ಭೂ ತಾಯಿಯಂತೆ ಮಾತೃಭಾಷೆ ಶ್ರೇಷ್ಠ

ಮಗು ಅತೀ ಸ್ಪಷ್ಟವಾಗಿ ತನ್ನ ವಿಚಾರಗಳನ್ನು ಹಂಚಿಕೊಳ್ಳಬಲ್ಲದು.

Team Udayavani, Mar 1, 2021, 6:16 PM IST

ಭೂ ತಾಯಿಯಂತೆ ಮಾತೃಭಾಷೆ ಶ್ರೇಷ್ಠ

ಬೀದರ: ಭೂ ತಾಯಿಯಂತೆ ಮಾತೃ ಭಾಷೆಯು ಶ್ರೇಷ್ಠ. ಮಾತೃ ಭಾಷೆ ಕನ್ನಡದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ, ಮಗು ಬಹು ಬೇಗ ವಿಷಯವನ್ನು ಗ್ರಹಿಸುವುದಲ್ಲದೇ ಕಲಿಕೆಯಲ್ಲಿ ಸದಾ ಮುಂದಿರುತ್ತದೆ. ಮಗುವಿನ ಚಿಂತನಾ ಶಕ್ತಿ, ಕ್ರಿಯಾಶೀಲತೆ, ವಾಕ್‌ ಚಾತುರ್ಯ ಮತ್ತು ಅರಿವು ಉತ್ತಮಗೊಳ್ಳುತ್ತದೆ ಎಂದು ಹಿರಿಯ ಸಾಹಿತಿ ಡಾ| ಎಂ.ಜಿ. ದೇಶಪಾಂಡೆ ನುಡಿದರು.

ಕರ್ನಾಟಕ ಜಾಗೃತಿ ವೇದಿಕೆ, ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆ, ನ್ಯೂ ಮದರ್‌ ಥೆರೆಸಾ ಅಭಿವೃದ್ಧಿ ಸಂಸ್ಥೆ ಹಾಗೂ ಡಾ| ಕೇರ್‌ ಚಾರಿಟೇಬಲ್‌ ಟ್ರಸ್ಟ್‌ ಆಶ್ರಯದಲ್ಲಿ ನಗರದ ಹಿಮಾಲಯ ಕಾನ್ವೆಂಟ್‌ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಾತೃ ಭಾಷಾ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಮಕ್ಕಳಿಗೆ ಮಾತೃ ಭಾಷೆಯಲ್ಲಿ ಶಿಕ್ಷಣ ಕಲ್ಪಿಸಲು ಮುಂದಾಗಬೇಕು ಎಂದರು.

ಮಕ್ಕಳ ತಜ್ಞ ಡಾ| ಸಿ. ಆನಂದರಾವ ಮಾತನಾಡಿ, ವ್ಯಕ್ತಿ ಹುಟ್ಟುತ್ತಲೇ ಮಾತನಾಡಲು ಕಲಿಯುವ ಪ್ರಥಮ ಭಾಷೆಯೇ ಆತನ ಮಾತೃ ಭಾಷೆ. ಮಾತೃ ಭಾಷೆಯ ಮೂಲಕ ಒಂದು ಮಗು ಅತೀ ಸ್ಪಷ್ಟವಾಗಿ ತನ್ನ ವಿಚಾರಗಳನ್ನು ಹಂಚಿಕೊಳ್ಳಬಲ್ಲದು. ಹೀಗಾಗಿ ಮಾತೃ ಭಾಷೆಗೆ ತಾಯಿ ಸ್ಥಾನ ನೀಡಲಾಗಿದೆ ಎಂದು ಹೇಳಿದರು.

ಪ್ರಗತಿ ಸಂಸ್ಥೆಯ ಅಧ್ಯಕ್ಷ ಅರವಿಂದ ಕುಲಕರ್ಣಿ ಅಧ್ಯಕ್ಷತೆ ವಹಿಸಿ, ಮಾತೃ ಭಾಷೆಯು ತಾಯಿ ನುಡಿ ಇದ್ದಂತೆ. ನಾವು ಬಾಲ್ಯದಲ್ಲಿ ಪ್ರಥಮವಾಗಿ ಕಲಿತ ಭಾಷೆ, ಅದು ನಮ್ಮ ಜೀವನ ನಾಡಿ, ನಮ್ಮ ಭಾವನೆ ಹಾಗೂ ವಿಚಾರಗಳನ್ನು ಮನದಟ್ಟಾಗುವಂತೆ ಪರಸ್ಪರ ವಿನಿಮಯಗೊಳಿಸುವ ಪ್ರಬಲ ಸಂವಹನ ಮಾಧ್ಯಮವೆಂದು ನುಡಿದರು.

ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಸಂಜೀವಕುಮಾರ ಸ್ವಾಮಿ ಮಾತನಾಡಿ, ಕನ್ನಡದ ಅಭಿಯಾನ ಕೇವಲ ನ.1ರ ರಾಜ್ಯೋತ್ಸವದ ದಿನಕ್ಕಷ್ಟೇ ಮಾತ್ರ ಸೀಮಿತವಾಗಿರದೇ, ವರ್ಷದ ಪೂರ್ತಿ ಕನ್ನಡ ನಾಡು-ನುಡಿ, ಸಂಸ್ಕೃತಿ ಉಳಿಸಿ-ಬೆಳೆಸುವ ಕಾರ್ಯ ನಿರಂತರವಾಗಿರಬೇಕು. ಕನ್ನಡವೇ ನಮ್ಮ ಮಾತೃ ಭಾಷೆ ಎಂಬ ಸತ್ಯ ನಾವು ಮರೆಯಬಾರದು ಎಂದರು.

ಪತ್ರಕರ್ತ ಜೈಕುಮಾರ ಯೇಸುದಾಸ, ನವೀನ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷ ಕಾಮಶೆಟ್ಟಿ ಚಿಕಬಸ್ಸೆ, ನಿವೇದಿತಾ ಹೂಗಾರ ಟ್ರಸ್ಟ್‌ ಅಧ್ಯಕ್ಷೆ ಶ್ರೀದೇವಿ ಹೂಗಾರ ಮತ್ತು ಉಪನ್ಯಾಸಕಿ ಡಾ| ಜಗದೇವಿ ತಿಬಶೆಟ್ಟಿ ಮಾತನಾಡಿದರು. ವೀರಭದ್ರಪ್ಪಾ ಉಪ್ಪಿನ್‌, ಸಂಗಮೇಶ ಜ್ಯಾಂತೆ, ಅನಂತ ಕುಲಕರ್ಣಿ, ಓಂಕಾರ ಪಾಟೀಲ, ಜೈಪ್ರಕಾಶ, ಧನರಾಜ ಇದ್ದರು. ಕನ್ನಡ ಭಾಷೆಯಲ್ಲಿ ಮಕ್ಕಳಿಗೆ ವಿದ್ಯಾದಾನ ನೀಡುತ್ತಿರುವ ಶಿಕ್ಷಕ, ಶಿಕ್ಷಕಿಯರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

arrested

Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

6-

Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ

4

Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.