100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ
Team Udayavani, Mar 1, 2021, 1:56 PM IST
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದುಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಅಮರನಾಥ್ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಿಳಾ ವಿಭಾಗದ ಪದಾಧಿಕಾರಿಗಳೊಂದಿಗೆ ಜನಧ್ವನಿ ಹೋರಾಟದ ಅಂಗವಾಗಿ ಆಯೋಜಿಸಿದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣಾ ಪ್ರಣಾಳಿಕೆಯ ವಾಗ್ಧಾನಗಳನ್ನು ಈಡೇರಿಸ ಬೇಕೆಂದು ಆಗ್ರಹಿಸಿ ಪ್ರಸಕ್ತ ಸಾಲಿನಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಘಟಕದಿಂದ ಮಹಿಳಾ ಆಕ್ರೋಶ ಜಾಥಾ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಮುಖಂಡರಿಂದ ಚಾಲನೆ: ಬೆಂಗಳೂರಿನಲ್ಲಿ ಮಾ.2 ರಂದು ಮಹಿಳಾ ಆಕ್ರೋಶದ ರ್ಯಾಲಿಗೆ ಚಾಲನೆ ನೀಡಿ ನಂತರ ರಾಜ್ಯದ 100 ಕ್ಷೇತ್ರಗಳಲ್ಲಿ ಹೋರಾಟ ನಡೆಸಲಾಗುತ್ತದೆ. ಜನವಿರೋಧಿ ಧೋರಣೆ ಹಾಗೂ ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನಡೆಯುತ್ತಿರುವ ಜನಧ್ವನಿ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರು ಚಾಲನೆ ನೀಡಲಿದ್ದಾರೆ ಎಂದರು.
ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಮಹಿಳೆಯರು ಪಕ್ಷಾತೀತವಾಗಿ ಭಾಗವಹಿಸಬೇಕು. ಬೆಲೆ ಏರಿಕೆಯಿಂದ ಕಾಂಗ್ರೆಸ್ ಪಕ್ಷದವರು ಸಂಕಷ್ಟ ಎದುರಿಸುತ್ತಿಲ್ಲ. ಜನಪರವಾಗಿ ನಡೆಸುತ್ತಿರುವ ಹೋರಾಟದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಹಿಳಾಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಜನರಲ್ಲಿ ಅರಿವುಮತ್ತು ಜಾಗೃತಿ ಮೂಡಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಉಪಾಧ್ಯಕ್ಷೆ ಸರಸ್ವಮ್ಮ ಅಶ್ವತ್ಥ ನಾರಾಯಣಗೌಡ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾ, ರಾಜ್ಯಕಾರ್ಯದರ್ಶಿ ಯಾಸ್ಮಿನ್‌ತಾಜ್, ಮಮತಾಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಮ್, ಪ್ರಧಾನಕಾರ್ಯದರ್ಶಿ ಸೂರಿ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಮಿತ್ರಾ, ಜಿಲ್ಲಾ ಕಾರ್ಯದರ್ಶಿ ಶಾಹೀನ್‌ತಾಜ್, ಮುಖಂಡ ರಾದ ಮೊಹಮ್ಮದ್ ಹಫೀಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.