ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ

Team Udayavani, Feb 28, 2021, 12:32 PM IST

ಶ್ರೀಕಂಠನ ಹುಣ್ಣಿಮೆ ದರ್ಶನಕ್ಕೆ ಭಕ್ತ ಸಾಗರ

ನಂಜನಗೂಡು: ಕೋವಿಡ್ ಹಿನ್ನೆಲೆ 11 ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಶ್ರೀಕಂಠೇಶ್ವರನ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ. ಜೊತೆಗೆ ದಾಸೋಹ ಭವನದಲ್ಲಿ 15 ಸಾವಿರಕ್ಕೂ ಅಧಿಕ ಭಕ್ತರು ಪ್ರಸಾದ ಸವಿದಿದ್ದಾರೆ.

ತಿಂಗಳದ ಕೊನೆಯ ಶನಿವಾರ ಮಾಗಿ ಹುಣ್ಣಿಮೆ ಬಂದಿದ್ದು, ನಂಜನಗೂಡು ಶ್ರೀಕಂಠೇಶ್ವರ ಸನ್ನಿಧಿಯಲ್ಲಿ ಭಕ್ತ ಸಾಗರವೇ ನೆರೆದಿತ್ತು. ಶನಿವಾರ ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಭಾರೀ ಸಂಖ್ಯೆ ಯಲ್ಲಿ ಆಗಮಿಸಿದ್ದರು. ಹುಣ್ಣಿಮೆ ದಿನ ಶ್ರೇಷ್ಠ ಎಂದು ಭಾವಿಸಲಾಗಿದ್ದು,ಪ್ರತಿ ಹುಣ್ಣಿಗೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದು ಸಾಮಾನ್ಯವಾಗಿದೆ. ಆದರೆ, 11 ತಿಂಗಳಬಳಿಕ ಇದೇ ಮೊದಲ ಬಾರಿಗೆ ಬಗಿ ನಿಯಮಗಳು ಸಡಿಲವಾಗಿದ್ದರಿಂದ ಇಷ್ಟು ಪ್ರಮಾಣದಲ್ಲಿ ಭಕ್ತರು ಆಗಮಿಸಿದ್ದರು. ಸುಮಾರು 25-30 ಸಾವಿರ ಮಂದಿ ಶ್ರೀಕಂಠೇಶ್ವರನ ದರ್ಶನ ಪಡೆದಿದ್ದಾರೆ. ಬೆಳಗ್ಗೆಯಿಂದಲೇ ಸಾಲಗಟ್ಟಿ ನಿಂತಿದ್ದ ಭಕ್ತರು ದರ್ಶನ ಪಡೆಯಲು ತುಸು ಹರಸಾಹಸ ಪಡೆಯಬೇಕಾಯಿತು.

ಶನಿವಾರ ನಸುಕಿನಿಂದಲೇ ದೇಗುಲದ ಸನ್ನಿಧಿಗೆ ಆಗಮಿಸಿದ್ದ ಭಕ್ತರು ಕಪಿಲೆ ನದಿ ಸ್ನಾನಘಟ್ಟದಲ್ಲಿ ಮಿಂದೆದ್ದರು. ಹರಕೆ ಹೊತ್ತಿದ್ದ ಭಕ್ತರು ಮುಡಿ ಸೇವೆಸಲ್ಲಿಸಿ ಹೊಳೆಯಲ್ಲಿ ಪುಣ್ಯಸ್ನಾನ ಮಾಡಿ ನಂಜುಡೇ ಶ್ವರನ ದರ್ಶನ ಪಡೆದು ಧನ್ಯತಾಭಾವ ಮೆರೆದರು. ವಿಶೇಷ ದರ್ಶನ: ಶನಿವಾರ 4 ಸಾವಿರಕ್ಕೂ ಅಧಿಕಭಕ್ತರು ತಲಾ 100 ರೂ. ಟಿಕೆಟ್‌ ಪಡೆದು ವಿಶೇಷ ದರ್ಶನ ಪಡೆದರೆ, 3 ಸಾವಿರಕ್ಕೂ ಹೆಚ್ಚು ಮಂದಿ ತಲಾ 50 ರೂ.ಟಿಕೆಟ್‌ ಪಡೆದಿದ್ದರು. 100 ರೂ.ಟಿಕೆಟ್‌ ಮೊತ್ತವೇ ಸುಮಾರು 4.3 ಲಕ್ಷ ರೂ. ಆಗಿದೆ. 50 ರೂ. ಟಿಕೆಟ್‌ ಮೊತ್ತವು 1.40 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟಾರೆ ಶನಿವಾರದ ದೈನಂದಿನ ಆದಾಯ 5 ಲಕ್ಷ ರೂ. ದಾಟಿದೆ.

ಉಳಿದಂತೆ 20,000 ಹೆಚ್ಚು ಭಕ್ತರು ಸರದಿ ಸಾಲಿನಲ್ಲಿ ನಿಂತು ಶ್ರೀಕಂಠೇಶ್ವರನನ್ನು ಕಣ್ತುಂಬಿಕೊಂಡರು. ನಂಜನಗೂಡಿನಲ್ಲಿ ಕೊರೊನಾ ಆರಂಭವಾದ ವರ್ಷದ ನಂತರ ಇದೇ ಮೊದಲ ಬಾರಿ ಬಿಗಿ ನಿಯಮಗಳು ಸಡಿಲವಾಗಿದ್ದು, ಹೀಗಾಗಿ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ದೇಗುಲಕ್ಕೆ ಧಾವಿಸಿತ್ತು.

ಪ್ರಸಾದ ಸ್ವೀಕಾರ: ದೇವಾಲಯದ ವತಿಯಿಂದ ಇದೀಗ ದಾಸೋಹ ಸೇವೆ ಪುನಾರಂಭವಾಗಿದ್ದು, ಶನಿವಾರ 15 ಸಾವಿರಕ್ಕೂ ಹೆಚ್ಚು ಭಕ್ತರು ಕೋವಿಡ್ ಭಯದ ನಡುವೆಯೂ ದಾಸೋಹ ಭವನಕ್ಕೆತೆರಳಿ ಶ್ರೀಕಂಠೇಶ್ವರನ ಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದುದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.