ಉಳವಿ ಚೆನ್ನಬಸವೇಶ್ವರ ಮಹಾರಥೋತ್ಸವ ನಾಳೆ
ಭಕ್ತಾದಿಗಳಿಗೆ ಟ್ರಸ್ಟ್ ಕಮೀಟಿಯಿಂದ ಕೋವಿಡ್ ಪರೀಕ್ಷೆ
Team Udayavani, Feb 26, 2021, 4:42 PM IST
ಜೋಯಿಡಾ: ವೀರಶೈವರ ಪುಣ್ಯ ಕ್ಷೇತ್ರ ಉಳವಿಯಲ್ಲಿ ಫೆ.27 ರಂದು ಮಹಾರಥೋತ್ಸವ ನಡೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾವಿರಾರು ಸಂಖ್ಯೆಯಲ್ಲಿ ಜನ ಗುಂಪುಗೂಡದಂತೆ ಮುನ್ನೆಚ್ಚರಿಕಾ ಕ್ರಮಕೈಗೊಂಡು ಸರಳರೀತಿಯಲ್ಲಿ ನಡೆಸುವುದಾಗಿ ಟ್ರಸ್ಟ್‌ಕಮೀಟಿ ಅಧ್ಯಕ್ಷ ಗಂಗಾಧರ ಕಿತ್ತೂರ ತಿಳಿಸಿದ್ದಾರೆ.
ಈಗಾಗಲೆ ದೂರದೂರದಿಂದ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ದೇವರದರ್ಶನಕ್ಕೆ ಸಾಲುಗಟ್ಟಿ ನಿಲ್ಲುವ ಮೂಲಕ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಆದರೆ ದೇವಸ್ಥಾನ ಕಮೀಟಿ ಸರಕಾರದ ಆದೇಶದಂತೆ ಕೊರೋನಾ ನಿಯಮ ಪಾಲನೆಗೆ ಭಕ್ತಾದಿಗಳಲ್ಲಿ ಎಚ್ಚರಿಕೆ ನೀಡುತ್ತಿದ್ದು, ಗುಂಪುಗೂಡದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಕಂಡುಬಂದಿದೆ.
ಉಳವಿ ಗ್ರಾಪಂ ಚೆನ್ನಬಸವೇಶ್ವರನ ಭಕ್ತಾದಿಗಳಿಗೆ ಜಾತ್ರಾ ಆವರಣದಲ್ಲಿ ಕುಡಿಯವ ನೀರು ಹಾಗೂ ಕಸದ ತೊಟ್ಟಿ ಇಟ್ಟು ಸ್ವತ್ಛತೆ ಕಾಪಾಡಿದೆ. ಉಳವಿ ಜಾತ್ರೆಯಲ್ಲಿ ಬಂದುಹೋಗುವ ಭಕ್ತಾದಿಗಳಿಗೆ ಹಾಗೂ ಎತ್ತುಗಳಿಗೆ ನೀರಿನ ಕೊರತೆ ಆಗದಂತೆ ಗ್ರಾಪಂ ಅಗತ್ಯ ಕ್ರಮಕೈಗೊಂಡಿದೆ. ಉಳವಿ ಕ್ಷೇತ್ರಕ್ಕೆ ಬರುವ ಭಕ್ತಾದಿಗಳ ಚಕ್ಕಡಿಗಾಡಿ ಎತ್ತುಗಳಿಗೆ ಚಿಕಿತ್ಸೆ, ಔಷಧೋಪಚಾರಕ್ಕೆ ಪಶುಸಂಗೋಪನೆ ಇಲಾಖೆ ವೈದ್ಯಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದರೆ, ಭಕ್ತಾದಿಗಳ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ಸಂಬಂಧಿ ಮುನ್ನೆಚ್ಚರಿಕಾ ಕ್ರಮಕ್ಕಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ.
ಚೆನ್ನಬಸವೇಶ್ವರರ ಜಾತ್ರೆಗೆ ಆಗಮಿಸುತ್ತಿರುವ ಎಲ್ಲಾ ಭಕ್ತಾದಿಗಳಿಗೆ ಉಳವಿ ಗ್ರಾಪಂ ವತಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಬಂದಂತಹ ಭಕ್ತಾದಿಗಳು ಕ್ಷೇತ್ರದಲ್ಲಿ ಸ್ವತ್ಛತೆ ಹಾಗೂ ಕೋವಿಡ್ ನಿಯಮ ಪಾಲಿಸುವಲ್ಲಿ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.