ಜನ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹ !
10ರಂದು ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ! 19 ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ
Team Udayavani, Mar 6, 2021, 6:19 PM IST
ಬಳ್ಳಾರಿ: ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಹಿತಕ್ಕಾಗಿ ಮತ್ತು ಜನಸಾಮಾನ್ಯರಿಂದ ಹಣವನ್ನು ಲೂಟಿ ಹೊಡೆಯುವ ಸಲುವಾಗಿ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತರುತ್ತಿದೆ. ಈ ಕಾಯ್ದೆಗಳನ್ನು ಹಿಂಪಡೆಯುವ ಸಲುವಾಗಿ ಮಾ.10 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಸ್‌ಯುಸಿಐ (ಸಿ) ಪಕ್ಷದ ರಾಜ್ಯ ಸೆಕ್ರೆಟರಿಯಟ್ ಸದಸ್ಯ ಕೆ.ಸೋಮಶೇಖರ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಆರ್ಥಿಕ ಸಂಕಷ್ಟ ಎಂದು ರೈತರು, ಬಡವರು, ಜನಸಾಮಾನ್ಯರಿಗೆ ನೀಡುತ್ತಿದ್ದ ಸಬ್ಸಿಡಿ, ಆಹಾರ ಧಾನ್ಯದವನ್ನು ಖಡಿತ ಮಾಡಲಾಗುತ್ತಿದೆ. ಬೇಳೆ, ಸಕ್ಕರೆ, ಅಡುಗೆ ಎಣ್ಣೆ ಮೊದಲಾದವನ್ನು ನಿಲ್ಲಿಸಿದೆ. ಒಂದು ಕಡೆ ಜನರಿಗೆ ನೀಡುವುದನ್ನು ನಿಲ್ಲಿಸಿ ಮತ್ತೂಂದೆಡೆ ಅಡುಗೆ ಅನಿಲ, ತೈಲ ಬೆಲೆ ಹೆಚ್ಚಿಸಿ ಬಡಜನರ ಹೊಟ್ಟೆ ಮೇಲೆ ಬರೆ ಎಳೆಯ ತೊಡಗಿದೆ. ರೈತರನ್ನು ಕಾರ್ಪೊರೇಟ್ ಮಾಲೀಕರ ಹಿಡಿತಕ್ಕೆ ಸಿಲುಕಿಸುವ ಕಾನೂನು ಜಾರಿಗೆ ತಂದು ದೇಶದ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಜನರ ಆದಾಯ ಕುಸಿಯುತ್ತಿದ್ದರೆ ಮುಕೇಶ್ ಅಂಬಾನಿ ಆದಾಯ ತಿಂಗಳಲ್ಲಿ 2.5 ಲಕ್ಷ ಕೋಟಿ ಇದ್ದುದು 5 ಲಕ್ಷ ಕೋಟಿಗೆ ಹೆಚ್ಚಿದೆ. ಅದೇ ರೀತಿ ಅದಾನಿ ಆದಾಯವೂ ಹೆಚ್ಚಳವಾಗಿದೆ. ಅದಕ್ಕಾಗಿ ಕಾರ್ಪೊರೇಟ್ ಪರವಾದ ನೀತಿಗಳನ್ನು ವಿರೋಧಿಸಲೆಂದು ಮಾ. 19ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದವರು ವಿವರಿಸಿದರು.
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರವನ್ನು ಸಹ ಖಾಸಗೀಕರಣ ಮಾಡಲು ಮುಂದಾಗಿದೆ. ಸಬ್ಸಿಡಿಯನ್ನು ಕಡಿತಗೊಳಿಸಿರುವ ಕೇಂದ್ರ ಸರ್ಕಾರ ರಾಸಾಯನಿಕ ಗೊಬ್ಬರ, ಬೀಜಗಳ ಬೆಲೆಯನ್ನು ದುಬಾರಿ ಮಾಡಿ, ಕಾಳಸಂತೆಕೋರರಿಗೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದವರು ಆರೋಪಿಸಿದರು.
ರೈಲು ಓಡಾಟವನ್ನು ಸಹಜ ಸ್ಥಿತಿಗೆ ಮರಳಿಸಿ ಪ್ರಯಾಣಿಕ ರೈಲುಗಳನ್ನು ಓಡಿಸಬೇಕು. ರಾಜ್ಯದ ವಸತಿಹೀನರಿಗೆ ನಿವೇಶನ ಹಂಚಿಕೆ ಮಾಡಲು ಸೂಕ್ತ ನೀತಿಯನ್ನು ರೂಪಿಸಬೇಕು. ಆಶಾ, ಅಂಗನವಾಡಿ, ಬಿಸಿಯೂಟ ಮೊದಲಾದ ಸ್ಕೀಮ್ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೇಂದ್ರದ ಕರಾಳ ಕೃಷಿ ಕಾಯಿದೆಗಳನ್ನು ರಾಜ್ಯದಲ್ಲಿ ಜಾರಿಗೆ ತರಬಾರದು. ಕಾರ್ಮಿಕ ವಿರೋ ಧಿ ಕಾನೂನುಗಳನ್ನು ಸಹ ಜಾರಿ ಮಾಡಬಾರದು. ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಬೇಕು. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದವರು ಪ್ರತಿಭಟನೆಯಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಎ.ದೇವದಾಸ್, ಎಂ.ಎನ್.ಮಂಜುಳಾ, ಡಿ.ನಾಗಲಕೀÒ$¾, ಡಾ| ಪ್ರಮೋದ್, ರಾಧಾಕೃಷ್ಣ ಉಪಾಧ್ಯಾ, ಶಾಂತಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.