ಸೌಲಭ್ಯ ಸದುಪಯೋಗಕ್ಕೆ ಸಲಹೆ
Team Udayavani, Mar 6, 2021, 7:14 PM IST
ಗುರುಮಠಕಲ್: ಏಕಪೋಷಕ ಮಕ್ಕಳಿಗೆ ಹಾಗೂ ಅನಾಥ ಮಕ್ಕಳಿಗೆ ಧನಸಹಾಯಕ್ಕಾಗಿ 1098ಗೆ ಕರೆ ಮಾಡಿ ಸರ್ಕಾರದ ಸೌಲಭ್ಯ ಸದುಪಯೋಗಪಡೆದುಕೊಳ್ಳಬೇಕು ಎಂದು 1098 ಸಹಾಯವಾಣಿ ಅ ಧಿಕಾರಿ ದೇವಪ್ಪ ಹೇಳಿದರು. ಪಟ್ಟಣದ ಎಸ್‌ವಿ ಪಿಯು ವಿಜ್ಞಾನ, ಕಲಾ ಮತ್ತು ವಾಣಿಜ್ಯ ವಿಭಾಗ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 1098 ಸಹಾಯವಾಣಿಯಿಂದ ಮಕ್ಕಳಿಗೆ ಅರಿವಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಂದೆ-ತಾಯಿ ಇಲ್ಲದ ಮಕ್ಕಳಿಗೆ ಮಾಸಿಕ 1000 ರೂ. ಹಾಗೂ ಅನಾಥ ಮತ್ತು ಅಂಗವಿಕಲ ಮಕ್ಕಳಿಗೆ ವಿಶೇಷ ಸಹಾಯಧನ ಹಾಗೂ ವೈದ್ಯಕೀಯತಪಾಸಣೆ ಮಾಡಿಸಿ ವಿದ್ಯಾರ್ಥಿಗಳಿಗೆ ಕನ್ನಡಕ ಉಚಿತವಾಗಿ ವಿತರಣೆ, ಕಲಿಕೆ ಪ್ರೋತ್ಸಾಹ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 1098ಗೆ ಕರೆ ಮಾಡಿ ಸಹಾಯಪಡೆದುಕೊಳ್ಳಲು ಅವರು ವಿವರಿಸಿದರು.
1098 ಸಹಾಯವಾಣಿ ಮುಖ್ಯಸ್ಥ ನಾಗಪ್ಪ ಮಾತನಾಡಿ, ಮಕ್ಕಳ ಹಕ್ಕುಗಳ ಸದುಪಯೋಗ, ಪೋಕೊÕ ಕಾಯ್ದೆ ಹಾಗೂ ಬಾಲ್ಯ ವಿವಾಹ ತಡೆ, ಮಕ್ಕಳ ರಕ್ಷಣೆಗಳಿಗೆ ಹಲವು ಸಲಹೆ ನೀಡಿದರು.
ಸಂಸ್ಥೆ ಅಧ್ಯಕ್ಷ ಎಂ.ಬಿ. ನಾಯಕಿನ್ ಅಧ್ಯಕ್ಷತೆ ವಹಿಸಿದರು. ಸಂಸ್ಥೆ ಖಜಾಂಚಿ ಜ್ಞಾನೇಶ್ವರರೆಡ್ಡಿ ಕಾಲೇಜು ಪ್ರಾಚಾರ್ಯ ನರಸಿಂಹುಲು, ಚೈತನ್ಯ ಪದವಿ ಕಾಲೇಜು ಪ್ರಾಚಾರ್ಯ ರಾಜೇಶ್ವರರೆಡ್ಡಿ ಸೇರಿದಂತೆ ಇತರರು ಇದ್ದರು. ಉಪನ್ಯಾಸಕ ನವಾಜರೆಡ್ಡಿ ನಿರೂಪಿಸಿದರು. ಉಪನ್ಯಾಸಕ ಸಾಬರೆಡ್ಡಿ ಸ್ವಾಗತಿಸಿದರು. ಉಪನ್ಯಾಸಕ ವೀರೇಶ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.