ತಾಲೂಕಿನಲ್ಲಿ ಮಹಿಳಾ ಅಧಿಕಾರಿಗಳದ್ದೇ ಆಡಳಿತ


Team Udayavani, Mar 8, 2021, 4:28 PM IST

Untitled-1

ಚಿಕ್ಕನಾಯಕನಹಳ್ಳಿ: ತಾಲೂಕಿನ ಪ್ರತಿ ಕ್ಷೇತ್ರದಲ್ಲಿಯೂ ಮಹಿಳೆಯರು ಸಮರ್ಥವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದು. ಬಹುತೇಕ ಸರ್ಕಾರಿ ಇಲಾಖೆಗಳ ಉನ್ನತ ಸ್ಥಾನದಲ್ಲಿ, ತಾಪಂ, ಪುರಸಭೆ ಅಧ್ಯಕ್ಷರಾಗಿ ಆಡಳಿತ ಮಾಡುತ್ತಿರುವ ಮಹಿಳೆಯರು ಸಮರ್ಥ ಆಡಳಿತದ ಉದಾಹರಣೆಗೆ ಸಾಕ್ಷಿಯಾಗಿದ್ದಾರೆ.

ದೇಶವನ್ನೆ ಅಲ್ಲೋಲಕಲ್ಲೋಲ ಮಾಡಿದ ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಇಡೀ ತಾಲೂ ಕಿ ನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಕೊರೊನಾವನ್ನು ತಡೆಗಟ್ಟಲು ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸಿದ್ದು ಇದೇ ಮಹಿಳಾ ಅಧಿಕಾರಿಗಳು. ತಾಲೂಕಿನ ದಂಡಾಧಿಕಾರಿ, ಪೊಲೀಸ್‌ ವೃತ್ತ ನಿರೀಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇ ಶಕರು, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರು, ಬಿಸಿಎಂ ಸಹಾ ಯಕ ನಿರ್ದೇಶಕರು ಎಲ್ಲಾ ಮಹಿಳಾ ಅಧಿಕಾರಿಗಳೇ.

ತಹಶೀಲ್ದಾರ್‌ ತೇಜಸ್ವಿನಿ: ತೇಜಸ್ವಿನಿಯವರುಚಿಕ್ಕನಾಯಕನಹಳ್ಳಿ ತಹಶೀಲ್ದಾರ್‌ ಆಗಿ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು. ಕೊವೀಡ್‌ಸಂದರ್ಭದಲ್ಲಿ ಜನಸಮಾನ್ಯರು ಸಹ ಮೆಚ್ಚುವಂತೆಕೆಲಸ ನಿರ್ವಹಿಸಿದ್ದಾರೆ. ಲಾಕ್‌ ಡೌನ್‌ ಸಂದರ್ಭದಲ್ಲಿ ದೇವರಿಗೆ ಬಂದ ಕಾಣಿಕೆಯ ಸೀರೆಗಳನ್ನು ಬಡ ಮಹಿಳೆಯರಿಗೆ ಹಂಚಿದ್ದು ಹಾಗೂ ತನ್ನ ಸ್ನೇಹಿತರಿಂದ ಸಹಾಯ ಪಡೆದು ದಿನಸಿ ಸಾಮಗ್ರಿಗಳನ್ನು ನಿರ್ಗತಿಕರಿಗೆ ನೀಡುವ ಮೂಲಕ ಪ್ರಶಂಸೆಗೆ ಮಾತ್ರರಾಗಿದ್ದರು.

2ಪೊಲೀಸ್‌ ವೃತ್ತ ನಿರೀಕ್ಷಕರು ವೀಣಾ: ವೀಣಾ ಅವರು ಕಳೆದ ಒಂದು ವರ್ಷದಿಂದ ತಾಲೂಕಿನಲ್ಲಿ ಪೊಲೀಸ್‌ ವೃತ್ತ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ನೊಂದವರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ. ಜನಸ್ನೇಹಿ ಪೊಲೀಸ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು. ಲಾಕ್‌ ಡೌನ್‌ ಸಂದರ್ಭದಲ್ಲಿ ಹಗಲು ರಾತ್ರಿ ಎನ್ನದೆ ತಾಲೂಕಿನಲ್ಲಿ ಯಾವುದೆ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ. ಪೊಲೀಸ್‌ ಸಿಬ್ಬಂದಿ ಜೊತೆ ಯೂ ಸಹ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಕ್ಷೇತ್ರ

ಶಿಕ್ಷಣಾಧಿಕಾರಿ ಕಾತ್ಯಾಹಿನಿ: ಕಾತ್ಯಾಹಿನಿ ಅವರು ಸುಮಾರು 2 ವರ್ಷಗಳಿಂದ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು , ಅತ್ಯಂತ ಸರಳ ವ್ಯಕ್ತಿತ್ವ ಹೊಂದಿರುವ ಅಧಿಕಾರಿಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಹಾಗೂ ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಶ್ರಮ ಹಾಕಿದ್ದಾರೆ.

ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ: ಮಂಜುಶ್ರೀ ತಾಲೂಕಿನಲ್ಲಿ 3 ವರ್ಷಗಳಿಂದ ಮೀನು ಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮೀನುಗಾರರಿಗೆ ಸರಕಾರದಿಂದ ಸಿಗುವ ಸೌಲಭ್ಯ ತಲುಪಿಸುವ ಕೆಲಸ ಮಾಡುತ್ತಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ರೇಣುಕಾದೇವಿ: ರೇಣುಕಾದೇವಿ ಯವರು ತಾಲೂಕಿನಲ್ಲಿ 2 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು. ಎಸ್‌.ಟಿ , ಎಸ್‌.ಸಿ ಸೌಲಭ್ಯಗಳನ್ನು ಫ‌ಲಾನುಭವಿಗಳಿಗೆ ನೇರವಾಗಿ ತಲುಪುವಂತ ಕೆಲಸ ನಿರ್ವಹಿಸುತ್ತಿದ್ದು , ಇವರ ವ್ಯಾಪ್ತಿಯಲ್ಲಿ ಬರುವ ಹಾಸ್ಟಲ್‌ಗಳ ನಿರ್ವಹನೆಯಲ್ಲಿ ಯಾವುದೇ ಲೋಪ ಬಾರದಂತೆ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಸಿಗುವ ಸರ್ಕಾರದ ಸೌಲಭ್ಯವನ್ನು ತಲುಪಿಸುತ್ತಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಇಂದ್ರಮ್ಮ:

ಇಂದ್ರಮ್ಮ ನಿವೃತ್ತ ಪ್ರಾಂಶುಪಾಲರಾಗಿದ್ದು . ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ನಿರ್ಗತಿಕರ ಪರ ಧ್ವನಿ ಎತ್ತುವ ಇವರು , ನೂರಾರು ಹೋರಾಟ, ಕಾರ್ಯಾಗಾರ ನೀಡಿದ್ದು ಉತ್ತಮ ವಾಗ್ಮಿ ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಪಂ ಅಧ್ಯಕ್ಷರು ಜಯಮ್ಮ: ಜಯಮ್ಮ ತಾಲೂಕಿನ ಶೆಟ್ಟಿಕೆರೆ ನಿವಾಸಿಯಾಗಿದ್ದು ತಾಪಂ ಅಧ್ಯಕ್ಷರಾಗಿ ಜನ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಪುರಸಭೆ ಅಧ್ಯಕ್ಷರು ಪುಷ್ಪ; ಪುಷ್ಪರವರು ಪಟ್ಟಣದ ನಿವಾಸಿಯಾಗಿದ್ದು , ಪಟ್ಟಣದ ಪ್ರಥಮ ಪ್ರಜೆಯಾಗಿದ್ದಾರೆ. ಪುರಸಭೆಯ ಮಹಿಳಾ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದು. ಜನಪರ ಕೆಲಸಗಳನ್ನು ಮಾಡುವ ಉದ್ದೇಶ ಹೊಂದಿದ್ದಾರೆ.

ತಾಲೂಕು ಆಸ್ಪತ್ರೆಯ ಡಿ ಗ್ರೂಪ್‌ ಮಹಿಳಾ ನೌಕರರು, ಪುರಸಭೆಯಲ್ಲಿನ ಮಹಿಳಾ ಪೌರ ಕಾರ್ಮಿಕರು, ಮಹಿಳಾ ಪೊಲೀಸ್‌ ಸಿಬ್ಬಂದಿಯ ಕಾರ್ಯಕ್ಕೆ ಬೆಲೆಕಟ್ಟಲು ಸಾಧ್ಯವಿಲ್ಲ.

 

ಚೇತನ್‌

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಅಪಾಯಕ್ಕೆ ಎದೆಯೊಡ್ಡಿ ವಕ್ಫ್ ವರದಿ ಮಾಡಿದ್ದು ನಾನು, ಅದರಿಂದ ಹಣ ಮಾಡಿದ್ದು ಅನೇಕರು!

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ ­ಅತ್ಯಗತ್ಯ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

Zakir Hussain; ನಾದಯೋಗಿಯ ನಿನಾದ ಸ್ತಬ್ಧ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.