ಪಶು ವೈದ್ಯಕೀಯ ವಿವಿ ವಿಭಜನೆಗೆ ವಿರೋಧ
ಭುಗಿಲೆದ್ದ ಸಾರ್ವಜನಿಕರ ಆಕ್ರೋಶ-ಪ್ರತಿಭಟನಾ ಮೆರವಣಿಗೆ
Team Udayavani, Mar 7, 2021, 5:37 PM IST
ಬೀದರ: ಬೀದರ ಪಶು ವೈದ್ಯಕೀಯ,ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ವಿಭಜಿಸಿ ಶಿವಮೊಗ್ಗದಲ್ಲಿ ಎರಡನೇ ವಿವಿ ಸ್ಥಾಪಿಸುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಾಗರಿಕರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಅಂಬೇಡ್ಕರ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು. ನಂಜುಂಡಪ್ಪ ವರದಿ ಅನ್ವಯ ಬೀದರನಲ್ಲಿ 2005ರಲ್ಲಿ ಪಶು ವಿಶ್ವವಿದ್ಯಾಲಯ ಸ್ಥಾಪಿಸಲಾಗಿದ್ದು, ಒಟ್ಟು 23 ಸಂಸ್ಥೆಗಳು ವಿವಿ ಅಧೀನದಲ್ಲಿವೆ. ವಿಶ್ವವಿದ್ಯಾಲಯ ಆರಂಭವಾಗಿ 16 ವರ್ಷಗಳಾದರೂ ನಿರೀಕ್ಷಿತ ಅಭಿವೃದ್ಧಿ ಆಗಿಲ್ಲ. ಸಾವಿರ ಹುದ್ದೆಗಳ ಮಂಜೂರಾತಿ ಇದ್ದರೂ ಕೇವಲ ಗುತ್ತಿಗೆ ಸಿಬ್ಬಂದಿ ಇದ್ದಾರೆ.
ಮುಖ್ಯ ಆಡಳಿತ ಕಚೇರಿ ಇಲ್ಲ. ಮೂಲಸೌಕರ್ಯಗಳ ಕೊರತೆ ಕಾರಣ ವಿವಿ ಅಧೀನದ ಕಾಲೇಜುಗಳ ಮಾನ್ಯತೆಗೆ ಸಮಸ್ಯೆಯಾಗಿದೆ ಎಂದು ದೂರಲಾಗಿದೆ. ಬೇರೆ ರಾಜ್ಯಗಳಲ್ಲಿ ಎರಡು ಪಶು ವೈದ್ಯಕೀಯ ವಿಶ್ವವಿದ್ಯಾಲಯಗಳಿಲ್ಲ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಸ್ಥಾಪಿಸಲಾದ ರಾಜ್ಯದ ಏಕೈಕ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸುವ ಬದಲು ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವುದು ಸರಿಯಲ್ಲ. ಹೊಸ ವಿವಿ ಸ್ಥಾಪನೆಯಾದರೆ ಸುಮಾರು 20 ಸಂಸ್ಥೆಗಳು ಅದರ ವ್ಯಾಪ್ತಿಗೆ ಹೋಗಲಿದ್ದು, ಇದು ಬೀದರ ವಿವಿ ಮುಚ್ಚುವ ಹುನ್ನಾರವಾಗಿದೆ. ಕೂಡಲೇ ಹೊಸ ಪಶು ವಿವಿ ಸ್ಥಾಪನೆ ತಡೆದು ಬೀದರ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ವಿಎಚ್‌ಪಿ ಜಿಲ್ಲಾಧ್ಯಕ್ಷ ಎಸ್. ರಾಮಕೃಷ್ಣನ್, ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಬಿ.ಜಿ. ಶೆಟಕಾರ, ಸದ್ಭಾವನಾ ಮಂಚ್ ಜಿಲ್ಲಾ ಸಂಚಾಲಕ ಗುರುನಾಥ ಗಡ್ಡೆ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ವೈಜಿನಾಥ ಕಮಠಾಣೆ, ಪ್ರಮುಖರಾದ ಸಿದ್ದಪ್ಪ ಫುಲಾರಿ, ಶಿವಶರಣಪ್ಪ ವಾಲಿ, ಶಕುಂತಲಾ ವಾಲಿ, ರವಿ ಮೂಲಗೆ, ಬಿ.ಎಸ್. ಕುದರೆ, ಓಂಪ್ರಕಾಶ ರೊಟ್ಟೆ, ರಾಜಕುಮಾರ ಬಿರಾದಾರ, ಗುಣವಂತರಾವ್, ರಮೇಶ ಪಾಟೀಲ, ಎಸ್.ಎಂ. ಐನಾಪುರ, ಡಾ| ಚಂದ್ರಪ್ಪ ಬಿ., ಕಿಶಣಸಿಂಗ್, ಡಾ| ಮಂಜುಳಾ, ಡಾ| ಭಾಗ್ಯಶ್ರೀ, ವೀರಭದ್ರಪ್ಪ ಉಪ್ಪಿನ್, ಚನ್ನಬಸವಣ್ಣ, ಡಾ| ಅಶ್ವಿನಿ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.