ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

ಅಧಿಕ ರಾಗಿ ಸರಬರಾಜು, ಖರೀದಿ ಅವ್ಯವಸ್ಥೆ! ಖರೀದಿ ಕೇಂದ್ರದ ಮುಂದೆ ರೈತರ ಸಾಲು ಸಾಲು |

Team Udayavani, Mar 4, 2021, 9:38 PM IST

Kunigal

ಕುಣಿಗಲ್‌: ಕೊರೊನಾ ಭೀತಿ ನಡುವೆ ಸಾಲ ಸೋಲ ಮಾಡಿ ಬಡ್ಡಿಗೆ ಹಣ ತಂದು ರೈತರುರಾಗಿ ಬೆಳೆದಿದ್ದಾರೆ. ಅವರ ಕಷ್ಟವನ್ನು ಅರ್ಥಮಾಡಿಕೊಂಡು ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸುವಂತೆ ಶಾಸಕ ಡಾ.ಎಚ್‌.ಡಿ.ರಂಗನಾಥ್‌ ತಾಕೀತು ಮಾಡಿದರು.

ತಾಲೂಕಿನ ವಿವಿಧ ಗ್ರಾಮಗಳಿಂದ ನಿತ್ಯಸಾವಿರಾರು ಕ್ವಿಂಟಲ್‌ರಾಗಿ ಇಲ್ಲಿನ ಎಪಿಎಂಸಿಖರೀದಿ ಕೇಂದ್ರಕ್ಕೆ ಬರುತ್ತಿದೆ. ಆದರೆ ರಾಗಿಶೇಖರಣೆಗೆ ಸಮರ್ಪಕವಾದ ಗೋದಾಮುಹಾಗೂ ಸ್ಥಳಾವಕಾಶ ಕೊರತೆ ಯಿಂದಾಗಿ ರೈತರು ಪರದಾಡುವ ಪರಿಸ್ಥಿತಿನಿರ್ಮಾಣವಾಗಿದೆ ಇದನ್ನು ಅರಿತು ಶಾಸಕಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿದರು. ಸ್ಥಳಕ್ಕೆ ಭೇಟಿ ನೀಡಿದ ರೈತರ ಸಮಸ್ಯೆಯನ್ನು ಅಹವಾಲನ್ನು ಕೇಳಿ ಮರುಕಪಟ್ಟು ಆಕ್ರೋಶಗೊಂಡ ಅವರು ದೂರವಾಣಿ ಮೂಲಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್‌.ಎಂ.ಚನ್ನನಾಯಕ್‌ ಅವರನ್ನು ಸಂರ್ಪಕಿಸಿ ತರಾಟೆ ತೆಗೆದುಕೊಂಡರು.

ಶಾಸಕರು ಆಧಿಕಾರಿಗಳಿಗೆ ಸೂಚನೆ ನೀಡಿದ ಬಳಿಕ ಜಿಲ್ಲಾಧಿಕಾರಿ, ವೈ.ಆರ್‌.ಪಾಟೀಲ್‌ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಾಗಿ ಖರೀದಿ ಅವ್ಯವಸ್ಥೆ ಬಗ್ಗೆ ಮನವರಿಕೆ ಮಾಡಿಕೊಟ್ಟರು, ರೈತರ ಸಮಸ್ಯೆ ಸೂಕ್ಷವಾಗಿದೆ ಇದನ್ನು ಕೂಡಲೇ ಬಗೆಹರಿಸಬೇಕು.ಇಲ್ಲವಾದಲ್ಲಿ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚೆತುಕೊಂಡು ಕುಣಿಗಲ್‌ ಎಪಿಎಂಸಿ ಗೋದಾಮು ಹಾಗೂ ತುಮಕೂರು ಗುಬ್ಬಿಗೇಟ್‌ ಮತ್ತು ನೆಲಮಂಗಲದ ಗೋದಾಮಿನಲ್ಲಿ ಖರೀದಿಸಿದ ರಾಗಿ ಸಂಗ್ರಹಣೆಗೆ ಕ್ರಮ ಕೈಗೊಳ್ಳುವುದರ ಜೊತೆಗೆ ಹೆಚ್ಚುವರಿ ರಾಗಿ ಮತ್ತು ಲೋಡ್‌ಗಳನ್ನು ವ್ಯವಸ್ಥೆ ಮಾಡುವ ಭರವಸೆ ನೀಡಿದ ಕಾರಣ ಪ್ರತಿಭಟನೆ ಹಿಂಪಡೆದರು.

ಕೇಂದ್ರದ ಬಳಿ ಹೆಚ್ಚಿದ ರೈತರು: ಈ ಬಾರಿ ತಾಲೂಕಾದ್ಯಂತ ಉತ್ತಮ ಮಳೆಯಾಗಿ ರೈತರು ಬಂಪರ್‌ ರಾಗಿ ಬೆಳೆ ಬೆಳೆದಿದ್ದಾರೆ. ಈ ನಿಟ್ಟಿನಲ್ಲಿ ರೈತರಿಂದ ಬೆಂಬಲ ಬೆಲೆಗೆ ರಾಗಿ ಖರೀದಿಸಲು ಪಟ್ಟಣದ ಎಪಿಎಂಸಿ ಅವರಣದಲ್ಲಿ ರಾಗಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ತಾಲೂಕಿನ ವಿವಿಧಭಾಗಗಳಿಂದ ನಿತ್ಯ ನೂರಾರು ಟ್ರ್ಯಾಕ್ಟರ್‌ಗಳಲ್ಲಿ ನಿರೀಕ್ಷೆಗೂ ಮೀರಿ ಎತೇತ್ಛವಾಗಿ ರಾಗಿಯನ್ನು ರೈತರು ತರುತ್ತಿದ್ದಾರೆ. ಇದರಿಂದ ಎಪಿಎಂಸಿ ಅವರಣ, ತಂಗುದಾಣ ಮೊದಲಾದ ಕಡೆ ರಾಗಿ ಶೇಖರಣೆಯಿಂದ ತುಂಬಿ ತುಳುಕುತ್ತಿದೆ. ರಾಗಿ ಖರೀದಿ ಅಂತಿಮ ದಿನಾಂಕ ಮುಗಿಯಲಿದೆ ಎಂದು ಆತಂಕಗೊಂಡ ರೈತರು ಖರೀದಿ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತಿದ್ದು, ಸಮಸ್ಯೆ ಸೃಷ್ಟಿಯಾಗಿದೆ.

ಶಾಸಕರಿಂದ ಊಟದ ವ್ಯವಸ್ಥೆ: ತಾಲೂಕಿನ ದೂರದ ಊರುಗಳಿಂದ ಖರೀದಿ ಕೇಂದ್ರಕ್ಕೆ ಬಂದ ರೈತರು ಊಟಕ್ಕಾಗಿ ಪರದಾಡುವ ಸಮಸ್ಯೆಯನ್ನು ತಿಳಿದ ಶಾಸಕರು ತಮ್ಮ ಸ್ವಂತಿಕೆಯಿಂದ ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿ ಊಟ ಬಡಿಸಿದರು.  ಬಳಿಕ ಅವರೊಂದಿಗೆ ಊಟ ಮಾಡಿದ್ದು, ರೈತರ ಮೆಚ್ಚಿಗೆಗೆ ಪಾತ್ರರಾದರು. ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕ ಡಾ.ರಂಗನಾಥ್‌ ಅಧಿಕಾರಿಗಳ ಸಮನ್ವಯತೆಯ ಕೊರತೆಯಿಂದ್ದಾಗಿ ಸಮಸ್ಯೆಗಳು ಸೃಷ್ಟಿಯಾಗಿದೆ. ತಾಲೂಕಿನ ಎಲ್ಲಾ ಅರ್ಹ ರೈತರು ರಾಗಿ ಖರೀದಿಗೆ ಕ್ರಮಕೈಗೊಳ್ಳಲಾಗುವುದು. ಹಾಗಾಗಿ,ರೈತರು ಆತಂಕಕ್ಕೆ ಒಳಗಾಗಬಾರದೆಂದು ಮನವಿ ಮಾಡಿದರು.

ತಹಶೀಲ್ದಾರ್‌ ವಿ.ಆರ್‌.ವಿಶ್ವನಾಥ್‌,ಸಿಪಿಐ ರಾಜು, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸೌಮ್ಯ, ಎಪಿಎಂಸಿ ವ್ಯವಸ್ಥಾಪಕಿಹೇಮಲತಾ, ಆಹಾರ ಶಿರಸ್ತೇದಾರಮಲ್ಲಿಕಾರ್ಜುನಯ್ಯ ಇತರರು ಇದ್ದರು.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.