ಆರೋಗ್ಯ ಕೇಂದ್ರ ತೆರೆಯಲು ನಿಯಮ ಸಡಿಲಿಕೆ


Team Udayavani, Mar 3, 2021, 2:53 PM IST

ಆರೋಗ್ಯ ಕೇಂದ್ರ ತೆರೆಯಲು ನಿಯಮ ಸಡಿಲಿಕೆ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಅರಣ್ಯ ಪ್ರದೇಶದಗೋಪಿನಾಥಂ, ಮಾರ್ಟಳ್ಳಿ, ಕೌದಳ್ಳಿ ಭಾಗದಲ್ಲಿ ಆರೋಗ್ಯ ಕೇಂದ್ರಗಳಿಲ್ಲದೆ ಗ್ರಾಮಸ್ಥರುಪರಿತಪಿಸುತ್ತಿದ್ದಾರೆ. ಈ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು ಎಂದು ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒತ್ತಾಯಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಅಧ್ಯಕ್ಷೆ ಅಶ್ವಿ‌ನಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದಸದಸ್ಯೆ ಮಂಜುಳಾ, ಮಹದೇಶ್ವರ ಬೆಟ್ಟ ಅರಣ್ಯಪ್ರದೇಶದೊಳಗಿರುವ ಅನೇಕ ಗ್ರಾಮಗಳಜನರು ಕಾಯಿಲೆಯ ಚಿಕಿತ್ಸೆಗಾಗಿ ದೂರದಊರುಗಳಿಗೆ ಹೋಗಬೇಕಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲೂ ಸುಸಜ್ಜಿತ ಆಸ್ಪತ್ರೆ ಇಲ್ಲ.ಜಿಲ್ಲಾ ಉಸ್ತುವಾರಿ ಸಚಿವರು ವರ್ಷದ ಹಿಂದೆಗೋಪಿನಾಥಂನಲ್ಲಿ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ಗೋಪಿನಾಥಂನಲ್ಲಿ ಆಸ್ಪತ್ರೆನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಆ ಭರವಸೆ ಈಡೇರಲಿಲ್ಲ. ಹಾಗಾಗಿಮುಖ್ಯ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ನಿರ್ಮಿಸಿ ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ.ರವಿ, ನಿಯಮದ ಪ್ರಕಾರ 30 ಸಾವಿರಜನಸಂಖ್ಯೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಲಾಗುತ್ತದೆ. ಕಡಿಮೆ ಜನಸಂಖ್ಯೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಕಲ್ಪಿಸಲು ಅವಕಾಶವಿಲ್ಲ. ಮಹದೇಶ್ವರ ಬೆಟ್ಟ ಆಸ್ಪತ್ರೆಮೇಲ್ದರ್ಜೆಗೇರಿಸಿ, ಸಮುದಾಯ ಆರೋಗ್ಯಕೇಂದ್ರವಾಗಿ ಮಾಡಲಾಗುವುದು ಎಂದರು.ಸದಸ್ಯೆ ಶಶಿಕಲಾ ಮಾತನಾಡಿ, ಈ ಭಾಗಗುಡ್ಡಗಾಡು ಅರಣ್ಯ ಪ್ರದೇಶವಾದ್ದರಿಂದ 30ಸಾವಿರ ಜನಸಂಖ್ಯೆ ನಿರ್ಬಂಧ ವಿಧಿಸುವುದುಸಾಧುವಲ್ಲ. ಕಾಡಂಚಿನ ಪ್ರದೇಶಗಳಲ್ಲಿ ನಿರ್ಬಂಧ ಸಡಿಲಿಸಿ ಪ್ರಾಥಮಿಕ ಆರೋಗ್ಯಕೇಂದ್ರ ನಿರ್ಮಿಸಿ. ಇದರ ಬಗ್ಗೆ ಜಿಪಂನಿಂದ ನಿರ್ಣಯ ಕೈಗೊಂಡು ಕ್ರಮ ವಹಿಸಿ ಎಂದರು.

ಸಭೆ ಇದನ್ನು ಅನುಮೋದಿಸಿತು. ಟಾರ್ಪಲಿನ್‌ಗೆ ಬೇಡಿಕೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಚಂದ್ರಕಲಾ ಮಾತನಾಡಿ,ಜಿಲ್ಲೆಯಲ್ಲಿ ಟಾರ್ಪಾಲಿನ್‌ಗೆ ಹೆಚ್ಚಿನ ಬೇಡಿಕೆಇದ್ದು ಅದರಂತೆ ಕಳೆದ ಸಾಲಿನಲ್ಲಿ ರಾಜ್ಯವಲಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ 2,812 ಹಾಗೂ ರಾಷ್ಟ್ರೀಯಕೃಷಿ ವಿಕಾಸ ಯೋಜನೆಯಡಿ 2,183 ಟಾರ್ಪಲಿನ್‌ಗಳಿಗೆ ಬೇಡಿಕೆ ಸಲ್ಲಿಸಿ ಸಂಬಂಧಿಸಿದ ಸಂಸ್ಥೆಯಿಂದ ಎಲ್ಲ ತಾಲೂಕುಗಳಿಗೆಈಗಾಗಲೇ ಸರಬರಾಜು ಮಾಡಿಸಲಾಗಿದ್ದು ರೈತರಿಗೆ ವಿತರಣೆ ಮಾಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಮರ ತೆರವುಗೊಳಿಸಿ: ಹರವೆ ಭಾಗದಲ್ಲಿ ಮರ ಹಾಗೂ ಕಬ್ಬಿಣದ ವಿದ್ಯುತ್‌ ಕಂಬಗಳನ್ನುತೆರವುಗೊಳಿಸಿಲ್ಲ. ಅಲ್ಲದೇ ಜೋತು ಬಿದ್ದಿರುವವಿದ್ಯುತ್‌ ತಂತಿಗಳನ್ನು ಸರಿಪಡಿಸಿಲ್ಲ ಎಂದುಸದಸ್ಯ ನವೀನ್‌ ದೂರಿದರು. ಮತ್ತೂಬ್ಬ ಸದಸ್ಯಜೆ.ಯೋಗೇಶ್‌ ಮಾತನಾಡಿ, ಯಳಂದೂರುತಾಲೂಕಿನಲ್ಲಿ ಜೋತು ಬಿದ್ದಿರುವ ವಿದ್ಯುತ್‌ತಂತಿಗಳಿಂದಾಗಿ ಆಗಾಗ್ಗೆ ವಿದ್ಯುತ್‌ ಶಾರ್ಟ್‌ಸರ್ಕಿಟ್‌ ಸಂಭವಿಸಿ ಕಬ್ಬಿನ ಫ‌ಸಲು ಸುಟ್ಟುಹೋಗುತ್ತಿದೆ. ಈ ಸಂಬಂಧ ಸೆಸ್ಕ್ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದರು.  ಸೆಸ್ಕ್ ಇಲಾಖೆಯ ಅಧಿಕಾರಿಪ್ರತಿಕ್ರಿಯಿಸಿ, ಈ ಸಂಬಂಧ ಕೂಡಲೇ ಜೋತುಬಿದ್ದಿರುವ ವಿದ್ಯುತ್‌ ತಂತಿಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.

ಸಭೆಯಲ್ಲಿ ಜಿಪಂ ಅಧ್ಯಕ್ಷೆ ಅಶ್ವಿ‌ನಿ, ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಕುಡಿವ ನೀರಿಗೆ 6 ಕೋಟಿ ಅನುದಾನಕ್ಕೆ ಪ್ರಸ್ತಾವನೆ :

ಹನೂರು ಭಾಗದ ಕ್ಷೇತ್ರಗಳ ಸದಸ್ಯರಾದ ಮಂಜುಳಾ, ಮರಗದಮಣಿ, ಬಸವರಾಜು, ಲೇಖಾ ಮಾತನಾಡಿ,ಈಗಾಗಲೇ ಬೇಸಿಗೆ ಆರಂಭವಾಗಿದೆ. ಹನೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.ಮಾರ್ಟಳ್ಳಿ ವ್ಯಾಪ್ತಿಯಲ್ಲಿ 1 ಸಾವಿರ ಅಡಿ ಕೊರೆದರೂನೀರು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಸಮಸ್ಯೆಉಲ್ಪಣವಾಗಲಿದೆ. ಕುಡಿಯುವ ನೀರಿನ ಸಮಸ್ಯೆಬಗೆಹರಿಸಲು ಪರ್ಯಾಯ ವ್ಯವಸ್ಥೆಗೆ ವಿಶೇಷವಾಗಿ 5 ರಿಂದ 6 ಕೋಟಿ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಒತ್ತಾಯಿಸಿದರು.

ನೀರು ನೈರ್ಮಲ್ಯ ಇಲಾಖೆ ಎಂಜಿನಿಯರ್‌ ಶಿವಶಂಕರ್‌ ಮಾತನಾಡಿ, ಮಾರ್ಟಳ್ಳಿ ವ್ಯಾಪ್ತಿಯಲ್ಲಿ ಖಾಸಗಿ 18 ಪಂಪ್‌ಸೆಟ್‌ಗಳನ್ನು ಗುರುತಿಸಿದ್ದೇವೆ. ಅಲ್ಲಿಂದ ನೀರುಪೂರೈಕೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು. ಸದಸ್ಯ ಕೆ.ಪಿ.ಸದಾಶಿವಮೂರ್ತಿ ಮಾತನಾಡಿ, ಚಾಮರಾಜನಗರ ತಾಲೂಕಿನ ಆಲೂರು, ಕರಿಯನಕಟ್ಟೆಸೇರಿದಂತೆ ಇತರೆ ಗ್ರಾಮಗಳ ವ್ಯಾಪ್ತಿಯಲ್ಲಿ ನಿರ್ಮಾಣಮಾಡಿರುವ ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ನೀರು ಪೂರೈಕೆಮಾಡಿಲ್ಲ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂಬಂಧ ಹಲವುಬಾರಿ ಸೂಚನೆ ನೀಡಿದರು ಸಹ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿಲ್ಲ ಎಂದು ದೂರಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಶಿವಶಂಕರ್‌, ಈಸಂಬಂಧ ಆದಷ್ಟು ಬೇಗ ಓವರ್‌ಹೆಡ್‌ ಟ್ಯಾಂಕ್‌ಗಳಿಗೆ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಆಗ್ರಹಿಸಿದರು.

ಗುಂಡ್ಲುಪೇಟೆ: ಹೊರಗುತ್ತಿಗೆ ಅವ್ಯವಹಾರ ತನಿಖೆಗೆ ಆಗ್ರಹ :

ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಸೂಕ್ತ ಸೌಲಭ್ಯ ನೀಡುತ್ತಿಲ್ಲ. ಅಲ್ಲದೇ ಬೇರೆಯವರ ಹೆಸರಲ್ಲಿ ಸಂಬಳ ನೀಡಲಾಗುತ್ತಿದೆ. ಇದರ ಹಿಂದೆ ಅಧಿಕಾರಿಗಳ ಕೈವಾಡವಿದ್ದು ಅಂತಹ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಸದಸ್ಯ ಕೆರೆಹಳ್ಳಿ ನವೀನ್‌ ಒತ್ತಾಯಿಸಿದರು. ಹೊರಗುತ್ತಿಗೆಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪಿಎಫ್,ಇಎಸ್‌ಐ ಕೊಡುತ್ತಿಲ್ಲ. ಅಲ್ಲದೇ ಬೇರೆಯವರ ಹೆಸರಲ್ಲಿ ಇಲ್ಲಿನಸಿಬ್ಬಂದಿಗೆ ಸಂಬಳ ಕೊಡಲಾಗುತ್ತಿದೆ ಎಂದು ದೂರಿದರು.

ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಏಜೆನ್ಸಿಯವರು ಸಿಬ್ಬಂದಿಗೆ ಸೂಕ್ತ ಗುರುತಿನ ಚೀಟಿ ನೀಡಿಲ್ಲ. ಅಲ್ಲದೇ ಹಾಜರಾತಿ ಪುಸ್ತಕವನ್ನು ನಿರ್ವಹಿಸಿಲ್ಲ. ಇದರ ಹಿಂದೆ ತಾಲೂಕು ವೈದ್ಯಾಧಿಕಾರಿಯವರ ಕೈವಾಡವಿದೆ. ಆದ್ದರಿಂದಕೂಡಲೇ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಜೊತೆಗೆ ಸಂಬಂಧಪಟ್ಟ ಏಜೆನ್ಸಿಯನ್ನುರದ್ದುಗೊಳಿಸಿ ಕಪ್ಪು ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಇತರೆ ಸದಸ್ಯರು ಹಾಗೂ ಗುಂಡ್ಲುಪೇಟೆ ತಾಪಂ ಅಧ್ಯಕ್ಷ ಮಧುಶಂಕರ್‌ ದನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಡಾ.ಎಂ.ಸಿ.ರವಿ, ಈ ಸಂಬಂಧ ಈಗಾಗಲೇ ದಾಖಲೆ ತರಿಸಿಕೊಂಡಿದ್ದೇನೆ. ಅಲ್ಲಿನ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗೆ ಲಿಖೀತ ಹೇಳಿಕೆ ನೀಡುವಂತೆ ನೋಟಿಸ್‌ ಸಹ ನೀಡಲಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಪಂ ಸಿಇಒ ಹರ್ಷಲ್‌ ಬೋಯರ್‌ ಮಾತನಾಡಿ, ಏಜೆನ್ಸಿಯನ್ನು ಕಪ್ಪುಪಟ್ಟಿಯಲ್ಲಿ ಸೇರಿಸುವುದರ ಜೊತೆಗೆ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮೇಲಧಿಕಾರಿಗಳಿಗೆ ಆದೇಶಿಸಿ ವರದಿ ಕಳುಹಿಸುವಂತೆ ಡಿಎಚ್‌ಒ ಅವರಿಗೆ ಸೂಚನೆ ನೀಡಿದರು.

 

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.