ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ

Team Udayavani, Mar 2, 2021, 3:44 PM IST

ಸಮರ್ಪಕ ಕುಡಿಯುವ ನೀರು ಪೂರೈಸಿ: ಜಿಲ್ಲಾಧಿಕಾರಿ ರವಿ

ಚಾಮರಾಜನಗರ: ಬೇಸಿಗೆ ಕಾಲ ಆರಂಭ ಹಿನ್ನೆಲೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಪ್ರದೇಶದ ಯಾವುದೇ ಭಾಗದಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೇಸಿಗೆ ವೇಳೆ ಉಂಟಾಗಬಹುದಾದ ಅಭಾವಪರಿಸ್ಥಿತಿ ಮತ್ತು ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿವ ನೀರಿನ ಸರಬರಾಜು ಕುರಿತು ಸೋಮವಾರ ನಡೆದಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂದಿನ 3-4 ತಿಂಗಳ ಕಾಲ ನಗರ, ಪಟ್ಟಣ ಪ್ರದೇಶಗಳೇ ಇರಲಿ ಅಥವಾ ಗ್ರಾಮೀಣ ಭಾಗಗಳೇಇರಲಿ ಎಲ್ಲಿಯೂ ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಎಂದು ನಿರ್ದೇಶನ ನೀಡಿದರು.

ಆದ್ಯತೆ ಇರಲಿ: ಸಾರ್ವಜನಿಕ ನೀರಿನ ಲಭ್ಯತೆ ಇಲ್ಲದ ಕಡೆ ಖಾಸಗಿ ಬೋರ್‌ವೆಲ್‌ ಗುರುತಿಸಿನೀರು ಸರಬರಾಜು ಮಾಡಬೇಕಿದೆ,ತಹಶೀಲ್ದಾರರು, ತಾಪಂ ಇಒಗಳು, ಗ್ರಾಪಂಅಧಿಕಾರಿಗಳು ಜತೆಗೂಡಿ ಕುಡಿಯುವ ನೀರಿಬವಣೆ ನೀಗಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಆದ್ಯತೆ ಮೇರೆಗೆ ನೀರು ಒದಗಿಸುವ ಕಾರ್ಯ ಮಾಡಬೇಕೆಂದರು.

ಕಾಮಗಾರಿ ಪೂರ್ಣಗೊಳಿಸಿ: ಹಾಗೆಯೇ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಏನಾದರೂ ಸಮಸ್ಯಗಳಿವೆ ಎಂಬ ಬಗ್ಗೆ ಕೂಡಲೇ ಪರಿಶೀಲಿಸಿಕೊಳ್ಳಬೇಕು, ತಾಂತ್ರಿಕ ತೊಂದರೆಅಥವಾ ನಿರ್ವಹಣೆ ಕಾರ್ಯದಲ್ಲಿ ಬದಲಾವಣೆ ಅಗತ್ಯವಿದ್ದರೆ ಕೂಡಲೇ ಸರಿಪಡಿಸಬೇಕು. ಬಾಕಿಇರುವ ಶುದ್ಧ ಕುಡಿವ ನೀರಿನ ಘಟಕಗಳ ಅಳವಡಿಕೆಕಾಮಗಾರಿಯನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದರು.ಬೇಸಿಗೆ ವೇಳೆ ಜಾನುವಾರುಗಳಿಗೂ ನೀರಿನ ಕೊರತೆ ಕಾಡಬಾರದು. ಮೇವು ಪೂರೈಕೆಯಲ್ಲಿಯೂ ಯಾವುದೇ ವ್ಯತ್ಯಯವಾಗಬಾರದು ಎಂದರು.

ಅರಿವು ಮೂಡಿಸಿ: ಬೇಸಿಗೆ ವೇಳೆ ಸಾಮಾನ್ಯವಾಗಿಎದುರಾಗಬಹುದಾದ ನಿರ್ಜಲೀಕರಣ, ಮಕ್ಕಳಿಗೆ ಕಾಣಿಸಿಕೊಳ್ಳಬಹುದಾದ ಅನಾರೋಗ್ಯದಂತಹಸಮಸ್ಯೆಗಳನ್ನು ಹೇಗೆ ನಿವಾರಿಸಿಕೊಳ್ಳಬೇಕು ಎಂಬಬಗ್ಗೆಯೂ ಸೇರಿ ಆರೋಗ್ಯ ಸಂಬಂಧಿ ಸಲಹೆಗಳನ್ನು ತಾಲೂಕು ಆರೋಗ್ಯಾಧಿಕಾರಿಗಳಿಂದ ನೀಡುವ ವ್ಯವಸ್ಥೆಯಾಗಬೇಕು ಎಂದರು.

ಸಮರ್ಪಕ ತ್ಯಾಜ್ಯ ವಿಲೇವಾರಿ ಮಾಡಿ: ಗ್ರಾಪಂ, ನಗರಸಭೆ, ಪುರಸಭೆ, ಪಪಂ ವ್ಯಾಪ್ತಿಯಲ್ಲಿ ಸ್ವತ್ಛತೆಗೆವಿಶೇಷ ಗಮನ ಹರಿಸಬೇಕು. ಕಸ ಇತರ ತ್ಯಾಜ್ಯ ವಿಲೇವಾರಿ ನಿಗದಿತ ಸಮಯದೊಳಗೆ ಮುಗಿಯಬೇಕು. ಚರಂಡಿ ಶುಚಿಗೊಳಿಸಿಶುದ್ಧವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿ ದೇವಿ, ಉಪವಿಭಾಗಾಧಿಕಾರಿ ಡಾ.ಗಿರೀಶ್‌ ದಿಲೀಪ್‌ ಬಡೋಲೆ, ತಹಶೀಲ್ದಾರ್‌ರಾದ ಕೆ.ಕುನಾಲ್‌,ಚಿದಾನಂದ ಗುರುಸ್ವಾಮಿ, ನಾಗರಾಜು, ತಾಪಂ ಇಒ ಪ್ರೇಮ್‌ಕುಮಾರ್‌, ಶ್ರೀಕಂಠರಾಜೇಅರಸ್‌, ಜಿಪಂ ಸಹಾಯಕ ಯೋಜನಾಧಿಕಾರಿ ಕುಲದೀಪ್‌, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾನಿರ್ದೇಶಕ ಕೆ.ಸುರೇಶ್‌, ಜಂಟಿ ಕೃಷಿ ನಿರ್ದೇಶಕಿ ಚಂದ್ರಕಲಾ, ಪಶುಪಾಲನಾ ಇಲಾಖೆಉಪನಿರ್ದೇಶಕ ವೀರಭದ್ರಯ್ಯ, ಇತರೆ ಇಲಾಖೆಗಳು ಇದ್ದರು.

ಟಾಪ್ ನ್ಯೂಸ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

Bandipur:  ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.