100 ರೂ.ಗೆ ಲೀಟರ್ ಹಾಲು ಮಾರಲು ನಿರ್ಧಾರ…ಕೃಷಿ ಕಾಯ್ದೆ ವಿರುದ್ಧ ಸಮರ ಸಾರಿದ ರೈತರು
Team Udayavani, Feb 28, 2021, 7:25 PM IST
ಹರಿಯಾಣ : ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ಸಮರ ಸಾರಿರುವ ಹರಿಯಾಣದ ರೈತರು ಇಂದು (ಫೆ.28) ನಡೆದ ಖಾಪ್ ಪಂಚಾಯತ್ ಸಭೆಯಲ್ಲಿ ಮಹತ್ವದ ನಿರ್ಣಯವೊಂದಕ್ಕೆ ಬದ್ಧರಾಗಿದ್ದಾರೆ.
ಹರಿಯಾಣದಲ್ಲಿ ಇಂದು ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನು ಹಾಗೂ ಇಂಧನ ಬೆಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಾರ್ಚ್ 1 ರಿಂದ ಸರ್ಕಾರಿ ಸಹಕಾರಿ ಸಂಘಗಳಿಗೆ 100 ರೂ.ಗೆ ಲೀಟರ್ ಹಾಲು ಮಾರುವ ನಿರ್ಣಯ ಕೈಗೊಂಡಿದ್ದಾರೆ.
ಸಮಾವೇಶದಲ್ಲಿ ಮಾತಾಡಿದ ರೈತ ಮುಖಂಡ ಪೂಲ್ ಕುಮಾರ್ ಪೆಟ್ವಾರ್, ಸರ್ಕಾರಿ ಸಹಕಾರಿ ಸಂಘಗಳಿಗೆ 100 ರೂ.ಗೆ ಒಂದು ಲೀಟರ್ ಹಾಲು ಮಾರಾಟ ಮಾಡುವಂತೆ ರೈತರಿಗೆ ಮನವಿ ಮಾಡಿದ್ದೇವೆ. ಕೇವಲ ಸರ್ಕಾರಕ್ಕೆ ಮಾತ್ರ ಈ ದರ, ಜನಸಾಮಾನ್ಯರಿಗೆ ಎಂದಿನಂತೆ 55 ರಿಂದ 60 ರೂ.ಗೆ ಮಾರುವಂತೆ ಸೂಚಿಸಿದ್ದೇವೆ ಎಂದಿದ್ದಾರೆ.
ಕೃಷಿ ಕಾಯ್ದೆ ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರ ರೈತರ ಬೇಡಿಕೆಗೆ ಕಿವಿಗೊಡುತ್ತಿಲ್ಲ. ಅದೇ ರೀತಿ ದೇಶದಲ್ಲಿ ಇಂಧನ ಬೆಲೆಗಳು ಕೂಡ ಹೆಚ್ಚಾಗುತ್ತಿವೆ. ಈ ಹಿನ್ನೆಲೆ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಹಾಲಿನ ಬೆಲೆ ಏರಿಸಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರ ಕೂಡಲೇ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಹಾಗೂ ಇಂಧನ ಬೆಲೆ ಇಳಿಸಬೇಕೆಂದು ಪೆಟ್ವಾರ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.