ಮುಚ್ಚಿದ ಕನ್ನಡ ಶಾಲೆ ಆರಂಭಕ್ಕೆ ಕ್ರಮ
ಕಸಾಪ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾಡೋಜ ಡಾ| ಮಹೇಶ ಜೋಶಿ ಭರವಸೆ
Team Udayavani, Mar 3, 2021, 6:56 PM IST
ಹೊಸಪೇಟೆ: ರಾಜ್ಯದಲ್ಲಿ ಮುಚ್ಚಿದ ಕನ್ನಡ ಶಾಲೆ ಪುನರ್ ಆರಂಭ, ಯಾವುದೇ ಕನ್ನಡ ಶಾಲೆ ಮುಚ್ಚದಂತೆ ಕ್ರಮ ಕೈಗೊಳ್ಳುವೆ ಎಂದು ನಾಡೋಜ ಡಾ| ಮಹೇಶ ಜೋಶಿ ಹೇಳಿದರು.
ನಗರದಲ್ಲಿ ಅಮರಾವತಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಸಾಪಕ್ಕೆ ಮೇ 9ರಂದು ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿರುವೆ. ಕನ್ನಡ ಕಟ್ಟುವ ಕಾರ್ಯಕ್ಕಾಗಿ ಚುನಾವಣೆಗೆ ಕಣಕ್ಕಿಳಿಯುತ್ತಿರುವೆ. ಕನ್ನಡ ಅನ್ನದ ಭಾಷೆಯಾಗಬೇಕು. ಯಾವುದೇ ಕನ್ನಡ ಶಾಲೆ ಮುಚ್ಚದಂತೆ ನೋಡಿಕೊಳ್ಳುವೆ. ಮುಚ್ಚಿರುವ ಶಾಲೆಗಳನ್ನು ಪುನರಾರಂಭಿಸಲು ಶ್ರಮಿಸುತ್ತೇನೆ ಎಂದರು.
ಪರಿಷತ್ತು ಕೇವಲ ಕನ್ನಡಕ್ಕೆ ಮಾತ್ರ ಸಿಮಿತಗೊಳಿಸದೇ ಜಾನಪದ, ನಾಟಕ, ರಂಗಭೂಮಿ ಹಾಗೂ ಕಲೆಗಳನ್ನು ಉಳಿಸಿ ಬೆಳೆಸುವಂತ ಕೆಲಸ ಮಾಡುವೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ಕನ್ನಡ ಭವನ ನಿರ್ಮಾಣದ ಗುರಿ. ಮಹಿಳೆಯರ ಅಧ್ಯಕ್ಷತೆಯಲ್ಲಿ ಮುಂದಿನ ಎರಡು ಸಮ್ಮೇಳನ ನಡೆಸುವ ಚಿಂತನೆ ನಡೆಸಲಾಗಿದೆ. ಪರಿಷತ್ತಿನ ಸದಸ್ಯತ್ವ ಶುಲ್ಕವನ್ನು 250ಕ್ಕೆ ಇಳಿಸುವೆ. ಸುಪ್ರೀಂಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಷತ್ತಿನ ನಿಯಮಗಳ ಬದಲಾವಣೆ ತರಲು ಪ್ರಯತ್ನಿಸುವೆ ಎಂದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಮಾತನಾಡಿ, ದೂರದರ್ಶನದ ಚಂದನ ವಾಹಿನಿಯ ಮೂಲಕ ಕನ್ನಡ ಕಟ್ಟುವ ಕೆಲಸವನ್ನು ಮಹೇಶ ಜೋಶಿ ಮಾಡಿದ್ದಾರೆ. ಅನೇಕ ಸ್ತರಗಳಲ್ಲಿ ಕೆಲಸ ನಿರ್ವಹಿಸಿರುವ ಅವರಿಗೆ ಅಪಾರ ಅನುಭವವಿದೆ. ಕನ್ನಡದ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ಜೋಶಿ ಅವರು ಪರಿಷತ್ತಿನ ಚುಕ್ಕಾಣಿ ಹಿಡಿದರೆ ಅದಕ್ಕೆ ಹೊಸ ಸ್ವರೂಪ ಸಿಗಬಹುದು ಎಂದು ಭರವಸೆ ವ್ಯಕ್ತಪಡಿಸಿದರು.
ಪ್ರಚಾರ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ನಬಿಸಾಬ್ ಕುಷ್ಟಗಿ, ಚನ್ನಬಸವ ಕೊಟಗಿ, ರೇವಣಸಿದ್ದಪ್ಪ, ಮಾಜಿ ಕಸಪಾ ತಾಲೂಕು ಘಟಕ ಅಧ್ಯಕ್ಷೆ ಸುಜಾತ, ಪ್ರಕಾಶ್ ಕುಲಕರ್ಣಿ, ಎಲ್.ಡಿ. ಜೋಷಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.