ಭಾರತದಲ್ಲಿ ಉದ್ಯೋಗಿಗಳಿಗೆ ಗರಿಷ್ಠ ದುಡಿಮೆ,ಕನಿಷ್ಠ ವೇತನ! 2020-21ರ ILO ವರದಿಯಲ್ಲಿ ಮಾಹಿತಿ
Team Udayavani, Feb 27, 2021, 11:20 PM IST
ಹೊಸದಿಲ್ಲಿ: ಜಗತ್ತಿನ ಪ್ರಮುಖ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೆಲಸದ ಅವಧಿ ಗರಿಷ್ಠ ಪ್ರಮಾಣದಲ್ಲಿದೆ. . ಕಾರ್ಯಾವಧಿ ನಡುವೆ ವಿರಾಮದ ಅವಧಿಯೂ ಅಲ್ಪ, ಕನಿಷ್ಠ ವೇತನದ ಪ್ರಮಾಣವೂ ಕಡಿಮೆ ಎಂದು ಅಂತಾರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‌ಒ) ವರದಿಯಲ್ಲಿ ಹೇಳಲಾಗಿದೆ. ಅದು 2020-21ರ ಅವಧಿಯಲ್ಲಿ ಜಗತ್ತಿನ ಯಾವ್ಯಾವ ದೇಶಗಳಲ್ಲಿ, ನೌಕರರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅಧ್ಯಯನ ಮಾಡಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ವಾರಕ್ಕೆ ಕೆಲಸದ ಅವಧಿಯನ್ನು 48 ಗಂಟೆಗಳವರೆಗೆ ವಿಸ್ತರಿಸಬಹುದು. ಈ ದೇಶಕ್ಕೆ ಹೋಲಿಸಿದರೆ ಮಾಲ್ಡೀವ್ಸ್, ಕತಾರ್, ಮಂಗೋಲಿಯ, ಜಾಂಬಿಯ ದೇಶಗಳಲ್ಲಿ ಮಾತ್ರ ಕೆಲಸದ ಅವಧಿ ಜಾಸ್ತಿಯಿದೆ ಎಂದು ಐಎಲ್‌ಒ ವರದಿಯಲ್ಲಿ ಹೇಳಲಾಗಿದೆ.
ಐಎಲ್‌ಒ ಸಲ್ಲಿಸಿದ “ಕೊರೊನಾ ಅವಧಿಯಲ್ಲಿ ವೇತನ ಮತ್ತು ಕನಿಷ್ಠ ವೇತನ’ ವರದಿಯಲ್ಲಿ ಮೇಲಿನ ಮಾಹಿತಿಗಳು ಅಡಕವಾಗಿವೆ. 2019ರಲ್ಲಿ ನಡೆದ ಅಧ್ಯಯನವೊಂದರಲ್ಲೂ ಇಂತಹದ್ದೇ ಮಾಹಿತಿ ಪ್ರಕಟವಾಗಿತ್ತು. ಗ್ರಾಮೀಣ ಮತ್ತು ನಗರ ಭಾಗಗಳೆರಡಲ್ಲೂ ಪುರುಷರು ಮಹಿಳೆಯರಿಗಿಂತ ದೀರ್ಘಾವಧಿ ದುಡಿಯುತ್ತಾರೆ. ಇಬ್ಬರನ್ನೂ ಪರಿಗಣಿಸಿದರೆ ನಗರಪ್ರದೇಶದಲ್ಲಿ ಕೆಲಸದ ಅವಧಿ ಜಾಸ್ತಿ ಎಂದು ಐಎಲ್‌ಒ ವರದಿಯಲ್ಲಿ ಹೇಳಲಾಗಿದೆ.
ಬೇರೆ ದೇಶಗಳಲ್ಲಿ ಪರಿಸ್ಥಿತಿ ಹೇಗಿದೆ?: ಚೀನದಲ್ಲಿ ವ್ಯಕ್ತಿಯೊಬ್ಬ ವಾರದಲ್ಲಿ ಸರಾಸರಿ 46 ಗಂಟೆಗಳ ಕಾಲ ದುಡಿಯುತ್ತಾನೆ. ಅಮೆರಿಕದಲ್ಲಿ 37 ಗಂಟೆ, ಇಂಗ್ಲೆಂಡ್ ಮತ್ತು ಇಸ್ರೇಲ್ನಲ್ಲಿ 36 ಗಂಟೆಗಳ ಕಾಲ ದುಡಿಯುತ್ತಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.