆದಿದೆ.
ಈಗ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಮಂಗಳೂರನ್ನು ಉದಯೋನ್ಮುಖ ತಂತ್ರಜ್ಞಾನ ಕ್ಲಸ್ಟರ್ ಆಗಿ ಗುರುತಿಸಲಾಗಿದೆ. ಅದನ್ನು ತ್ವರಿತಗತಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಾಗುವುದು. ಭವಿಷ್ಯದಲ್ಲಿ ಮಂಗಳೂರು ಐಟಿ ಉದ್ಯಮಗಳ ನೆಲೆಯಾಗುವುದರ ಜತೆಗೆ, ನವೋದ್ಯಮಗಳ ತಾಣವಾಗಿಯೂ ಹೊರಹೊಮ್ಮಲಿದೆ. ಅದಕ್ಕೆ ಬೇಕಾದ ಎಲ್ಲ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದರು.
ಮಂಗಳೂರಿನಲ್ಲಿ ಟೆಕ್ ಸಮ್ಮಿಟ್
ಇತ್ತೀಚೆಗೆ ನಡೆದ ಬೆಂಗಳೂರು ಟೆಕ್ ಸಮ್ಮಿಟ್ ಮಾದರಿಯಲ್ಲಿಯೇ ಮಂಗಳೂರಿನಲ್ಲಿ ಅಕ್ಟೋಬರ್‌ನಲ್ಲಿ ಟೆಕ್ ಸಮ್ಮಿಟ್ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಸಂಸ್ಕೃತಿಗೆ ಧಕ್ಕೆ ಆಗದಿರಲಿ: ನಳಿನ್
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು, ಕರಾವಳಿ ನಗರವಾದ ಮಂಗಳೂರಿನಲ್ಲಿ ಹೆಚ್ಚೆಚ್ಚು ಉದ್ಯೋಗಾವಕಾಶ ಸೃಷ್ಟಿಯಾಗಬೇಕು, ಉದ್ಯಮಗಳು ಬರಬೇಕು, ಆರ್ಥಿಕ ಚಟುವಟಿಕೆಗಳು ಹೆಚ್ಚಬೇಕು. ಆದರೆ, ಇವೆಲ್ಲವೂ ಮಂಗಳೂರಿನ ಸಂಸ್ಕೃತಿ ಮತ್ತು ಪರಂಪರೆಗೆ ಧಕ್ಕೆಯಾಗದಂತೆ ಆಗಬೇಕು ಎಂದು ಸಲಹೆ ಮಾಡಿದರು.
ಬೆಂಗಳೂರು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಆದರೆ, ಅಲ್ಲಿ ಕನ್ನಡಿಗರಿಗೆ ಆದ್ಯತೆ ಕಡಿಮೆಯಾಗಿದೆ. ಹೀಗಿರುವಾಗ, ಮಂಗಳೂರಿಗರನ್ನು ಉಳಿಸಿಕೊಂಡೇ ಮಂಗಳೂರು ಬೆಳೆಯಬೇಕು. ಈ ಹಿನ್ನೆಲೆಯಲ್ಲಿ ಇಲ್ಲಿನ ಶಿಕ್ಷಣ ತಜ್ಞರು, ಕೈಗಾರಿಕೋದ್ಯಮಿಗಳು, ಅ ಧಿಕಾರಿಗಳು ಹಾಗೂ ರಾಜಕೀಯ ನಾಯಕರನ್ನು ಒಳಗೊಂಡಂತೆ ಚರ್ಚೆಯಾಗಬೇಕು.
ಮಂಗಳೂರಿನಲ್ಲಿ 2023ರ ಹೊತ್ತಿಗೆ ವಾರ್ಷಿಕ 7,500 ಕೋಟಿ ರೂ. ಐಟಿ ವಹಿವಾಟು ನಡೆಸುವಷ್ಟು ಅನುಕೂಲವಿದೆ ಎಂದು ಒಂದು ಸಮೀಕ್ಷೆ ಹೇಳಿದೆ. ಮುಂದಿನ ದಿನಗಳಲ್ಲಿ ಮಂಗಳೂರಿಗೆ ಹೆಚ್ಚೆಚ್ಚು ಉದ್ಯಮಗಳು ಬರಲಿ; ಆ ಉದ್ಯಮಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅಲ್ಲ ಒಪ್ಪಿಗೆಗಳನ್ನು ನೀಡಬೇಕೆಂದು ಸಲಹೆ ಮಾಡಿದ ನಳಿನ್, ಮುಂದಿನ ಜೂನ್ ತಿಂಗಳಲ್ಲಿ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಸಲಾಗುವುದು ಎಂದು ಅವರು ಹೇಳಿದರು.
ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಪ್ರಸ್ತಾವನೆಗೈದರು. ಐಟಿ ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ| ಇ.ವಿ.ರಮಣ ರೆಡ್ಡಿ ದಿಕ್ಸೂಚಿ ಭಾಷಣ ಮಾಡಿದರು. ಸಿಸಿಐ ಅಧ್ಯಕ್ಷ ಸ್ಟೀವನ್ ಡೇವಿಡ್, ಶಾಸಕರಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಡಾ|ವೈ.ಭರತ್ ಶೆಟ್ಟಿ, ರಾಜೇಶ್ ನಾೖಕ್ ಉಳಿಪಾಡಿಗುತ್ತು, ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ಅವರು ಉಪಸ್ಥಿತರಿದ್ದರು. ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಎನ್. ಸಿದ್ದರಾಮಪ್ಪ ಸ್ವಾಗತಿಸಿದರು. ಉದ್ಘಾಟನೆಯ ಬಳಿಕ ಚರ್ಚಾಗೋಷ್ಠಿಗಳು ನಡೆದವು.
35,000 ಉದ್ಯೋಗ
ಮಂಗಳೂರನ್ನು ಉದ್ಯಮ ಶೀಲ ನಗರವನ್ನಾಗಿಸುವ ಕಲ್ಪನೆ ಇದೆ. ಈ ಹಿನ್ನೆಲೆಯಲ್ಲಿ ಈ ಕಾಂಕ್ಲೇವ್ ಏರ್ಪಡಿಸಲಾಗಿದೆ. ಮಂಗಳೂರಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪಾರ್ಕ್ ಸ್ಥಾಪಿಸಲಾಗುತ್ತಿದೆ. ಸ್ಮಾರ್ಟ್ ಸಿಟಿಯ ಜತೆಗೆ ಸ್ಮಾರ್ಟ್ ವಿಲೇಜ್ ಕೂಡಾ ನಿರ್ಮಾಣ ಆಗ ಬೇಕು. ಐಟಿಬಿಟಿ ಪಾರ್ಕ್ ಸ್ಥಾಪನೆ ಆಗುವುದರಿಂದ ಸುಮಾರು 35,000 ಉದೋÂಗ ಸೃಷ್ಟಿಯಾಗಲಿದೆ.
– ಹರಿಕೃಷ್ಣ ಬಂಟ್ವಾಳ, ಕಿಯೋನಿಕ್ಸ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.