ಪತ್ರಿಕೋದ್ಯಮದಲ್ಲಿದೆ ವಿಪುಲ ಅವಕಾಶ


Team Udayavani, Feb 26, 2021, 4:17 PM IST

Journalism Dep Belagavi

ಬೆಳಗಾವಿ: ತಂತ್ರಜ್ಞಾನದ ಬೆಳವಣಿಗೆ, ಅಂತರ್ಜಾಲ ಸೌಲಭ್ಯ ಹಾಗೂ ಬದಲಾಗಿರುವ ಸನ್ನಿವೇಶದಲ್ಲಿ ಪತ್ರಿಕೋದ್ಯಮದ ಸ್ವರೂಪವೇ ಬದಲಾಗಿದೆ. ಆದರೆ ಮೂಲತತ್ವ ಹಾಗೇ ಉಳಿದುಕೊಂಡಿರುವುದರಿಂದ ಬರವಣಿಗೆಯ ತುಡಿತ ಹೊಂದಿರುವವರಿಗೆ ಪತ್ರಿಕೋದ್ಯಮದಲ್ಲಿ ವಿಪುಲ ಅವಕಾಶಗಳಿವೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹೇಳಿದರು.

ಗುರುವಾರ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂವಹನ  ಕೂಟ, ಪ್ರಸಕ್ತ ಸಾಲಿನ ವಿದ್ಯಾರ್ಥಿಗಳ ಸ್ವಾಗತ ಮತ್ತು 2019-20 ನೇ ಸಾಲಿನ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಿಂದಾಗಿ ಪ್ರತಿಯೊಬ್ಬರಿಗೂ ಬರೆಯುವ ಅವಕಾಶವಿದೆ. ಇದನ್ನು ಪತ್ರಿಕೋದ್ಯಮ ವಿದ್ಯಾರ್ಥಿಗಳು ಬಳಕೆ ಮಾಡಿಕೊಂಡು ವೃತ್ತಿಜೀವನ ರೂಪಿಸಿಕೊಳ್ಳಬಹುದು ಎಂದರು.

ನೌಕರಿಗಾಗಿ ಶಿಕ್ಷಣ ಎಂಬ ಪರಿಸ್ಥಿತಿ ಈಗ ಉಳಿದಿಲ್ಲ. ನೌಕರಿ ಹಾಗೂ ಶಿಕ್ಷಣ ಎರಡು ಬೇರೆ ಬೇರೆ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದನ್ನು ಅರಿತುಕೊಂಡು ವೃತ್ತಿ ಕೌಶಲಗಳನ್ನು ರೂಢಿಸಿಕೊಳ್ಳಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಂಯೋಜಕ ವಿನೋದ ಗಾಯಕವಾಡ ಮಾತನಾಡಿ, ಪತ್ರಿಕೋದ್ಯಮ  ವಿದ್ಯಾರ್ಥಿಗಳು ಪಠ್ಯಕ್ರಮದ ಅಧ್ಯಯನದ ಜೊತೆಗೆ ಕ್ಷೇತ್ರ ಭೇಟಿ ಮತ್ತು ಬರವಣಿಗೆ ಮೂಲಕ ಹೆಚ್ಚಿನ ಜ್ಞಾನ ಸಂಪಾದಿಸಬೇಕು ಎಂದು ಹೇಳಿದರು.

ಸಂವಹನ ಕೂಟದ ಕಾರ್ಯಚಟುವಟಿಕೆಗಳ ಕುರಿತು ಮಾತನಾಡಿದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಡಾ| ಸತೀಶ ಇಟಗಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಧನೆಗೈದ ಹಾಗೂ ವಿವಿಧ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರತಿವಾರ ಸಂವಹನ ಕೂಟಕ್ಕೆ ಆಹ್ವಾನಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ವಿಭಾಗದ ಉಪನ್ಯಾಸಕರಾದ ವಿದ್ಯಾಶ್ರೀ ಹಲಕೇರಿಮಠ, ಸುನಿತಾ ದಾಸರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಜಯ ಸ್ವಾಗತಿಸಿದರು, ಸಹನಾ ಭಜಂತ್ರಿ ನಿರೂಪಿಸಿದರು, ಪ್ರವೀಣ ಗೌಡರ ವಂದಿಸಿದರು.

ಟಾಪ್ ನ್ಯೂಸ್

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Nishkath-Dube

Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಬೆಂಬಲ

Priyanka-VA

Parliment: ವಯನಾಡ್‌ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Punjalkatte ಸರಪಾಡಿ: ತೆಂಗಿನಮರದಿಂದ ಬಿದ್ದ ವ್ಯಕ್ತಿ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Hebri: ಕಬ್ಬಿನಾಲೆ: ಮರದಿಂದ ಬಿದ್ದು ಕೃಷಿಕ ಸಾವು

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Mulki: ಮತ್ತೆ ಚಿರತೆ ಪ್ರತ್ಯಕ್ಷ, ಹೆಚ್ಚಿದ ಭೀತಿ

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

Rain-TN

Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.