ಅವಕಾಶ ಸಿಕ್ಕರೆ ಖಂಡಿತ ಬಿಗ್ ಬಾಸ್ ನಲ್ಲಿ ಭಾಗವಹಿಸುತ್ತೇನೆ : ಎಚ್. ವಿಶ್ವನಾಥ್
Team Udayavani, Mar 2, 2021, 12:21 PM IST
ಬೆಂಗಳೂರು: ಖಾಲಿ ಇರುವ ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಹಾಲಿ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯ ಎಚ್. ವಿಶ್ವನಾಥ್ ಪ್ರಯತ್ನ ನಡೆಸಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಅನರ್ಹಗೊಂಡು ಚುನಾಯಿತರಾಗದೇ ಇರುವುದರಿಂದ ಸಚಿವರಾಗಲು ಅವಕಾಶ ಇಲ್ಲದಿರುವುದರಿಂದ ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ನಾಯಕರಿಗೆ ಬೆನ್ನು ಬಿದ್ದಿದ್ದಾರೆ. ಸೋಮವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ದೆಹಲಿ ನಾಯಕರನ್ನು ಸಹ ಭೇಟಿ ಮಾಡಿ ಮನವಿ ಮಾಡಿದ್ದೇನೆ. ನನ್ನ ಪರಿಷತ್‌ಅವಧಿ ಇನ್ನೂ ಐದೂವರೆ ವರ್ಷ ಇದೆ. ನನಗೆಧರ್ಮೇಗೌಡರಿಂದ ತೆರವಾದ ಸ್ಥಾನದ ಮೂಲಕಪರಿಷತ್‌ಗೆ ಕಳುಹಿಸಲಿ. ನನಗೆ ಮೂರುವರೆ ವರ್ಷದ ಅವಧಿ ಮಾತ್ರ ಸಾಕು. ನಾನು ಸರ್ಕಾರದ ಒಳಗೆ ಕೆಲಸ ಮಾಡಲು ಬಯಸಿದ್ದೇನೆ. ಹಿಂದೆ
ನಾನು ಶಿಕ್ಷಣ ಇಲಾಖೆಯಲ್ಲಿ ಇದ್ದಾಗ ಅಂತಹ ಒಳ್ಳೆಯ ಕೆಲಸ ಮಾಡಿದ ಅನುಭವ ಇದೆ. ಪಕ್ಷಕ್ಕಾಗಿ, ಸರ್ಕಾರಕ್ಕಾಗಿ ನಾನು ಸರ್ಕಾರದ ಒಳಗೆಇರಲು ಬಯಸಿದ್ದೇನೆ. ಈ ವಿಚಾರವನ್ನು ಸಿಎಂ ಗಮನಕ್ಕೂ ಸಹ ತಂದಿದ್ದೇನೆ ಎಂದು ಹೇಳಿದರು.
ಬಿಗ್ ಬಾಸ್‌ಗೆ ಹೋಗುವಾಸೆ :
ನಾನು ಬಿಗ್ ಬಾಸ್ ಮನೆಗೆ ಹೋಗಲು ಆಸೆಪಟ್ಟಿದ್ದೇನೆ. ನನ್ನ ಸ್ನೇಹಿತರುಬಿಗ್ ಬಾಸ್ ಮನೆಗೆ ಹೋಗಲಹೇಳುತ್ತಿದ್ದಾರೆ. ವಿಶೇಷ ಆಹ್ವಾನಿತರಾಗಿ ಆಹ್ವಾನ ಬಂದರೆ ಹೋಗುತ್ತೇನೆ. ನಾಲ್ಕೈದು ದಿನಗಳ ಮಟ್ಟಿಗೆ ಬಿಗ್ ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಕರೆದರೆ ಹೋಗುತ್ತೇನೆ. ಬಿಗ್ ಬಾಸ್ ಸೀಸನ್ 6 ರ ವೇಳೆ ಪರಮೇಶ್ವರ್ ಗುಂಡ್ಕಲ್ ಬಿಗ್ ಬಾಸ್‌ಗೆ ಆಹ್ವಾನಿಸಿದ್ದರು. ಆದರೆ, ಆಗ ಅನಾರೋಗ್ಯದಿಂದಹೋಗಿರಲಿಲ್ಲ. ಬಿಗ್ ಬಾಸ್ ಮನೆಗೆ ಹೋಗಿರಾಜಕಾರಣದ ಸ್ಪಾರ್ಕ್ ಹೊತ್ತಿಸುತ್ತೇನೆ. ರಾಜಕಾರಣದ ಜನಶಿಕ್ಷಣ ಕೊಡುತ್ತೇನೆ. ಅವಕಾಶ ಸಿಕ್ಕರೆ ಖಂಡಿತ ಭಾಗವಹಿಸುತ್ತೇನೆ ಎಂದು ವಿಶ್ವನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.