ಸಿಡಿ ಪ್ರಕರಣ : ಸಂತ್ರಸ್ತೆ ಹೇಳಿಕೆ ಮುಖ್ಯ
ಯುವತಿಗೆ ಪೊಲೀಸರು ನೋಟಿಸ್ ನೀಡುವ ಮೂಲಕ ಕರೆಸಿ ವಿಚಾರಣೆ ಮಾಡಬೇಕು: ಸತೀಶ ಜಾರಕಿಹೊಳಿ
Team Udayavani, Mar 5, 2021, 5:14 PM IST
ಗೋಕಾಕ: ರಮೇಶ ಸಿಡಿ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಹೇಳಿಕೆ ಅತಿ ಮುಖ್ಯ. ಪೊಲೀಸರು ತನಿಖೆ ನಡೆಸಬೇಕು. ಯುವತಿಗೆ ನೋಟಿಸ್ ನೀಡುವ ಮೂಲಕ ಕರೆಸಿ ವಿಚಾರಣೆ ಮಾಡಬೇಕು. ಬೇರೆಯಾರೇ ದೂರು ಕೊಟ್ಟರೂ ಅದು ಪ್ರಯೋಜನವಾಗಲ್ಲ, ಯುವತಿ ಹೇಳಿಕೆಯೇ ಪ್ರಮುಖವಾಗಿರುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗುರುವಾರ ಸುದ್ದಿಗಾರರ ಜತೆ ಮಾತನಾಡಿ, ರಮೇಶ ಜಾರಕಿಹೊಳಿ ಯಾರ ಮಾತುಗಳನ್ನು ಕೇಳುವ ಸ್ಟೇಜ್‌ನಲ್ಲಿ ಇರಲಿಲ್ಲ. ಈ ಪರಿಸ್ಥಿತಿಯಲ್ಲಿ ಜಾರಕಿಹೊಳಿ ಕುಟುಂಬ ಒಂದೇ ಎಂದು ಹೇಳಲು ಆಗಲ್ಲ. ಗೋಕಾಕದಲ್ಲಿ ಪರಿಸ್ಥಿತಿ ಏನಿದೆ, ಜಾರಕಿಹೊಳಿ ಕುಟುಂಬವನ್ನು ಯಾರು ನಡೆಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಮೇಶ ಅವರು ವೈಯಕ್ತಿಕವಾಗಿ ಇದ್ದಾರೆ. ಅಳಿಯ ಅಂಬಿರಾವ ಪಾಟೀಲ ಮಾತು ಬಿಟ್ಟರೆ ಯಾರ ಮಾತನ್ನೂ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಪಕ್ಷ ಯಾವುದೇ ಇದ್ದರೂ ಇಂತಹ ಘಟನೆಗಳು ನಡೆಯಬಾರದು. ಹಾಗೆ ಏನಾದರೂ ಇದ್ದರೆ ನೇರವಾಗಿ ಪೊಲೀಸ್ ಠಾಣೆಗೆ ದೂರು ನೀಡಿ, ತನಿಖೆ ನಡೆಸುವಂತೆ ಆಗ್ರಹಿಸಬೇಕು. ಅದನ್ನು ಬಿಟ್ಟು ಇಂತಹ ಪ್ರಕರಣಗಳನ್ನು ರಸ್ತೆಗೆ ತರಬಾರದು. ಸಿಡಿ ಪ್ರಕರಣ ಮುಗಿದ ವಿಚಾರ. ಈಗಾಗಲೇ ರಮೇಶ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಬಂಧಪಟ್ಟವರಿಗೆ ಪೊಲೀಸರು ನೋಟಿಸ್ ನೀಡಿ, ತನಿಖೆ ನಡೆಸಬೇಕು. ಆಗ ಸತ್ಯಾಂಶ ಹೊರಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.