ಅಕ್ರಮ ಗಣಿಗಾರಿಕೆ ಸ್ಥಗಿತಕ್ಕೆ ಒತ್ತಾಯ
ಬಹುಜನ ಸಮಾಜ ಪಕ್ಷದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ
Team Udayavani, Feb 27, 2021, 3:39 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ತಕ್ಷಣ ನಿರ್ಬಂಧಿ ಸುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಶುಕ್ರವಾರ ನಗರದಲ್ಲಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಯಾವುದೇ ಪರವಾನಗಿ ಮತ್ತು ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ಅಕ್ರಮವಾಗಿ ಕಲ್ಲುಕ್ವಾರಿಗಳನ್ನು ನಡೆಸುತ್ತಿದ್ದು, ಕ್ವಾರಿಗಳಲ್ಲಿ ಸಂಗ್ರಹಿಸಿರುವ ಸ್ಪೋಟಕಗಳಿಂದ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದೂರಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಎಲ್ಲೆಂದರಲ್ಲಿ ಕಲ್ಲುಕ್ವಾರಿಗಳು ಅಕ್ರಮವಾಗಿ ನಡೆಯುತ್ತಿವೆ. ನಗರದಿಂದ ಕೇವಲ 2 ಕಿ.ಮೀ. ದೂರದಲ್ಲಿರುವ ನಲ್ಲೂರಿನಲ್ಲಿ ಗಣಿಗಾರಿಕೆ ಹಲವು ವರ್ಷಗಳಿಂದ ನಡೆಯುತ್ತಿದೆ. ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸದಿರು ವುದರಿಂದ ಕಾರ್ಮಿಕರು ಜೀವ ಬಿಗಿ ಹಿಡಿದು ಕೆಲಸ ಮಾಡುವಂತಹ ಪರಿಸ್ಥಿತಿ ಇದೆ ಎಂದರು.
ಕಾರ್ಮಿಕರ ಹಿತರಕ್ಷಣೆ ಮತ್ತು ಬೇರೆ ಜಿಲ್ಲೆಗಳಲ್ಲಾದಂತೆ ನಮ್ಮ ಜಿಲ್ಲೆಯಲ್ಲೂ ಸ್ಟೋಟ ಮತ್ತು ಪ್ರಾಣಹಾನಿ ಆಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆಗಳನ್ನು ನಿರ್ಬಂ ಧಿಸಬೇಕು. ಅಕ್ರಮವಾಗಿ ನಡೆಸುತ್ತಿರುವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಿಎಸ್‌ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಕಚೇರಿ ಕಾರ್ಯದರ್ಶಿ ಕೆ.ಆರ್. ಗಂಗಾಧರ್, ತಾಲೂಕು ಅಧ್ಯಕ್ಷ ಹರೀಶ್ ಮಿತ್ರ, ಜಿಲ್ಲಾ ಸಹೋದರತ್ವ ಸಮಿತಿ ಅಧ್ಯಕ್ಷೆ ಕೆ.ಬಿ. ಸುಧಾ, ಪದಾ ಧಿಕಾರಿಗಳಾದ ಕೆ.ಎಸ್. ಮಂಜುಳಾ, ರೇಖಾ, ವಸಂತ, ಮೋಹನ್, ಹುಣಸೇಮಕ್ಕಿ ಲಕ್ಷ್ಮಣ್, ವಿನೀತ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.