ಮುತ್ತೂಟ್ ಫೈನಾನ್ಸ್‌ನ ಮುಖ್ಯಸ್ಥ ಮಥಾಯ್.ಜಿ. ಜಾರ್ಜ್ ನಿಧನ
Team Udayavani, Mar 6, 2021, 9:35 PM IST
ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕೇತರ ಹಣಕಾಸು ಸಂಸ್ಥೆಯಾದ (ಎನ್‌ಬಿಎಫ್ಸಿ) ಮುತ್ತೂಟ್ ಫೈನಾನ್ಸ್‌ನ ಮುಖ್ಯಸ್ಥ ಮಥಾಯ್.ಜಿ. ಜಾರ್ಜ್ ಮುತ್ತೂಟ್ (71), ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ನವದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಮುತ್ತೂಟ್, ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಚಿನ್ನದ ಮೇಲಿನ ಸಾಲ, ರಿಯಲ್ ಎಸ್ಟೇಟ್, ಮೂಲ ಸೌಕರ್ಯ, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ 20ಕ್ಕೂ ಹೆಚ್ಚು ದೊಡ್ಡ ಸಂಸ್ಥೆಗಳನ್ನು ನಡೆಸುತ್ತಿದ್ದ ಅವರು, ತಮ್ಮ ಎಲ್ಲಾ ಸಂಸ್ಥೆಗಳ ಕೇಂದ್ರ ಕಚೇರಿಯನ್ನು ಕೊಚ್ಚಿಯಲ್ಲೇ ನಿರ್ಮಿಸಿದ್ದರು. ಆದರೆ, ಹಲವಾರು ದಶಕಗಳಿಂದ ಅವರು ನವದೆಹಲಿಯಲ್ಲೇ ನೆಲೆಸಿದ್ದರು.
ಅವರ ನಿಧನದ ಬಗ್ಗೆ ಮುತ್ತೂಟ್ ಗೋಲ್ಡ್ ಲೋನ್ ಸಂಸ್ಥೆ ಶೋಕ ವಕ್ತಪಡಿಸಿದ್ದು, ಎಂ.ಜಿ. ಜಾರ್ಜ್ ಮುತ್ತೂಟ್ ನಿಧನದಿಂದ ಸಂಸ್ಥೆಗೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: ಎಡರನೇ ಡೋಸ್ ಪಡೆದ ಮೇಲೂ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ..!
ಮಣಿಪಾಲ ಕಾಲೇಜಿನ ವಿದ್ಯಾರ್ಥಿ:
ಮುತ್ತೂಟ್ ಸಮೂಹ ಸಂಸ್ಥೆಗಳ ಸಂಸ್ಥಾಪಕ ನಿನಾನ್ ಮಥಾಯ್ ಅವರ ಮೊಮ್ಮಗನಾಗಿ ಹಾಗೂ ಉದ್ಯಮಿ ಎಂ. ಜಾರ್ಜ್ ಮುತ್ತೂಟ್ ಅವರ ಪುತ್ರನಾಗಿ 1949ರ ನವೆಂಬರ್‌ನಲ್ಲಿ ಕೇರಳದ ಕೊಯೆಂಚೇ ರಿಯಲ್ಲಿ ಮಥಾಯ್ ಮುತ್ತೂಟ್, ತಮ್ಮ ಶಾಲಾ-ಕಾಲೇಜುಗಳ ಶಿಕ್ಷಣದ ನಂತರ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಿಂದ ಇಂಜಿನಿಯರಿಂಗ್ ಪದವಿ ಪಡೆದಿದ್ದರು. 1979ರಲ್ಲಿ ಕುಟುಂಬ ನಡೆಸುತ್ತಿದ್ದ ವ್ಯವಹಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು, ಮುತ್ತೂಟ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾಗಿ 1993ರಲ್ಲಿ ಅಧಿಕಾರ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.