ಕಡಿಮೆ ಬೆಲೆಗೆ ಮರಳು; ಹೊಸ ನೀತಿ


Team Udayavani, Feb 28, 2021, 4:43 PM IST

ಕಡಿಮೆ ಬೆಲೆಗೆ ಮರಳು; ಹೊಸ ನೀತಿ

ಕೊಪ್ಪಳ: ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಕಡಿಮೆ ಬೆಲೆಗೆ ಮರಳು ಮತ್ತುಜಲ್ಲಿಕಲ್ಲು ದೊರಕಿಸಿ ಕೊಡಬೇಕುಎನ್ನುವ ಉದ್ದೇಶದಿಂದ ಸರ್ಕಾರಹೊಸ ಗಣಿಕಾರಿಕೆ ನೀತಿ ಶೀಘ್ರದಲ್ಲೇಜಾರಿಗೊಳಿಸಲಾಗುವುದು ಎಂದು ಗಣಿಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮನೆ ಕಟ್ಟುವಕನಸು ಹೊಂದಿರುವ ಪ್ರತಿಯೊಬ್ಬರಿಗೂ ಮರಳು ಮತ್ತು ಜಲ್ಲಿಕಲ್ಲು ಕಡಿಮೆ ಬೆಲೆಗೆಸಿಗಬೇಕು. ಈ ದೃಷ್ಟಿಯಿಂದ ರಾಜ್ಯದಲ್ಲಿ ಹೊಸ ಗಣಿ ನೀತಿ ತರಲಾಗುತ್ತಿದೆ. ಹೊಸ ನೀತಿಯನ್ವಯ ಟ್ರ್ಯಾಕ್ಟರ್‌, ಎತ್ತಿನಬಂಡಿ, ದ್ವಿಚಕ್ರ ವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಎಫ್‌ಐಆರ್‌ ದಾಖಲಿಸುವುದಿಲ್ಲ. ಬದಲಿಗೆ ಮರಳು ಸಂಗ್ರಹಿಸಿ ಬೇರೆ ಬೇರೆ ಜಿಲ್ಲೆಗಳಿಗೆಸಾಗಾಣಿಕೆ ಮಾಡಿದರೆ ಮಾತ್ರ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲೆಡೆ ಅನಧಿಕೃತವಾಗಿ ಮರಳು ಹಾಗೂ ಜಲ್ಲಿಕಲ್ಲು ಸಾಗಾಟ ಮಾಡಲಾಗುತ್ತಿದೆ. ಇದರಿಂದಾಗಿ ಸರ್ಕಾರದ ಆದಾಯ ಪೋಲಾಗುತ್ತಿದೆ. ನಿಯಂತ್ರಣ ಮಾಡಿದಷ್ಟೂ ಅನ ಧಿಕೃತಗಣಿಗಾರಿಕೆ ಹೆಚ್ಚಾಗುತ್ತದೆ. ಹಾಗಾಗಿಎಲ್ಲಿ ಬೇಕಾದರೂ ಉಚಿತವಾಗಿಮರಳು ಪಡೆಯಬಹುದಾದಯೋಜನೆ ಜಾರಿಗೆ ತರಲಾಗುತ್ತಿದೆ. ಇದರಿಂದಾಗಿ ಕಡಿಮೆ ಖರ್ಚಿನಲ್ಲಿ ಮನೆ ನಿರ್ಮಿಸುವವರಿಗೆ ಅನುಕೂಲಆಗಲಿದೆ. ಗ್ರಾಮ ಪಂಚಾಯತ್‌ವ್ಯಾಪ್ತಿಗೆ ಒಳಪಡುವವರಿಗೆ ಇದು ವರದಾನ ಆಗಲಿದೆ ಎಂದರು.

ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಿಂದ ಗಣಿಗಾರಿಕೆ ಮಾಡುವ ಕ್ರಷರ್‌ಗಳ ಮಾಲೀಕರಿಗೆ ಕಾರ್ಯಾಗಾರಆಯೋಜಿಲಾಗುತ್ತದೆ. ಕಲ್ಲು ಗಣಿಗಾರಿಕೆಮಾಡುವ ರೀತಿ, ಗಣಿಗಾರಿಕೆ ವೇಳೆವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳಕುರಿತು ತಜ್ಞರಿಂದ, ಸಂಪನ್ಮೂಲವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ.ಜಿಲ್ಲೆಯಲ್ಲಿ ಕ್ರಷರ್‌ ಮಾಲೀಕರಿಗೆ ತರಬೇತಿ ನೀಡಲು ಶೀಘ್ರ ಕಾರ್ಯಾಗಾರ ಆಯೋಜಿಸುವಂತೆ ಜಿಲ್ಲಾಧಿಕಾರಿಗೆ ಸಚಿವರು ಸೂಚಿಸಿದರು.

ಗಂಗಾವತಿ ಭಾಗದಲ್ಲಿ ಕೈಗಳಿಂದಕಲ್ಲು ಒಡೆದು ಮಾರಾಟ ಮಾಡುವಮೂಲಕ ಜೀವನ ಕಟ್ಟಿಕೊಂಡ ಭೋವಿ ಜನಾಂಗದವರಿಗೆ ಅಧಿಕಾರಿಗಳುಅನಗತ್ಯ ಸಮಸ್ಯೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಪ್ರತಿಕ್ರಿಯಿಸಿದ ಎಸಿ ನಾರಾಯಣರಡ್ಡಿ ಕನಕರಡ್ಡಿ, ಪುರಾತತ್ವ ಇಲಾಖೆಯವರು ಐತಿಹಾಸಿಕ ಶಿಲೆಗಳಿರುವ ಪ್ರದೇಶಗಳಲ್ಲಿ ಗ್ರಾಮಗಳನ್ನು ಉಲ್ಲೇಖೀಸಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮನವಿ ಮಾಡಿದ್ದಾರೆ. ಹಾಗಾಗಿ ಅಲ್ಲಿನ ಕೆಲವರಿಗೆ ಕಲ್ಲು ಗಣಿಗಾರಿಕೆ ಮಾಡದಂತೆ ಸೂಚಿಸಿದ್ದೇವೆ ಎಂದರು.

ಸಚಿವರು ಪ್ರತಿಕ್ರಿಯಿಸಿ, ಸಮಸ್ಯೆ ಆಗದ ರೀತಿಯಲ್ಲಿ ಗಣಿಗಾರಿಕೆ ಮಾಡುವಂತೆ ಸಂಬಂಧಿಸಿದವರಿಗೆಸೂಚನೆ ನೀಡಿ, ಅಧಿಕಾರಿಗಳು ಸಣ್ಣಸಣ್ಣ ಕೂಲಿಕಾರರಿಗೆ ಅನಗತ್ಯ ತೊಂದರೆ ನೀಡಬಾರದು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಕ್ರಮ ಗಣಿಕಾರಿಕೆ ನಡೆದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳಿಂದಹಿಡಿದು ಎಲ್ಲ ಪಕ್ಷಗಳು ಇದರಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವುದುಗುಟ್ಟಾಗಿ ಉಳಿದಿಲ್ಲ. ಇಲ್ಲಿ ಪಾರದರ್ಶಕತೆಯಿಂದ ಗಣಿಗಾರಿಕೆ ನಡೆಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದೇನೆ ಎಂದರು.

ಸಭೆಯಲ್ಲಿ ಶಾಸಕ ಬಸವರಾಜ್‌ದಢೇಸುಗೂರು, ಜಿಪಂ ಅಧ್ಯಕ್ಷ ಕೆ. ರಾಜಶೇಖರ ಹಿಟ್ನಾಳ, ಎಸ್ಪಿ ಟಿ. ಶ್ರೀಧರ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್‌ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.