ವರದಕ್ಷಿಣೆ ಕಿರುಕುಳ : ಗೃಹಿಣಿ ಆತ್ಮಹತ್ಯೆ
Team Udayavani, Mar 4, 2021, 9:41 PM IST
ಮದ್ದೂರು: ವರದಕ್ಷಿಣೆ ಕಿರುಕುಳದಿಂದ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಯ ರಗನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಯರಗನಹಳ್ಳಿ ಗ್ರಾಮದ ಕಿರಣ್‌ಕುಮಾರ್ ಪತ್ನಿಮೇಘನಾ(27) ನೇಣಿಗೆ ಶರಣಾದ ಗೃಹಿಣಿ. ಮೃತಳಿಗೆ ಒಂದು ವರ್ಷದ ಗಂಡುವಿದೆ. ಕಳೆದ ಎರಡುವರ್ಷಗಳ ಹಿಂದೆ ಸಾದೊಳಲು ಗ್ರಾಮದಮಂಗಳ, ಬಲ್ಲೇಗೌಡ ದಂಪತಿ ಪುತ್ರಿಯನ್ನು ಯರಗನಹಳ್ಳಿ ಗ್ರಾಮದ ಮರಿಸ್ವಾಮಿ ಪುತ್ರಕಿರಣ್‌ಕುಮಾರ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿ ಸಣ್ಣಪುಟ್ಟ ವಿಚಾರಗಳಿಗೆಲ್ಲ ಜಗಳತೆಗೆದು ಪ್ರತಿನಿತ್ಯ ಮನೆಯಲ್ಲಿ ವರದಕ್ಷಿಣೆ ತರುವಂತೆ ಮಾನಸಿಕ ಕಿರುಕುಳ ನೀಡುವ ಜತೆಗೆ ಕುಟುಂಬಸ್ಥರು ಮೇಘನಾ ಮೇಲೆ ಹಲ್ಲೆ ಮಾಡಿದ್ದರು. ಬುಧವಾರ ಪತಿಪತ್ನಿ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮನನೊಂದ ಮೇಘನಾ ಮನೆಕೊಠಡಿಯೊಂದರಲ್ಲಿ ನೇಣಿಗೆ ಶರಣಾಗಿದ್ದು, ಈ ಸಂಬಂಧ ಪತಿ ಕಿರಣ್‌ಕುಮಾರ್ ಸೇರಿದಂತೆ ಈತನ ಪೋಷಕರನ್ನು ಕೆಸ್ತೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಡಿವೈಎಸ್‌ಪಿ ಲಕ್ಷ್ಮೀ ನಾರಾಯಣ ಪ್ರಸಾದ್ ಹಾಗೂ ವೃತ್ತನಿರೀಕ್ಷಕ ಕೆ.ಆರ್. ಪ್ರಸಾದ್ ಭೇಟಿ ನೀಡಿಅಗತ್ಯ ಕ್ರಮವಹಿಸಿದ್ದಾರೆ. ಈ ಸಂಬಂಧಮೃತಳ ತಂದೆ ಬಲ್ಲೇಗೌಡ ನೀಡಿದ ದೂರಿನಮೇರೆಗೆ ಕೆಸ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.