ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್
Team Udayavani, Mar 6, 2021, 9:48 AM IST
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಆರೋಗ್ಯ ಸಚಿವ ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ವಿರುದ್ಧ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಹಾಗಾಗಿ ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದಿದ್ದಾರೆ.
ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವಿ ಎಂದಿದ್ದಾರೆ.
ಇದನ್ನೂ ಓದಿ:ವಿಪಕ್ಷಗಳ ಅಡ್ಡಿ : ಚರ್ಚೆಯಾಗದ ಒಂದು ರಾಷ್ಟ್ರ- ಒಂದು ಚುನಾವಣೆ
ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸುಧಾಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.