ಯುಜಿಡಿ ಕಾಮಗಾರಿ ತನಿಖೆ ನಡೆಯುತ್ತಾ?

ಕಾಮಗಾರಿಯನ್ನು ಪುರಸಭೆ ಅಧಿಕಾರಿಗಳು ಹಸ್ತಾಂತರಿಸಿಕೊಂಡಿಲ್ಲ

Team Udayavani, Mar 1, 2021, 6:24 PM IST

ಯುಜಿಡಿ ಕಾಮಗಾರಿ ತನಿಖೆ ನಡೆಯುತ್ತಾ

ಹುಮನಾಬಾದ: ಕರ್ನಾಟಕ ಪೌರ ಸುಧಾರಣಾ ಯೋಜನೆಯಡಿ ಹುಮನಾಬಾದ ಪಟ್ಟಣದಲ್ಲಿ ಬಹುಕೋಟಿ ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಒಳಚರಂಡಿ ವ್ಯವಸ್ಥೆ ಕಾಮಗಾರಿ(ಯುಜಿಡಿ)ಗೆ ಸಂಬಂಧಿ ಸಿದಂತೆ ಸಮಗ್ರ ದಾಖಲೆಗಳು ಹಾಗೂ ಯೋಜನೆಯ ಪೂರ್ಣ ಮಾಹಿತಿ ಸಲ್ಲಿಸುವಂತೆ ಜಿಲ್ಲಾಡಳಿತ ತಾಲೂಕು ಆಡಳಿತಕ್ಕೆ ಸೂಚಿಸಿದೆ.

ಯುಜಿಡಿ ಕಾಮಗಾರಿ ಕುರಿತು “ಉದಯವಾಣಿ’ ವಿಶೇಷ ವರದಿ ಪ್ರಕಟಗೊಂಡ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಧಿಕಾರಿಗಳ ಜತೆಗೆ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫ್ ರೆನ್ಸ್‌ ನಡೆಸಿದ್ದು, ಆ ಸಭೆಯಲ್ಲಿ ಹುಮನಾಬಾದ ಪಟ್ಟಣದಲ್ಲಿ ನಡೆದ ಯುಜಿಡಿ ಕಾಮಗಾರಿ ಕುರಿತು ಮಾಹಿತಿ ಕೇಳಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೆ ಈ ಕುರಿತು ತಹಶೀಲ್ದಾರ್‌ ನಾಗಯ್ನಾ ಹಿರೇಮಠ ಅವರು ಖುದ್ದು ವಿವಿಧೆಡೆ ಭೇಟಿ ನೀಡಿ ಮಾಹಿತಿ ಸಲ್ಲಿಸುವಂತೆ ತಿಳಿಸಿದ್ದಾರೆ.

ಅಲ್ಲದೆ ಕಾಮಗಾರಿಗೆ ಸಂಬಂಧಿಸಿದಂತೆ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಸಂಬಂಧಿಸಿದ ಅ ಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ನೋಟಿಸ್‌ ನೀಡಿ ದಾಖಲೆಗಳು ತರಿಸಿಕೊಳ್ಳುವಂತೆ ಸೂಚಿಸಿದ್ದಾರೆಂದು ಅಧಿ ಕಾರಿಗಳು ಮಾಹಿತಿ ನೀಡಿದ್ದಾರೆ.

ಇಷ್ಟಕ್ಕೆಲ್ಲ ಕಾರಣ ಏನು?: 2013ರಿಂದ ಪಟ್ಟಣದ ವಿವಿಧ ಬಡಾವಣೆಯಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿ ಮಾಡಲಾಗಿದೆ. ಸುಮಾರು 28 ಕೋಟಿ ರೂ.ಗೂ ಅ ಧಿಕ ಮೊತ್ತದ ಕಾಮಗಾರಿಗೆ ಸಂಬಂಧಿಸಿದ ದಾಖಲೆಗಳು ಪುರಸಭೆಯಲ್ಲಿ ಲಭ್ಯವಾಗುತ್ತಿಲ್ಲ. ಗುತ್ತಿಗೆ ಪಡೆದ ಕಂಪನಿಯವರು ನೇರವಾಗಿ ಕಾಮಗಾರಿ ವಿವರನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್‌ಸಿ) ಸಲ್ಲಿಸಿ ಪೂರ್ಣಗೊಂಡ ಪ್ರಮಾಣ ಪತ್ರ ಪಡೆದಿದ್ದಾರೆಂದು ಅಧಿಕಾರಿಗಳೇ ಹೇಳುತ್ತಿದ್ದಾರೆ.

ಈ ಮಧ್ಯೆ ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅವರು 2019ರಲ್ಲಿ ವಿವಿಧಡೆ ಭೇಟಿ ನೀಡಿ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದ ಚಿತ್ರಗಳು ದುರ್ಬಳಕೆ ಮಾಡಿಕೊಂಡು ಕಾಮಗಾರಿ ಪೂರ್ಣಗೊಂಡ ವಿವರಕ್ಕೆ ಲಗತ್ತಿಸಿದ್ದಾರೆಂದು ಆರೋಪಿಸಿದ್ದಾರೆ. ಅಲ್ಲದೆ ಈ ಕುರಿತು ಮುಖ್ಯಾಧಿಕಾರಿ ಮೇಲಧಿಕಾರಿಗಳಿಗೆ ಪತ್ರ ಬರೆದಿರುವುದು ಇಲ್ಲಿ ಸ್ಮರಿಸಬಹುದಾಗಿದೆ.

ಹಸ್ತಾಂತರಗೊಂಡಿಲ್ಲ: ಗುತ್ತಿಗೆದಾರರ ಪ್ರಕಾರ 2019ರಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ವರ್ಷದ ದುರಸ್ತಿ ಅವಧಿ  ಕೂಡ ಮುಗಿದಿದೆ ಎಂದು ದಾಖಲೆಗಳ ಪ್ರಕಾರ ತಿಳಿದು ಬಂದಿದೆ. ಈವರೆಗೂ ಪೂರ್ಣಗೊಂಡ ಕಾಮಗಾರಿ ಬಗ್ಗೆ ಯಾವುದೇ ದಾಖಲೆಗಳು ಗುತ್ತಿಗೆ ಪಡೆದ ಕಂಪನಿಯವರು ಪುರಸಭೆಗೆ ಸಲ್ಲಿಸಿಲ್ಲ. ಕಾಮಗಾರಿಯನ್ನು ಪುರಸಭೆ ಅಧಿಕಾರಿಗಳು ಹಸ್ತಾಂತರಿಸಿಕೊಂಡಿಲ್ಲ ಎಂದು ಮುಖ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ಯುಜಿಡಿ ಕಾಮಗಾರಿ ವಿಷಯ ಪುರಸಭೆ ಅಧಿಕಾರಿಗಳಿಗೆ ತಲೆನೋವುಂಟು ಮಾಡಿದ್ದು, ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪುತ್ತದೆ ಎಂಬುಂದು ಕಾಯ್ದು ನೋಡಬೇಕಿದೆ.

ಪಟ್ಟಣದಲ್ಲಿ ನಡೆದ ಯುಜಿಡಿ ಕಾಮಗಾರಿ ಪುರಸಭೆಗೆ ಹಸ್ತಾಂತರಗೊಂಡಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಯುಜಿಡಿ ಕಾಮಗಾರಿ ಕುರಿತು ಗಮನ ಸೆಳೆದಿದ್ದು, ಕಾಮಗಾರಿ ಕುರಿತು ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಮಗ್ರ ಮಾಹಿತಿ ಪಡೆದು ತನಿಖೆ ನಡೆಸುವಂತೆ ಸಭೆಯಲ್ಲಿ ಒತ್ತಾಯಿಸಿದ್ದೇನೆ. ಬೆಂಗಳೂರಿನ ನುರಿತ ತಜ್ಞರಿಂದ ಯೋಜನೆಯ ತನಿಖೆ ನಡೆಸುವಂತೆ ಸರ್ಕಾರದ ಗಮನ
ಸೆಳೆಯಲಾಗುವುದು.
ರಾಜಶೇಖರ ಪಾಟೀಲ,
ಶಾಸಕ ಹುಮನಾಬಾದ್

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.