ವಿವಿಧ ಬೇಡಿಕೆ ಈಡೇರಿಕೆಗಾಗಿ ಮನವಿ
Team Udayavani, Feb 26, 2021, 5:55 PM IST
ದೇವನಹಳ್ಳಿ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಮಾಡಿ, ನೌಕರರಿಗೆ ತರಬೇತಿ ಕೊಡಬೇಕು. ಮೊಟ್ಟೆಯನ್ನು ಆಹಾರ ಪದಾರ್ಥಗಳ ಜತೆಯಲ್ಲಿ ಸರಬರಾಜು ಮಾಡಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಅಂಗನವಾಡಿ ನೌಕರರ ಸಂಘದಿಂದ ನಗರದ ಶಾಸಕರ ಕಚೇರಿಯಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಪುಷ್ಪವತಮ್ಮ ಮಾತನಾಡಿ, ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಗೆ ತಮ್ಮ ಪಾಲಿನ ಷೇರನ್ನು ಹೆಚ್ಚಿಸಬೇಕು. ಬಜೆಟ್‌ನಲ್ಲಿ ಕಡಿತವಾಗಿ ರುವ 8,452.38 ಕೋಟಿ ರೂ.ಹಣ ವಾಪಾಸ್ ನೀಡಬೇಕು. ಕಾರ್ಯಕರ್ತೆ ಯರಿಗೆ 30 ಸಾವಿರ ರೂ., ಸಹಾಯಕಿ ಯಗೆ 21 ಸಾವಿರ ರೂ.ವೇತನ ಕೊಡ ಬೇಕು. ಸೇವಾಜೇಷ್ಠತೆ ಆಧಾರದಲ್ಲಿ ವೇತನ ಪಾವತಿ ಮಾಡಬೇಕು. ಕೊರೊನಾ ವಾರಿಯರ್ಸ್‌ಗಳಾಗಿ ನಿಧನರಾದ 25 ಅಂಗನವಾಡಿ ನೌಕರರಿಗೆ ಕೂಡಲೇ 30 ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ಎಲ್.ಎನ್.ನಾರಾಯಣ ಸ್ವಾಮಿ ಮನವಿ ಸ್ವೀಕರಿಸಿ ಮಾತನಾಡಿ, ಸರ್ಕಾರದ ಗಮನಕ್ಕೆ ತರುತ್ತೇನೆ. ಅಧಿ ವೇಶನದಲ್ಲಿ ನಿಮ್ಮ ಬೇಡಿಕೆಗಳು ಸಂಬಂಧಿ ಸಿದಂತೆ ಚರ್ಚಿಸುತ್ತೇನೆ. ಸರ್ಕಾರ ಕೂಡಲೇ ಕೊರೊನಾ ವಾರಿಯರ್ಸ್ ಗಳಾಗಿ ಸಾವನ್ನಪ್ಪಿದವರಿಗೆ 30 ಲಕ್ಷ ರೂ. ಪರಿಹಾರ ಕೊಡಬೇಕು. ಕಾರ್ಯಕರ್ತೆ ಯರಿಗೆ, ಸಹಾಯಕಿಯರಿಗೆ ಸಂಬಳ ನೀಡಲು ಸರ್ಕಾರಕ್ಕೆ ಒತ್ತಡ ತರುತ್ತೇನೆ ಎಂದು ಒತ್ತಾಯಿಸಿದರು.
ಅಂಗನವಾಡಿ ನೌಕರರ ಸಂಘದ ಖಜಾಂಚಿ ಅನುಸೂಯದೇವಿ, ಕಾರ್ಯ ದರ್ಶಿ ಪಾರ್ವತಮ್ಮ, ಸಹ ಕಾರ್ಯದರ್ಶಿ ಲೀಲಾವತಿ, ಸದಸ್ಯರಾದ ರತ್ನಮ್ಮ, ಅರಸಮ್ಮ, ವಸಂತ, ಲತಾ, ಲಕ್ಷ್ಮೀ ಆಶಾ ,ಗಿರಿಜಾಂಬ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.