ಬೆಂಬಲ ಬೆಲೆಯಡಿ ರೈತರ ಉತ್ಪನ್ನ ಖರೀದಿಸಿ

Team Udayavani, Mar 6, 2021, 6:45 PM IST

ಬೆಂಬಲ ಬೆಲೆಯಡಿ ರೈತರ ಉತ್ಪನ್ನ ಖರೀದಿಸಿ

ಗದಗ: ಬೆಂಬಲ ಬೆಲೆಯಲ್ಲಿ ಜಿಲ್ಲೆಯಲ್ಲಿ ಕಡ್ಲಿ ಹಾಗೂ ಜೋಳ ಖರೀದಿಸಲಾಗುತ್ತಿದ್ದು, ರೈತರಿಂದ ಹೆಚ್ಚು ಹೆಚ್ಚು ಉತ್ಪನ್ನ ಖರೀದಿಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ವರ್ಚುವಲ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರೈತರಿಗೆ ಬೆಂಬಲ ಬೆಳೆಯಲ್ಲಿ ಖರೀದಿಸುವ ಉತ್ಪನ್ನಗಳ ಬಗ್ಗೆ ಜಾಗೃತಿ ಮೂಡಿಸಿ, ರೈತರಿಂದ ಉತ್ಪನ್ನಗಳನ್ನುಖರೀದಿಸಿ ಅವರಿಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳಿಗೆ ಇತರ ಇಲಾಖೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಜಿಲ್ಲೆಯ ರೈತರಿಗೆ ಪರಿಹಾರ ನೀಡುವ ಬಗ್ಗೆ ತಾಲೂಕು ತಹಶೀಲ್ದಾರ್‌ರು ಶೀಘ್ರವಾಗಿ ಕಾರ್ಯ ನಿರ್ವಹಿಸಲು ಸೂಚಿಸಿ ರೈತರಿಗೆ ಪರಿಹಾರ ನೀಡಬೇಕೆಂದು ಹೇಳಿದರು.

ಮೂರನೇ ಹಂತದ ಕೋವಿಡ್‌ ಲಸಿಕೆ ನೀಡುವ ಕಾರ್ಯ ಜಿಲ್ಲೆಯಲ್ಲಿ ಆರಂಭವಾಗಿದ್ದು, ತಾಲೂಕುಆಡಳಿತ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮುಡಿಸುವ ಕಾರ್ಯ ಮಾಡಬೇಕು. 60 ವರ್ಷ ಮೇಲ್ಪಟ್ಟ ಎಲ್ಲರಿಗೂಲಸಿಕೆ ವಿತರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 8 ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ನೋಂದಣಿ ಬಗ್ಗೆ ಅರಿವು ಮೂಡಿಸಿ, ಲಸಿಕೆ ಪಡೆಯಲು ಪ್ರೇರೇಪಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|ಸತೀಶ್‌ ಬಸರಿಗಿಡದ ಮಾತನಾಡಿ, ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರದಿಂದ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ಲಸಿಕೆ ನೀಡಿಕೆಬಗ್ಗೆ ಗುರಿ ನಿಗದಿಪಡಿಸಿಕೊಂಡು ಪ್ರಗತಿ ಸಾಧನೆ ಮಾಡಲಾಗುವುದು ಎಂದರು.

ಸಕಾಲ ಯೋಜನೆಯನ್ನು ಪರಿಣಾಮಕಾರಿಯಾಗಿಅನುಷ್ಠಾನಗೊಳಿಸಬೇಕು. ವಿನಾಕಾರಣ ಅರ್ಜಿತಿರಸ್ಕರಿಸದೇ ಉತ್ತಮ ಸೇವೆ ಒದಗಿಸಬೇಕು. ಸಕಾಲದಲ್ಲಿ 580 ಸೇವೆಗಳಿವೆ. ಸಾರ್ವಜನಿಕ ಸ್ಥಳಗಳಲ್ಲಿಸಕಲ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.ಜಿಲ್ಲಾಡಳಿತದ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆಸಂಬಂಧಿಸಿ ಹೆಚ್ಚಾಗಿ ಕಂದಾಯ ವಿಷಯಗಳ ಬಗ್ಗೆಹೆಚ್ಚು ಬೆಳಕು ಚೆಲ್ಲಿ, ಕಂದಾಯ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದರು.

ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಅವರು ವಿವಿಧ ಇಲಾಖಾವಾರು ಪ್ರಗತಿ ಬಗ್ಗೆ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪಟಿ.ಎಸ್‌., ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ರವಿಕುಮಾರ, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕಅಭಿಯಂತರ ಅನಿಲಕುಮಾರ ಮುದ್ದಾ, ಜಿಲ್ಲಾ ಆರ್‌.ಸಿ.ಎಚ್‌. ಅ ಧಿಕಾರಿ ಡಾ|ಬಿ.ಎಂ.ಗೋಜನೂರ, ಜಿಲ್ಲಾಧಿಕಾರಿಗಳ ಕಚೇರಿ ಶಿರಸ್ತೇದಾರ್‌ ರೇವಣಕರ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.