28ಕ್ಕೆ ಧಮ್ಮ ದೀಕ್ಷಾ-ಚಿಂತನಾ ಸಮಾವೇಶ
ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 5 ಗಂಟೆವರೆಗೆ ಚರ್ಚೆ
Team Udayavani, Feb 25, 2021, 7:06 PM IST
ಶಹಾಪುರ: ಕಲ್ಯಾಣ ಕರ್ನಾಟಕ ಭಾಗದ ದಲಿತ ಸಂಘಟನೆಗಳ ನಾಯಕರು, ಪದಾಧಿ ಕಾರಿಗಳು ಮತ್ತು ಕಾರ್ಯಕರ್ತರು, ಪ್ರಮುಖರು ಗಣ್ಯರು ಒಗ್ಗಟ್ಟಾಗಿ
ಸಾಮೂಹಿಕವಾಗಿ ಧಮ್ಮ ದೀಕ್ಷೆಯತ್ತ ಒಲವು ತೋರಿದಲ್ಲಿ ಪ್ರಬುದ್ಧ ಭಾರತ ನಿರ್ಮಾಣ ಸಾಧ್ಯ ಎಂದು ಬೌದ್ಧ ಸಾಹಿತಿ ದೇವೇಂದ್ರ ಹೆಗಡೆ ಅಭಿಪ್ರಾಯಪಟ್ಟರು.
ನಗರದಲ್ಲಿ ಫೆ.28 ರಂದು ನಡೆಯಲಿರುವ ಕಲಬುರಗಿ ವಿಭಾಗ ಮಟ್ಟದ ಬೌದ್ಧ ದೀಕ್ಷಾ ಮತ್ತು ಚಿಂತನಾ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ವೈಜ್ಞಾನಿಕ ಬೆಳಕು, ವೈಚಾರಿಕ ಪ್ರಜ್ಞೆ ಮತ್ತು ಮಾನವೀಯ ಅನುಕಂಪದ ತಳಹದಿ ಮೇಲೆ ಮಾನವ ಕಲ್ಯಾಣದ ಬೌದ್ಧ ಧಮ್ಮ ಚಿಂತನೆಯನ್ನು ಎಲ್ಲರೂ ಮೈಗೂಡಿಸಿಕೊಂಡು ನಡೆಯಬೇಕಿದೆ. ಸಾಮೂಹಿಕ ನಾಯಕತ್ವ ಕಾರ್ಯಕ್ರಮದ ಯಶಸ್ಸಿಗೆ ಪೂರಕವಾಗಿದೆ ಎಂದರು.
ಆ ನಿಟ್ಟಿನಲ್ಲಿ ದಲಿತ ಸಂಘಟನೆಗಳ ನಾಯಕರು ಕೆಲಸ ಮಾಡಿದಲ್ಲಿ ಪ್ರಬುದ್ಧ ಭಾರತ ನಿರ್ಮಾಣವಾಗುವಲ್ಲಿ ಎರಡು ಮಾತಿಲ್ಲ. ನಮ್ಮ ನಡೆ ಬೌದ್ಧ ಧಮ್ಮದ ಕಡೆ
ಎನ್ನುವ ಘೋಷಣೆಯಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ನಡೆಯಬೇಕು.
ಧಮ್ಮ ದೀಕ್ಷಾ ಮತ್ತು ಧಮ್ಮ ಚಿಂತನಾ ಸಭೆ ಅತ್ಯಂತ ಮಹತ್ವದ್ದಾಗಿದೆ. ಈ ಸಭೆಯಲ್ಲಿ ಜನರು ಭಾಗವಹಿಸಿದ್ದಲ್ಲಿ ಅವರೆಲ್ಲರಲ್ಲಿ ಸಕಾರಾತ್ಮಕವಾಗಿ ಧಮ್ಮ
ಪ್ರಜ್ಞೆ ಮೂಡುವುದರಲ್ಲಿ ಸಂದೇಹವಿಲ್ಲ. ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸುವಿಕೆಯಿಂದ ಜನರು ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು
ಸಲಹೆ ನೀಡಿದರು.
ಫೆ.28 ನಗರದ ಧಮ್ಮಗಿರಿ ಬೆಟ್ಟದ ಬುದ್ಧ ವಿಹಾರದಲ್ಲಿ ಬೃಹತ್ ಪ್ರಮಾಣದಲ್ಲಿ ನಡೆಯಲಿರುವ ಚಿಂತನಾ ಕಾರ್ಯಕ್ರಮಕ್ಕೆ ಕಲಬುರಗಿ ವಿಭಾಗ ಮಟ್ಟದ ಎಲ್ಲಾ ದಲಿತ ಸಂಘಟನೆಗಳ ಮುಖಂಡರು ಮತ್ತು ಆರು ಜನ ಪ್ರಬುದ್ಧ ವಿಹಾರದ ಬೌದ್ಧ ಧಮ್ಮ ಬಿಕ್ಕುಗಳು ಹಾಗೂ ಬಂತೋಜಿಯವರು ಆಗಮಿಸಲಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 5 ಗಂಟೆವರೆಗೆ ಚರ್ಚೆ ಮತ್ತು ದೀಕ್ಷಾ ಸಮಾರಂಭ ಜರುಗಲಿದೆ. ಅಂದು ಪ್ರಗತಿಪರ ಹಿತ ಚಿಂತಕರು, ದಲಿತ ಮುಖಂಡರು, ಗಣ್ಯರು ಅಪಾರ ಸಂಖ್ಯೆಯಲ್ಲಿ ಡಾ.ಅಂಬೇಡ್ಕರ್ ಅಭಿಮಾನಿಗಳು, ಚಿಂತಕರು ಭಾಗವಹಿಸಲಿದ್ದಾರೆ. ದಲಿತ ಯುವ ಸಮೂಹ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ದಲಿತ ಸಂಘಟನೆಗಳ ಮುಖಂಡರಾದ ಮಹಾದೇವ ದಿಗ್ಗಿ, ಅಶೋಕ ಹೊಸಮನಿ, ರಾಹುಲ್ ನಾಟೇಕಾರ, ಶರಣು ದೋರನಹಳ್ಳಿ, ಮೌನೇಶ ಬೀರನೂರ, ಗುರು ಬಾಣತಿಹಾಳ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.