ವಂಚನೆ ಪ್ರಕರಣ: ನೀರವ್ ಮೋದಿ ಭಾರತಕ್ಕೆ ಗಡಿಪಾರು: ಬ್ರಿಟನ್ ಕೋರ್ಟ್ ತೀರ್ಪು
ಭಾರತಕ್ಕೆ ಗಡಿಪಾರು ಮಾಡಲು ಆದೇಶ ನೀಡಿರುವುದಾಗಿ ಬ್ರಿಟನ್ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
Team Udayavani, Feb 25, 2021, 4:25 PM IST
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ನೀರವ್ ಮೋದಿ ವಿರುದ್ಧ ನೀಡಿರುವ ಪ್ರಕರಣ ಮತ್ತು ಅದರ ಸಾಕ್ಷ್ಯವನ್ನು ಬ್ರಿಟನ್ ಕೋರ್ಟ್ ಸ್ವೀಕರಿಸಿರುವುದಾಗಿ ಗುರುವಾರ(ಫೆ.25. 2021) ತೀರ್ಪು ನೀಡಿದ್ದು, ಇದರೊಂದಿಗೆ ನೀರವ್ ಮೋದಿಗೆ ಗಡಿಪಾರಿನಿಂದ ತಪ್ಪಿಸಿಕೊಳ್ಳುವ ಕಾನೂನು ಸಮರದಲ್ಲಿ ದೊಡ್ಡ ಹಿನ್ನಡೆಯಾದಂತಾಗಿದೆ.
ವಜ್ರೋದ್ಯಮಿ ನೀರವ್ ಮೋದಿ 14 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ನೀಡಿರುವ ದಾಖಲೆ ತೃಪ್ತಿ ತಂದಿದ್ದು, ಭಾರತಕ್ಕೆ ಗಡಿಪಾರು ಮಾಡಲು ಆದೇಶ ನೀಡಿರುವುದಾಗಿ ಬ್ರಿಟನ್ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಪ್ರಕರಣದ ಸಾಕ್ಷ್ಯಾಧಾರದ ಪ್ರಕಾರ ನೀರವ್ ಮೋದಿಗೂ ಹಾಗೂ ಬ್ಯಾಂಕ್ ಅಧಿಕಾರಿಗಳು ಶಾಮೀಲಾಗಿರುವುದು ಸ್ಪಷ್ಟವಾಗಿದೆ ಎಂದು ವೆಸ್ಟ್ ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಡಿಸ್ಟ್ರಿಕ್ಟ್ ಜಡ್ಜ್ ಸಾಮ್ಯುಯೆಲ್ ಗೂಝೆ ತಿಳಿಸಿದ್ದಾರೆ.
ವಂಚನೆ ಪ್ರಕರಣದಲ್ಲಿ ನೀರವ್ ಮೋದಿಯನ್ನು ಭಾರತಕ್ಕೆ ಹಸ್ತಾಂತರಿಸಲು ಆದೇಶ ನೀಡಿದ್ದು, ಭಾರತದ ಜೈಲುಗಳು ಸುರಕ್ಷಿತವಾಗಿದೆ ಎಂದು ಬ್ರಿಟನ್ ಕೋರ್ಟ್ ತಿಳಿಸಿದೆ. ನೀರವ್ ಗಡಿಪಾರು ಆದೇಶವನ್ನು ಕೋರ್ಟ್ ವಿದೇಶಾಂಗ ಸಚಿವಾಲಯಕ್ಕೆ ಕಳುಹಿಸಲಿದ್ದು, ನಂತರ ಗಡಿಪಾರು ಕುರಿತ ಪ್ರಕ್ರಿಯೆ ನಡೆಯಲಿದೆ. ಬಳಿಕ ನೀರವ್ ಮೋದಿಯನ್ನು ಅಧಿಕಾರಿಗಳು ಭಾರತಕ್ಕೆ ಹಸ್ತಾಂತರಿಸಲಿದ್ದಾರೆ ಎಂದು ವರದಿ ತಿಳಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ಮತ್ತು ಹಣ ವರ್ಗಾವಣೆ ಪ್ರಕರಣದಲ್ಲಿ ನೀರವ್ ಗಡಿಪಾರಿಗಾಗಿ ಭಾರತದ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೆಶನಾಲಯ(ಇ.ಡಿ) ಲಂಡನ್ ಸರ್ಕಾರಕ್ಕೆ ಮನವಿ ಮಾಡಿತ್ತು. ನಂತರ ಬ್ರಿಟನ್ ಕೋರ್ಟ್ ನಲ್ಲಿ ಮೇಲ್ಮನವಿಯನ್ನೂ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.