ಅಧಿಕಾರಿಗಳ ಕಾರ್ಯವೈಖರಿಗೆ ಕಿಡಿ

ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಭಿಕ್ಷೆ ಬೇಡುವ ಸ್ಥಿತಿ

Team Udayavani, Feb 25, 2021, 4:09 PM IST

25-15

ಹರಿಹರ: ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನಲ್ಲಿ ಸಕಾಲಕ್ಕೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಕರ್ಯ ಸರಿಯಾಗಿ ಸಿಗುತ್ತಿಲ್ಲ. ಅಸಹಾಯಕರು ಅನಿವಾರ್ಯವಾಗಿ ಭಿಕ್ಷೆ ಬೇಡಲು ಬೀದಿಗೆ ಬರುತ್ತಿದ್ದಾರೆ ಎಂದು ಎಂದು ತಾಲೂಕು ಪಂಚಾಯಿತಿ ಸದಸ್ಯ ಕೊಟ್ರೇಶ್‌ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮಲೆಕ್ಕಾ ಧಿಕಾರಿಗಳು ಸೇರಿದಂತೆ
ಕಂದಾಯ ಇಲಾಖೆ ಅ ಕಾರಿಗಳು ಸರ್ಕಾರ ಅಸಹಾಯಕರಿಗೆ ನೀಡುವ ಮಾಸಿಕ ಪಿಂಚಣಿ ದೊರಕಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಇದರಿಂದ ವಿಕಲಚೇತನ, ವೃದ್ಧಾಪ್ಯ, ವಿಧವಾ ವೇತನ ಇತ್ಯಾದಿ ಪಿಂಚಣಿ ಪಡೆಯುವವರು ಭಿಕ್ಷೆ ಬೇಡುವ ಸ್ಥಿತಿ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಗರದಲ್ಲಿ ಭಿಕ್ಷುಕರ ಸಂಖ್ಯೆ ಮಿತಿ ಮೀರಿದೆ. ಈ ಕುರಿತು ಕೇಳಿದರೆ ಕಳೆದ ಆರು ತಿಂಗಳುಗಳಾದರೂ ಪಿಂಚಣಿ ಸಿಗದ ಕಾರಣ ಹೊಟ್ಟೆಪಾಡಿಗೆ, ಚಿಕಿತ್ಸೆ ಇತ್ಯಾದಿ ಅನಿವಾರ್ಯ ಕಾರಣಕ್ಕೆ ಭಿಕ್ಷೆ ಬೇಡುತ್ತಿದ್ದೇವೆ ಎಂದು ಹೇಳುತ್ತಾರೆ. ತಾಲೂಕಿನಲ್ಲಿ ಭಿಕ್ಷುಕರ ಪುನರ್ವಸತಿ ಕೇಂದ್ರವೂ ನಿರ್ವಹಣಾ ಸಿಬ್ಬಂದಿಗಳಿಲ್ಲದೆ ಕಾರ್ಯ ನಿರ್ವಹಿಸುತ್ತಿಲ್ಲ, ಅಧಿಕಾರಿಗಳಿಗೆ ಇದೆಲ್ಲಾ ಕಾಣುವುದಿಲ್ಲವಾ ಎಂದು ಖಾರವಾಗಿ ಪ್ರಶ್ನಿಸಿದರು.

ಗುಳದಳ್ಳಿ ಮಾಲತೇಶ್‌ ಮಾತನಾಡಿ, ಕೋವಿಡ್‌ ಲಾಕ್‌ಡೌನ್‌ ಕಾರಣ ಶಾಲೆಗಳಲ್ಲಿ ಪಾಠ ಪ್ರವಚನದಲ್ಲಿ ಹಿಂದುಳಿಯುವಂತಾಗಿದೆ. ಆದ್ದರಿಂದ ಭಾನುವಾರವೂ ಶಾಲೆ ನಡೆಸಬೇಕು. ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಗ್ರಾಮಗಳಲ್ಲೂ ಕೊಳವೆ ಬಾವಿ ದುರಸ್ತಿಪಡಿಸುವುದು ಸೇರಿದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದರು.

ಇದೇ ಸಂದರ್ಭದಲ್ಲಿ ದೇವರಬೆಳಕರೆ ಕ್ಷೇತ್ರದ ಸದಸ್ಯ ಜೆ.ಸಿ. ಮಾಲತೇಶ್‌ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಭೆಗೆ ಬಹುತೇಕ ಸದಸ್ಯರು ಗೈರಾಗಿದ್ದರು. ಹಾಜರಿದ್ದ ಬೆರಳೆಣಿಕೆ ಸದಸ್ಯರಲ್ಲೂ ಕೆಲವರು ಸಭೆಯ ಮಧ್ಯದಲ್ಲೇ ಎದ್ದು ಹೋದರು.

ತಾಪಂ ಅಧ್ಯಕ್ಷೆ ಶ್ರೀದೇವಿ ಮಂಜಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇಒ ಗಂಗಾಧರನ್‌, ಉಪಾಧ್ಯಕ್ಷೆ ಶಾಂತಮ್ಮ ಜಿ., ಸದಸ್ಯರಾದ ಬಸವನಗೌಡ ಬಸೆಟರ್‌, ಲಕ್ಷ್ಮೀ ಮಹಾಂತೇಶ್‌, ಭಾಗ್ಯಲಕ್ಷ್ಮೀ, ವಿಶಾಲಾಕ್ಷಮ್ಮ ಕೊಟ್ರೇಶ್‌, ರತ್ನಮ್ಮ, ಬಿಇಒ ಯು. ಬಸವರಾಜಪ್ಪ, ನೋಂದಣಾಧಿಕಾರಿ ಕರಿಬಸಪ್ಪ ಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ| ಚಂದ್ರಮೋಹನ್‌, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೇಖಾ, ಸಹಾಯಕ ಕೃಷಿ ನಿರ್ದೇಶಕ ಗೋವರ್ಧನ್‌, ಅಕ್ಷರ ದಾಸೋಹದ ನೋಟಗಾರ್‌ ಮತ್ತಿತರರು ಹಾಜರಿದ್ದರು.

ಓದಿ : ವಿಟ್ಲದಲ್ಲಿ ಬೈಕ್- ಲಾರಿ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ

 

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.