ಸುಲಲಿತ ಜೀವನ ಸೂಚ್ಯಂಕ ಹೊಂದಿದ ದೇಶದ ನಗರಗಳ ಯಾದಿ : ಮಂಗಳೂರಿಗೆ 20ನೇ ಸ್ಥಾನ
Team Udayavani, Mar 4, 2021, 11:55 PM IST
ಮಂಗಳೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ 2020ನೇ ಸಾಲಿನ ಸುಲಲಿತ ಜೀವನ ಸೂಚ್ಯಂಕ ಹೊಂದಿರುವ ನಗರಗಳ ಪಟ್ಟಿಯಲ್ಲಿ ಮಂಗಳೂರು 20ನೇ ಸ್ಥಾನ ಗಳಿಸಿದ್ದು, ಪುರಸಭೆಯ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ 42ನೇ ಸ್ಥಾನ ಪಡೆದಿದೆ.
10 ಲಕ್ಷ ಜನಸಂಖ್ಯೆಯೊಳಗಿನ ನಗರಗಳ ಈ ಸ್ಪರ್ಧೆಯಲ್ಲಿ ಮಂಗಳೂರು ಸ್ಪರ್ಧಿಸಿತ್ತು. ಗುರುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರದೀಪ್ ಸಿಂಗ್ ಪುರಿ ಅವರು ಫಲಿತಾಂಶ ಪ್ರಕಟಿಸಿದರು.
ದೇಶದ ಸ್ಮಾರ್ಟ್‌ಸಿಟಿ ಮಿಷನ್ ನಗರಗಳು ಪ್ರಮುಖ ಮೂಲ ಸೌಕರ್ಯ ಒದಗಿಸುವ, ನಾಗರಿಕರಿಗೆ ಸುಲಲಿತ ಜೀವನಮಟ್ಟ ನೀಡುವ ಸ್ವತ್ಛ ಮತ್ತು ಸುಸ್ಥಿರ ಪರಿಸರ ಮತ್ತು ಉತ್ತಮ ಪರಿಹಾರಗಳಿಗೆ ಸಂಬಂಧಿಸಿ ಉತ್ತೇಜಿಸುವ ದೃಷ್ಟಿಯಿಂದ ಈ ಸಮೀಕ್ಷೆ ನಡೆಸಲಾಗುತ್ತದೆ.
ಸಮೀಕ್ಷೆ ಆನ್‌ಲೈನ್ ಮೂಲಕ 2020ರ ಫೆ. 1ರಿಂದ ಆರಂಭವಾಗಿ, ಫೆ. 29ರ ವರೆಗೆ ನಡೆದಿತ್ತು. ನಗರದಲ್ಲಿನ ಕುಡಿಯುವ ನೀರು, ರಸ್ತೆ, ಶಿಕ್ಷಣ, ಸಾರಿಗೆ ವ್ಯವಸ್ಥೆ, ಒಳಚರಂಡಿ ಸಹಿತ ಒಟ್ಟು ಮೂಲ ಸೌಕರ್ಯಗಳ ಬಗ್ಗೆ 22 ಪ್ರಶ್ನೆಗಳನ್ನು ಕೇಳಲಾಗಿತ್ತು.
ಮಂಗಳೂರು ಪಡೆದ ಅಂಕ
ವಾಸಯೋಗ್ಯ ನಗರ 53.59
ಜೀವನ ಗುಣಮಟ್ಟ 54.78
ಆರ್ಥಿಕ ಸಾಮರ್ಥ್ಯ 11.96
ಸುಸ್ಥಿರತೆ 50.31
ಸಾರ್ವಜನಿಕರ ಸಹಭಾಗಿತ್ವ 76.40
ಪುರಭೆಯ ಕಾರ್ಯಕ್ಷಮತೆ 38.16
ಸೇವೆ 52.61
ಹಣಕಾಸು ವಿಭಾಗ 56.58
ತಾಂತ್ರಿಕತೆ 18.70
ಯೋಜನೆ 15.67
ಆಡಳಿತ 31.04
ಹೊಸದಿಲ್ಲಿಯಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಇದರ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು. ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಸ್ಮಾರ್ಟ್ ಸಿಟಿ ಎಂಡಿ ಪ್ರಶಾಂತ್ ಕುಮಾರ್ ಮಿಶ್ರಾ, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಸ್ಮಾರ್ಟ್‌ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.
6.5 ಸಾವಿರಕ್ಕೂ ಮಿಕ್ಕಿ ನಾಗರಿಕರು ಭಾಗಿ :
ನಗರದ 6,500ಕ್ಕೂ ಅಧಿಕ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬೆಳಗಾವಿ, ತುಮಕೂರು, ಶಿವಮೊಗ್ಗದಲ್ಲಿಯೂ ಇದೇ ರೀತಿಯ ಸಮೀಕ್ಷೆ ನಡೆದಿತ್ತು.
ಬೆಂಗಳೂರು ನಂ.1 :
ಹೊಸದಿಲ್ಲಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯವು ಬಿಡುಗಡೆ ಮಾಡಿರುವ ಸುಲಲಿತ ಜೀವನ ಸೂಚ್ಯಂಕದ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನ ಪಡೆದಿದೆ. 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳ ಪೈಕಿ ಅದು ಮೊದಲ ಸ್ಥಾನ ಪಡೆದಿದ್ದರೆ, ಹುಬ್ಬಳ್ಳಿ-ಧಾರವಾಡ 37ನೇ ಸ್ಥಾನ ಗಳಿಸಿದೆ.
10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆ 9ನೇ ಸ್ಥಾನ ಪಡೆದುಕೊಂಡಿದೆ. ಈ ಪಟ್ಟಿಯಲ್ಲಿ ಶಿಮ್ಲಾಕ್ಕೆ ಮೊದಲ ಸ್ಥಾನ ಸಿಕ್ಕಿದೆ.
ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಸ್ಮಾರ್ಟ್ ಸಿಟಿ ಮಿಶನ್‌ನಡಿಯ ಒಟ್ಟು 111 ನಗರಗಳು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದವು. ಒಟ್ಟು 15 ಅಂಶಗಳನ್ನು ಮುಂದಿಟ್ಟುಕೊಂಡು ಮೌಲ್ಯಮಾಪನ ಮಾಡಲಾಗಿದೆ. ಆದರೆ ಪಾಲಿಕೆಗಳ ಲೆಕ್ಕಾಚಾರದಲ್ಲಿ ಬಿಬಿಎಂಪಿ 31ನೇ ಸ್ಥಾನ ಗಳಿಸಿದೆ.
ಟಾಪ್ 5 ನಗರಗಳು :
ನಗರ ಅಂಕ
- ಬೆಂಗಳೂರು 66.70
- ಪುಣೆ 66.27
- ಅಹ್ಮದಾಬಾದ್ 64.87
- ಚೆನ್ನೈ 62.61
- ಸೂರತ್ 61.73
- 10 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಬೆಂಗಳೂರು ಟಾಪ್
- ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ 37ನೇ ಸ್ಥಾನ
- 10 ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ ನಗರಗಳ ಪಟ್ಟಿಯಲ್ಲಿ ದಾವಣಗೆರೆಗೆ 9ನೇ ಸ್ಥಾನ
ಜೀವನ ಸೂಚ್ಯಂಕ ಮತ್ತು ಪುರಸಭೆಯ ಕಾರ್ಯಕ್ಷಮತೆ ವಿಭಾಗ ಫಲಿತಾಂಶದಲ್ಲಿ ಮಂಗಳೂರು ನಗರ ಕ್ರಮಬದ್ಧವಾಗಿ 20 ಮತ್ತು 42ನೇ ಸ್ಥಾನ ಗಿಟ್ಟಿಸಿದೆ. ಸೂಚ್ಯಂಕ ನಿರ್ಧರಿಸಲು ಕಳೆದ ವರ್ಷ ಸರ್ವೇ ನಡೆದಿತ್ತು. ಯಾವುದೇ ನಗರ ರ್‍ಯಾಂಕ್ ಪಟ್ಟಿಯಲ್ಲಿ ಮೇಲೇರಲು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅತೀ ಮುಖ್ಯ. ಮುಂದೆಯೂ ಈ ರೀತಿಯ ಸರ್ವೇ ನಡೆಯಲಿದ್ದು, ನಗರವಾಸಿಗಳ ಪಾಲ್ಗೊಳ್ಳುವಿಕೆಯಿಂದ ಹೆಚ್ಚಿನ ರ್‍ಯಾಂಕ್ ಗಳಿಸಲು ಸಾಧ್ಯ. ಬೆಂಗಳೂರು ನಗರದಲ್ಲಿ ಯಾವ ವಿಚಾರವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂಬುದನ್ನು ಪರಿಶೀಲಿಸಿ ಅದನ್ನು ಇಲ್ಲಿಯೂ ಪರಿಗಣನೆಗೆ ತೆಗೆದುಕೊಳ್ಳುತ್ತೇವೆ.-ಪ್ರೇಮಾನಂದ ಶೆಟ್ಟಿ, ಮಂಗಳೂರು ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.