ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ


Team Udayavani, Mar 3, 2021, 6:40 PM IST

ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

ಹಾವೇರಿ: ಪೊಲೀಸ್‌ ಸೇರಿದಂತೆ ಪ್ರತಿಯೊಬ್ಬ ಮನುಷ್ಯನ ದೇಹ ಹಾಗೂ ಮನಸ್ಸುಗಳ ಉತ್ತಮಆರೋಗ್ಯಕ್ಕೆ ಕ್ರೀಡಾ ಚಟುವಟಿಕೆ ಸಹಕಾರಿ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಪಾರಿವಾಳ ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಆರೋಗ್ಯವಂತ ದೇಹದಲ್ಲಿ ಆರೋಗ್ಯವಂತ ಮನಸ್ಸು ಇರಲು ಸಾಧ್ಯ ಎಂಬ ದಾರ್ಶನಿಕರ ಅನುಭವ ವಾಣಿಯಂತೆ ಮನುಷ್ಯನ ದೇಹ

ಮತ್ತು ಮನಸ್ಸುಗಳ ದೃಢತೆ ಕಾಯ್ದುಕೊಳ್ಳಲುಕ್ರೀಡಾ ಚಟುವಟಿಕೆ ರೂಢಿಸಿಕೊಳ್ಳುವುದು ಉತ್ತಮ. ಇದರಿಂದ ಪ್ರತಿಯೊಬ್ಬರೂ ಒಳ್ಳೆಯ ಆರೋಗ್ಯ ಹೊಂದಬಹುದು ಎಂದರು.

ಪೊಲೀಸರು ನಾಗರಿಕ ಸಮಾಜದ ಅವಿಭಾಜ್ಯ ಅಂಗವಾಗಿದ್ದು, ಸಮಾಜದಲ್ಲಿನ ದುಷ್ಟಶಕ್ತಿಗಳಿಂದ,ಹಿಂಸಾತ್ಮಕ ಗಲಭೆಗಳು, ಆಂತರಿಕ ಕಲಹಗಳಿಂದ ನಮ್ಮನ್ನು ರಕ್ಷಣೆ ಮಾಡಲು ದಿನದ 12 ಗಂಟೆ ಅವಶ್ಯಬಿದ್ದರೆ 24 ಗಂಟೆ ವಿಶ್ರಾಂತಿ ಇಲ್ಲದೆದುಡಿಯುತ್ತಾರೆ. ಹಬ್ಬ ಹರಿದಿನಗಳಲ್ಲಿ ತನ್ನಕುಟುಂಬದಿಂದ ದೂರ ಉಳಿದು ನಾಗರಿಕರ ನೆಮ್ಮದಿಗಾಗಿ ಕೆಲಸಮಾಡುವ ಪೊಲೀಸರಿಗೆ ದೈಹಿಕ ಮತ್ತು ಮಾನಸಿಕ ದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಕ್ರೀಡಾ ಚಟುವಟಿಕೆಯಿಂದಒಳ್ಳೆಯ ದೈಹಿಕ-ಮಾನಸಿಕ ಆರೋಗ್ಯ ದೃಢತೆ ಕಾಯ್ದುಕೊಳ್ಳಬಹುದು ಎಂದರು.

ಆಕರ್ಷಕ ಪಥಸಂಚಲನ: ಪೊಲೀಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿದ ರಾಣೆಬೆನ್ನೂರು,ಹಾವೇರಿ, ಶಿಗ್ಗಾವಿ ಉಪವಿಭಾಗ ಹಾಗೂಡಿಎಆರ್‌ ತಂಡ ಹಾಗೂ ಮಹಿಳಾ ಪೊಲೀಸ್‌ಕ್ರೀಡಾ ತಂಡಗಳು ಹಳದಿ, ಪಿಂಕ್‌, ಆರೇಂಜ್‌, ಕ್ರೀಮ್‌, ಮರೂನ್‌ ಬಣ್ಣದ ಟೀ ಶರ್ಟ್‌ ಧರಿಸಿ ಪಥಸಂಚಲನ ನಡೆಸಿದರು. ಡಿಎಆರ್‌ತಂಡದ ಮುಖ್ಯಸ್ಥರಾದ ರಾಘವೇಂದ್ರ ಹೆಗಡೆ ನೇತೃತ್ವದಲ್ಲಿ ನಡೆದ ಪಥಸಂಚಲನ ಅತ್ಯಂತಆಕರ್ಷಕವಾಗಿತ್ತು. ಕ್ರೀಡಾಕೂಟದ ಅಂಗವಾಗಿ ಕ್ರೀಡಾ ಜ್ಯೋತಿಯನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಬೆಳಗಿಸಿ ಕಳೆದ ಪೊಲೀಸ್‌ವಾರ್ಷಿಕ ಕ್ರೀಡಾಕೂಟದ ವೀರಾಗ್ರಣಿ ಪ್ರಶಸ್ತಿ ಪುರಸ್ಕೃತ ಪೊಲೀಸ್‌ ಕ್ರೀಡಾಪಟು ಸಂತೋಷಜ್ಯೋತಿಯನ್ನು ಸ್ವೀಕರಿಸಿದರು. ಆರಂಭಿಕವಾಗಿಓಟದ ಸ್ಪರ್ಧೆಗೆ ಹಸಿರು ನಿಶಾನೆ ಮೂಲಕಜಿಲ್ಲಾಧಿಕಾರಿಗಳು ಆಟೋಟ ಸ್ಪರ್ಧೆಗೆ ಚಾಲನೆ ನೀಡಿದರು.

ಜಿಪಂ ಸಿಇಒ ಮಹಮ್ಮದ್‌ ರೋಷನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು,ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಮಲ್ಲಿಕಾರ್ಜುನ ಬಾಲದಂಡಿ, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ನಿವೃತ್ತಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಾಟೀಲಸೇರಿದಂತೆ ಜಿಲ್ಲೆಯ ವಿವಿಧ ಠಾಣೆಯ ಪೊಲೀಸ್‌ಅಧಿಕಾರಿಗಳು, ಗಣ್ಯರು ಇದ್ದರು.ಖವೈಎಸ್‌ಪಿ ವಿಜಯಕುಮಾರ ಸಂತೋಷಸ್ವಾಗತಿಸಿದರು. ರಾಣೆಬೆನ್ನೂರು ಡಿಎಸ್‌ಪಿ, ಟಿ.ವಿ. ಸುರೇಶ ವಂದಿಸಿದರು.

ಹಬ್ಬ ಹರಿದಿನಗಳಲ್ಲಿ ತನ್ನ ಕುಟುಂಬದಿಂದ ದೂರ ಉಳಿದನಾಗರಿಕರ ನೆಮ್ಮದಿಗಾಗಿ ಕೆಲಸಮಾಡುವಪೊಲೀಸರಿಗೆ ದೈಹಿಕ ಮತ್ತು ಮಾನಸಿಕ ದೃಢತೆ ಕಾಯ್ದುಕೊಳ್ಳುವುದು ಅವಶ್ಯವಾಗಿದೆ. ಕ್ರೀಡಾ ಚಟುವಟಿಕೆಯಿಂದ ಒಳ್ಳೆಯ ದೈಹಿಕ-ಮಾನಸಿಕ ಆರೋಗ್ಯ ದೃಢತೆ ಕಾಯ್ದುಕೊಳ್ಳಬಹುದು. –  ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.