ನಮ್ಮೊಲುಮೆಯಲ್ಲಿ ಭಾವಾಭಿನಂದನ ವಿಶೇಷ ರಸಮಂಜರಿ
Team Udayavani, Feb 28, 2021, 4:39 PM IST
ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಮ್ಮೊಲುಮೆ ಕಾರ್ಯಕ್ರಮದ ನಂತರ ಭಾವಾಭಿನಂದನಾ ರಸಮಂಜರಿ ಕಾರ್ಯಕ್ರಮ ಬಹಳ ಅದ್ಭುತವಾಗಿ ಮೂಡಿಬರಲಿದೆ ಎಂದು ಖ್ಯಾತ ಗಾಯಕ ವಿಜಯಪ್ರಕಾಶ್ ಹೇಳಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕದಲ್ಲಿಯೇ ಅತ್ಯಂತ ದೊಡ್ಡ ಮಟ್ಟದಲ್ಲಿ ನಡೆಯುವ ಕಾರ್ಯಕ್ರಮ ಇದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕುರಿತಾದ ಒಂದು ವಿಶೇಷ ಹಾಡನ್ನು ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾಗುವುದು. ಈ ಹಾಡನ್ನು ಖ್ಯಾತ ಗೀತರಚನೆಕಾರ ಕೆ. ಕಲ್ಯಾಣ್ ರಚಿಸಿದ್ದು ನಾನೇ ಸಂಗೀತ ನೀಡಿದ್ದೇನೆ. ರಾಜೇಶ್ ಕೃಷ್ಣನ್ ಅವರ ಜೊತೆ ಸೇರಿಕೊಂಡು ನೃತ್ಯ ತಂಡದೊಂದಿಗೆ ಭಾವಾಭಿನಯದ ಮೂಲಕ ಮುಖ್ಯಮಂತ್ರಿಗಳಿಗೆ ಇದನ್ನು ಅರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.
ಸುಮಾರು ಆರು ನಿಮಿಷದ ಹಾಡು ಇದಾಗಿದ್ದು, ಬಿ.ಎಸ್.ಯಡಿಯೂರಪ್ಪನವರು ಇದುವರೆಗೂ ಬೆಳೆದು ಬಂದ ರೀತಿ, ಅವರ ಅಭಿವೃದ್ಧಿಗಳು, ಮಾನವೀಯತೆ, ಹೋರಾಟ ಹೀಗೆ ಅವರ ಸಮಗ್ರ ಚಿತ್ರಣ ಈ ಆರು ನಿಮಿಷದಲ್ಲಿ ಹಿಡಿದಿಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಇಡೀ ಕಾರ್ಯಕ್ರಮದಲ್ಲಿ ಈ ಹಾಡು ಒಂದು ಹೈಲೈಟ್ ಆಗಲಿದೆ ಎಂದರು.
ತುಂಬಾ ನಿರೀಕ್ಷೆಯೊಂದಿಗೆ ರಾಜೇಶ್ ಕೃಷ್ಣನ್ ಮತ್ತು ನಮ್ಮ ತಂಡದವರು ಶಿವಮೊಗ್ಗದಲ್ಲಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಸುಮಾರು 75ಕ್ಕೂ ಹೆಚ್ಚು ಕಲಾವಿದರು ಶಿವಮೊಗ್ಗಕ್ಕೆ ಬಂದಿದ್ದು ರಿಹರ್ಸಲ್ ಕೂಡ ಮಾಡಲಾಗುತ್ತಿದೆ. ಶಿವಮೊಗ್ಗದ ಪ್ರೇಕ್ಷಕರಿಗೆ ಸಂಗೀತ ರಸದೌತಣವನ್ನು ನೀಡುವ ಉದ್ದೇಶ ನಮ್ಮದು ಎಂದರು. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಮಾತನಾಡಿ, ಕಲಾವಿದರಿಗೆ ಮುಖ್ಯಮಂತ್ರಿಗಳು ಕೊಡುವ ಗೌರವ ಎಂದೇ ಇದನ್ನು ಭಾವಿಸಿದ್ದೇವೆ. ಸಂಗೀತಕ್ಕೂ ಸೆಳೆತವಿದೆ ಎಂಬುದನ್ನು ನಾವು ಮೊದಲ ಬಾರಿಗೆ ತಿಳಿದುಕೊಂಡಿದ್ದೇವೆ. ಈ ಕಾರ್ಯಕ್ರಮವನ್ನು ಆಯೋಜಿಸಲು ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿರುವುದು ನಮಗಂತೂ ತುಂಬಾ ಖುಷಿಯಾಗಿದೆ. ನಮ್ಮ ಜೊತೆಗೆ ಖ್ಯಾತ ನಿರೂಪಕಿ ಅನುಶ್ರೀ ಇರಲಿದ್ದಾರೆ. ಎಲ್ಲರೂ ಸೇರಿ ಬಂದು ಸಂಗೀತದ ಸ್ವರ್ಗವನ್ನು ಜನರಿಗೆ ಉಣಬಡಿಸುತ್ತೇವೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ವಿಧಾನಪರಿಷತ್ ಸದಸ್ಯ ರುದ್ರೇಗೌಡ, ಬಳ್ಳೇಕೆರೆ ಸಂತೋಷ್ ಸೇರಿದಂತೆ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.