ಡ್ರಗ್ ಕೇಸ್: 70 ಸಾವಿರ ಪುಟಗಳ ಆರೋಪ ಪಟ್ಟಿ
Team Udayavani, Mar 6, 2021, 6:30 AM IST
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಸಂಬಂಧಿಸಿದ ಡ್ರಗ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿ, ಸೋದರ ಶೋವಿಕ್ ಸೇರಿ ಇತರರನ್ನು ಆರೋಪಿಗಳೆಂದು ಉಲ್ಲೇಖೀಸಿ, ಎನ್ಸಿಬಿ ಶುಕ್ರವಾರ 70 ಸಾವಿರ ಪುಟಗಳ (50 ಸಾವಿರ ಪುಟಗಳು ಡಿಜಿಟಲ್ ರೂಪದಲ್ಲಿದೆ) ಆರೋಪಪಟ್ಟಿಯನ್ನು ಸಲ್ಲಿಸಿದೆ.
ಸುಮಾರು 6 ತಿಂಗಳ ತನಿಖೆಯ ಬಳಿಕ ವಿಶೇಷ ಕೋರ್ಟ್ಗೆ ಈ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಇದರಲ್ಲಿ ಬಾಲಿವುಡ್ನ ಇತರ ತಾರೆಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಸೇರಿದಂತೆ 200 ಮಂದಿಯ ಹೇಳಿಕೆಗಳನ್ನೂ ಉಲ್ಲೇಖೀಸಲಾಗಿದೆ ಎಂದು ಎನ್ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಅನೂಜ್ ಕೇಶ್ವಾನಿ ಮತ್ತು ಅಜಂಜುಮ್ಮನ್ ಎಂಬವರನ್ನು ಪ್ರಮುಖ ಆರೋಪಿಗಳೆಂದು ಪರಿಗಣಿಸಲಾಗಿದೆ. ರಿಯಾ ವಿರುದ್ಧ ಡ್ರಗ್ಸ್ ಖರೀದಿ ಮತ್ತು ಹಣಕಾಸು ಪೂರೈಕೆಯ ಆರೋಪ ಹೊರಿಸಲಾಗಿದೆ. ಅವರ ತಮ್ಮ ಶೋವಿಕ್ ವಿರುದ್ಧ ವಾಟ್ಸ್ ಆ್ಯಪ್ ಚಾಟ್ಗಳು, ಧ್ವನಿ ಮಾದರಿಗಳು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು, ಡಿಲೀಟ್ ಮಾಡಲಾದ ಸಂದೇಶಗಳು ಮತ್ತಿತರ ಸಾಕ್ಷ್ಯಗಳನ್ನು ಎನ್ಸಿಬಿ ಒದಗಿಸಿದೆ.
ಅಮಲು ಪದಾರ್ಥಗಳ ಖರೀದಿ, ಪೂರೈಕೆ ಮಾತ್ರವಲ್ಲದೇ ಕೆಲವು ಆರೋಪಿಗಳ ವಿರುದ್ಧ ಡ್ರಗ್ಸ್ ಕಳ್ಳಸಾಗಣೆಗೆ ಹಣಕಾಸು ಪೂರೈಸಿದ ಆರೋಪಗಳನ್ನೂ ಹೊರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.