ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆ
ಮೋದಿ ಕೊಲ್ಕತ್ತಾ ರ್ಯಾಲಿಯನ್ನು ಟೀಕಿಸಿದ ಶರದ್ ಪವಾರ್
Team Udayavani, Mar 7, 2021, 6:39 PM IST
ರಾಂಚಿ : ಪಶ್ಚಿಮ ಬಂಗಾಳ ಚುನಾವಣೆ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಕೊಲ್ಕತ್ತಾದ ಬೃಹತ್ ರ್ಯಾಲಿಯಲ್ಲಿ ಭಾಗಿಯಾಗಿ, ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ. ಈ ಬಗ್ಗೆ ಟೀಕೆ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, ಮೋದಿಯವರಿಗೆ ಕೊಲ್ಕತ್ತಾಕ್ಕೆ ಹೋಗಲು ಸಮಯವಿದೆ. ಆದ್ರೆ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರನ್ನು ಭೇಟಿಯಾಗಲು ಸಮಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿ ಗಡಿಗಳಲ್ಲಿ ಕಳೆದ ನವೆಂಬರ್ ನಿಂದ ರೈತರು ಕೇಂದ್ರ ಸರ್ಕಾರ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ರಾಂಚಿಯಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಶರದ್ ಪವಾರ್, ಭಾತೃತ್ವ ಬೆಳೆಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ, ಆದ್ರೆ ಬಿಜೆಪಿಯು ದೇಶದಲ್ಲಿ ಕೋಮು ವಿಷ ಪಸರಿಸುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಗ್ರೌಂಡ್ ನಲ್ಲಿ ಭಾನುವಾರ ಮೋದಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.