ನಿಲ್ಲದ ಕೋವಿಡ್ ಮಹಾ ಮಾರುತ

Team Udayavani, Feb 27, 2021, 7:00 AM IST

ನಿಲ್ಲದ ಕೋವಿಡ್  ಮಹಾ ಮಾರುತ

ಮುಂಬಯಿ/ ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಸತತ 2ನೇ ದಿನವೂ 8 ಸಾವಿರಕ್ಕೂ ಅಧಿಕ ಕೋವಿಡ್ ಕೇಸ್‌ಗಳು ದೃಢಪಟ್ಟಿದೆ. ಗುರುವಾರದ 24 ಗಂಟೆಗಳಲ್ಲಿ 8,702 ಮಂದಿಗೆ ಹೆಮ್ಮಾರಿ ತಗುಲಿದ್ದು, 56 ಸೋಂಕಿತರು ಜೀವತೆತ್ತಿದ್ದಾರೆ. 119 ದಿನಗಳ ಅನಂತರ ಮುಂಬಯಿ ಒಂದರಲ್ಲೇ 1,145 ಪ್ರಕರಣ ದಾಖಲಾಗಿದೆ.

ಸಚಿವರಿಗೆ ಕಂಟಕ: ಮಹಿಳೆ ಆತ್ಮಹತ್ಯೆ ಪ್ರಕರಣ ವಿವಾದದ ಬಳಿಕ ಇದೇ ಮೊದಲ ಬಾರಿಗೆ ಸಾರ್ವಜನಿಕರಿಗೆ ದರ್ಶನ ಕೊಟ್ಟಿದ್ದ ಸಚಿವ, ಶಿವಸೇನೆ ಮುಖಂಡ ಸಂಜಯ್‌ ರಾಥೋಡ್‌ಗೆ ಕಂಟಕ ಎದುರಾಗಿದೆ. ಕರಾಂಜದ ಪೊಹರಾದೇವಿ ದೇಗುಲಕ್ಕೆ ಸಚಿವ ಭೇಟಿ ನೀಡಿದ್ದ ವೇಳೆ, ಒಬ್ಬ ಅರ್ಚಕ ಸೇರಿದಂತೆ 18 ಭಕ್ತರಿಗೆ ಪಾಸಿಟಿವ್‌ ದೃಢಪಟ್ಟಿರುವುದು ತಿಳಿದುಬಂದಿದೆ. 8 ಜಿಲ್ಲೆಗಳಲ್ಲಿನ ಲಾಕ್‌ಡೌನ್‌ ಅನ್ನು ರಾಜ್ಯಾದ್ಯಂತ ವಿಸ್ತರಿಸಲು ಸರಕಾರ ಹಿಂದೇಟು ಹಾಕುತ್ತಿದೆ. ಬದಲಾಗಿ, ರೈಲು- ಬಸ್‌ಗಳ ಸಂಖ್ಯೆ ಕಡಿತಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ- ತರಗತಿಗಳನ್ನು ಆನ್‌ಲೈನ್‌ ಮೂಲಕ ಮುಂದುವರಿಸಲು ನಿರ್ಧರಿಸಿದೆ.

ಬ್ರೆಜಿಲ್‌ಗೆ 2 ಕೋಟಿ ವ್ಯಾಕ್ಸಿನ್‌ :

ಭಾರತ್‌ ಬಯೋಟೆಕ್‌ನ ಕೊವ್ಯಾಕ್ಸಿನ್‌ ಲಸಿಕೆಯ 2 ಕೋಟಿ ಡೋಸ್‌ಗಳ ಖರೀದಿ ಒಪ್ಪಂದಕ್ಕೆ ಬ್ರೆಜಿಲ್‌ ಆರೋಗ್ಯ ಸಚಿವಾಲಯ ಸಹಿ ಹಾಕಿದೆ. ಮಾರ್ಚ್‌ ಅಥವಾ ಮೇ ವೇಳೆಗೆ ಭಾರತ ಲಸಿಕೆ ಪೂರೈಸಲಿದೆ. ಒಪ್ಪಂದದ ಒಟ್ಟು ಮೊತ್ತ 21.15 ಕೋಟಿ ರೂ. ಆಗಿದ್ದು, ಮಾರ್ಚ್‌ನಲ್ಲಿ ಮೊದಲ 80 ಲಕ್ಷ ಡೋಸ್‌ಗಳು ಬ್ರೆಜಿಲ್‌ ತಲುಪಲಿದೆ.

ಕೋವಿಡ್ ಪತ್ತೆಗೆ ಚಿಪ್‌ ರೆಡಿ :

ಕೋವಿಡ್ ಸೋಂಕು ದೃಢಪಡಿಸಲು ವಿಜ್ಞಾನಿಗಳು ಸ್ಟಾಂಪ್‌ ಗಾತ್ರದ ಚಿಪ್‌ ಸಿದ್ಧಗೊಳಿಸಿದ್ದು, ಸ್ಮಾರ್ಟ್‌ಫೋನ್‌ ಮೂಲಕ ಕೇವಲ 55 ನಿಮಿಷಗಳಲ್ಲಿ ಇದು ಫ‌ಲಿತಾಂಶ ಪ್ರಕಟಿಸುತ್ತದೆ. ಚಿಪ್‌ನಲ್ಲಿನ ಎಲೆಕ್ಟ್ರೊಕೆಮಿಕಲ್‌ ಸೆನ್ಸಾರ್‌ ಬಯೋಮಾರ್ಕರ್‌ಗೆ ಅಂಟಿಕೊಂಡ ವ್ಯಕ್ತಿಯ ರಕ್ತದ ಕಣವನ್ನು ಸ್ಕ್ಯಾನ್‌ ಮಾಡುವ ಮೂಲಕ ಕೊರೊನಾ ವೈರಾಣುವನ್ನು ದೃಢಪಡಿಸುತ್ತವೆ ಅಮೆರಿಕದ ರೈಸ್‌ ವಿವಿಯ ವಿಜ್ಞಾನಿಗಳ ಸಮರ್ಥನೆ.

ಮತ್ತೆ ಎದ್ದ ಕೋವಿಡ್ ಭೀತಿ :

ಕೇರಳ: ಗುರುವಾರದ 24 ಗಂಟೆಗಳಲ್ಲಿ 3,677 ಪ್ರಕರಣಗಳು ದೃಢಪಟ್ಟಿವೆ.

ಒಡಿಶ್ಸಾ: ಕೇರಳ, ಕರ್ನಾಟಕ ಸೇರಿದಂತೆ 12 ರಾಜ್ಯಗಳ ಪ್ರಯಾಣಿಕರಿಗೆ ಸ್ಕ್ರೀನಿಂಗ್‌ ಕಡ್ಡಾಯ: ಒಡಿಸ್ಸಾ

ರಾಜಸ್ಥಾನ: ಮಹಾರಾಷ್ಟ್ರ, ಕೇರಳದಿಂದ ಆಗಮಿಸುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಿದೆ.

ತಮಿಳುನಾಡು: ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಒಂದು ವಾರ ಕ್ವಾರಂಟೈನ್‌

ಮೋದಿ ಕೊಂಡಾಡಿದ ಡಬ್ಲ್ಯುಎಚ್‌ಒ :

“ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ವಿಶ್ವದ 60ಕ್ಕೂ ಅಧಿಕ ರಾಷ್ಟ್ರಗಳಿಗೆ ಲಸಿಕೆ ಪೂರೈಸಿದೆ. ಜಗತ್ತಿನ ಇತರ ರಾಷ್ಟ್ರಗಳೂ ಭಾರತವನ್ನು ಅನುಸರಿಸಬೇಕು’ ಎಂದು ಡಬ್ಲ್ಯುಎಚ್‌ಒ ಪ್ರಧಾನ ನಿರ್ದೇಶಕ ಟೆಡ್ರಾಸ್‌ ಅಧಾನಾಮ್‌ ಘೆಬ್ರೆಯೆಸುಸ್‌ ಟ್ವೀಟ್‌ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.