ಮಕ್ಕಳ ಹಾಲಿನ ಪುಡಿ ನುಂಗಿದ ಮೂವರು ಸಿಡಿಪಿಒ ಜೈಲು ಪಾಲು

Team Udayavani, Mar 4, 2021, 9:10 PM IST

incident held at viajayapura

ವಿಜಯಪುರ: ಸರ್ಕಾರ ಅಂಗನವಾಡಿ ಮಕ್ಕಳಿಗೆ ನೀಡಿದ್ದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿದ್ದ ಪ್ರಕರಣದಲ್ಲಿ ಜಿಲ್ಲೆಯ ಇಬ್ಬರು ಸೇರಿದಂತೆ ಮೂವರು ಸಿಡಿಪಿಒ ಅಧಿಕಾರಿಗಳು ಜೈಲುಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಅಂಗನವಾಡಿ ಮಕ್ಕಳಿಗೆ ಸರ್ಕಾರ ನೀಡಿದ್ದ ಹಾಲಿನ ಪುಡಿಯನ್ನು ವಿಜಯಪುರ ನಗರ ಹಾಗೂ ಗ್ರಾಮೀಣ ಸಿಡಿಪಿಒಗಳು ಅಕ್ರಮವಾಗಿ ಮಾರಾಟಕ್ಕೆ ಮುಂದಾಗಿದ್ದರು. ಇದಕ್ಕಾಗಿ ಹಾಲಿನ ಪುಡಿಯನ್ನು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದಾಗ ಸಿಕ್ಕಿ ಬಿದ್ದಿದ್ದರು.

ಸದರಿ ಪ್ರಕರಣ 2020 ಅಕ್ಟೋಬರ್‌ 21ರಂದು ಖಚಿತ ಮಾಹಿತಿ ಮೇರೆಗೆ ಪೊಲೀಸರ ಸಹಾಯದಿಂದ ದಾಳಿ ನಡೆಸಿದ್ದ ಜಮಖಂಡಿ ಸಿಡಿಪಿಒ ಅನುರಾಧಾ ಹಾದಿಮನಿ, ಅಕ್ರಮವಾಗಿ ಹಾಲಿನ ಪುಡಿಯನ್ನು ಪತ್ತೆ ಹಚ್ಚಿದ್ದರು. ಜಮಖಂಡಿ ನಗರದ ಗೋಪಾಲ ತೇಲಿಎಂಬವರ ಕಟ್ಟಡದಲ್ಲಿ ಗಿರೀಶ ತೇಲಿ ಹಾಗೂ ಮಹಾದೇವ ತೇಲಿ ಎಂಬವರು ಅಕ್ರಮವಾಗಿ ದಾಸ್ತಾನು ಮಾಡಿದ್ದಾಗಿ ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿತ್ತು. ಈ ಕುರಿತು ಜಮಖಂಡಿ ಶಹರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣದಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಜಮಖಂಡಿಯಲ್ಲಿ ಪತ್ತೆಯಾದ ಅಂಗನವಾಡಿ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿ ವಿಜಯಪುರ ನಗರ ಹಾಗೂ ಗ್ರಾಮೀಣ ವಲಯಕ್ಕೆ ಸೇರಿದ್ದು ಎಂಬುದನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ ಪ್ರಕರಣದಲ್ಲಿ ಮಕ್ಕಳಿಗೆ ವಿತರಿಸಬೇಕಿದ್ದ ಹಾಲಿನ ಪುಡಿಯನ್ನು ಇಲ್ಲಿನ ವಿಜಯಪುರ ನಗರ ಸಿಡಿಪಿಒ ನಿರ್ಮಲಾ ಸುರಪುರ ಹಾಗೂ ಗ್ರಾಮೀಣ ಸಿಡಿಪಿಒ ಗೀತಾ ಗುತ್ತರಗಿಮಠ ಇಬ್ಬರೂ ಅಕ್ರಮವಾಗಿ ಮಾರಾಟ ಮಾಡಲು ಜಮಖಂಡಿಯಲ್ಲಿ ದಾಸ್ತಾನು ಮಾಡಿದ್ದು ಕೂಡ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಕಲಾಪದಲ್ಲಿ ‘ಒಂದು ದೇಶ- ಒಂದು ಚುನಾವಣೆ ಚರ್ಚೆ’: ಡಿ ಕೆ ಶಿವಕುಮಾರ್ ಆಕ್ರೋಶ

ಹೀಗಾಗಿ ಸದರಿ ಪ್ರಕರಣದಲ್ಲಿ ವಿಜಯಪುರ ಸಿಡಿಪಿಒಗಳಾದ ನಿರ್ಮಲಾ ಸುರಪುರ ಹಾಗೂ ಗೀತಾ ಗುತ್ತರಗಿಮಠ ಹಾಗೂ ಬಾಗಲಕೋಟೆ ಜಿಲ್ಲೆಯ ಬೀಳಗಿ ಸಿಡಿಪಿಒ ಮಹಾದೇವ ಇಸರನಾಳ ಇವರನ್ನು ಫೆ. 19ರಂದು ಬಂಧಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಈ ಮಧ್ಯೆ ಸದರಿ ಹಾಲಿನ ಪುಡಿಯ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಬಂಧಿ ತ ಮೂವರು ಸಿಡಿಪಿಒಗಳನ್ನು ಜಮಖಂಡಿ ಜೆಎಂಎಫ್‌ಸಿ ನ್ಯಾಯಾಲಯದ ಎದುರು ಹಾಜರು ಪಡಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ. ಪ್ರಕರಣದಲ್ಲಿ ಸಿಕ್ಕ ಹಾಲಿನ ಪುಡಿ ಎಷ್ಟು, ಮೌಲ್ಯವೆಷ್ಟು ಎಂಬುದನ್ನು ತನಿಖಾಧಿ  ಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಯಾವ ಮಾಹಿತಿ ನನಗಿಲ್ಲ ಎಂದು ಸದರಿ ಪ್ರಕರಣದಲ್ಲಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಜಮಖಂಡಿ ಸಿಡಿಪಿಒ ಅನುರಾಧಾ ಉದಯವಾಣಿಗೆ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.