ಹುಲಿ ದಾಳಿಗೆ 3ನೇ ಬಲಿ : ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಹುಲಿಯ ಅಟ್ಟಹಾಸ
Team Udayavani, Mar 9, 2021, 6:10 AM IST
ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಯ ಅಟ್ಟಹಾಸ ಮುಂದುವರಿದಿದ್ದು, ಸೋಮವಾರ ವ್ಯಾಘ್ರ ದಾಳಿಯಿಂದ ಬಾಲಕ ನೋರ್ವ ಮೃತಪಟ್ಟಿದ್ದಾನೆ.
ಪೊನ್ನಂಪೇಟೆ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ತೋಟದ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹುಲಿ ದಾಳಿ ಮಾಡಿದೆ. ಬಾಲಕ ರಂಗಸ್ವಾಮಿ (8) ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ತಾತ ಕೆಂಚ (52) ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಥಮ ಚಿಕಿತ್ಸೆಯ ಅನಂತರ ಅವರನ್ನು ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
16 ದಿನಗಳಲ್ಲಿ 3ನೇ ಬಲಿ
16 ದಿನಗಳಲ್ಲಿ ಮೂವರು ವ್ಯಕ್ತಿಗಳು ಮತ್ತು 12 ಹಸುಗಳು ಹುಲಿ ದಾಳಿಗೆ ಬಲಿಯಾಗಿವೆ. ಗ್ರಾಮದಲ್ಲಿ ಆತಂಕ ನೆಲೆಸಿದ್ದು, ಗ್ರಾಮಸ್ಥರು ಹಾಗೂ ವಿವಿಧ ಸಂಘ, ಸಂಸ್ಥೆಗಳು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಶ್ರೀಮಂಗಲದ ಟಿ. ಶೆಟ್ಟಿಗೇರಿ ವ್ಯಾಪ್ತಿಯಲ್ಲಿ ಫೆ. 21ರಂದು ವಿದ್ಯಾರ್ಥಿ ಎರವರ ಅಯ್ಯಪ್ಪ (16), ಫೆ. 22ರಂದು ಕಾರ್ಮಿಕ ಮಹಿಳೆ ಚಿಣ್ಣಿ (60) ಅವರ ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿತ್ತು.
ಗುಂಡಿಕ್ಕಲು ಆದೇಶ
ಮೂವರನ್ನು ಬಲಿ ಪಡೆದಿರುವ ಹುಲಿಯ ಸೆರೆ ಅಥವಾ ಕೊನೆಯ ಪ್ರಯತ್ನವಾಗಿ ಗುಂಡಿಕ್ಕುವಂತೆ ಆದೇಶಿಸಿ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್ ಸೇರಿ ನಾಲ್ವರು ಹೈಕೋರ್ಟ್‌ಗೆ
MUST WATCH
ಹೊಸ ಸೇರ್ಪಡೆ
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.